ಕರ್ನಾಟಕ ರಾಜ್ಯಪಾಲರು ಹಾಗೂ ಬಾಗಲಕೋಟ (Bagalkot VV) ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ (Gehlot) ಅವರು ಲೋಕಭವನದ ಲಾಂಜ್ನಲ್ಲಿ (Lokabhavan) ಇಂದು ನಡೆದ ಸಮಾರಂಭದಲ್ಲಿ ಪೂಜ್ಯ ಶ್ರೀ ಗುರುಮಹಾಂತ ಸ್ವಾಮೀಜಿಗಳಿಗೆ (Gurumahantha Swamiji) ಬಾಗಲಕೋಟ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ (Doctorate) ಪದವಿಯನ್ನು ಪ್ರದಾನ ಮಾಡಿದರು.
ದಿನಾಂಕ 24.04.2026ರಂದು ನಡೆದ ಬಾಗಲಕೋಟ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪೂಜ್ಯ ಶ್ರೀ ಗುರುಮಹಾಂತ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿಗಳ ಅನುಮತಿಯಂತೆ ಲೋಕಭವನದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಭೌತಿಕವಾಗಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಶ್ರೀ ವಿಜಯಾನಂದ ಕಾಶಪ್ಪನವರ, ಬಾಗಲಕೋಟ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಆನಂದ ಎಸ್. ದೇಶಪಾಂಡೆ, ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ, ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಾರಾನಾಥ್ ಟಿ.ಸಿ., ಶಾಸಕ ಶ್ರೀ ಮನಪ್ಪ ಡಿ. ವಜ್ಜಲ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

