ನೂತನ ಜವಳಿ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಕಾರ್ಯದರ್ಶಿ ರೋಹಿಣಿ ಸಿಂಧೂರಿ.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ Textile & Apparel Policy Implementation Training
ಫೋಕಸ್‌ ತಾಲೂಕುಗಳ ಸ್ಥಳೀಯ ಸಾಮರ್ಥ್ಯಕ್ಕೆ ತಕ್ಕಂತೆ ಕಾರ್ಯಯೋಜನೆ ರೂಪಿಸಲು ಸೂಚನೆ
ಹೊಸ ಯೋಜನೆಗಳು ಮತ್ತು ಪ್ರೋತ್ಸಾಹಗಳನ್ನು ಫಲಾನುಭವಿಗಳವರೆಗೆ ತಲುಪಿಸಲು ಅಧಿಕಾರಿಗಳಿಗೆ ಕರೆ
ಬೆಂಗಳೂರು: ರಾಜ್ಯದ ಕೈಮಗ್ಗ ಮತ್ತು ಜವಳಿ ಕ್ಷೇತ್ರದ ಬೆಳವಣಿಗೆಗೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿರುವ ನೂತನ ಜವಳಿ ಮತ್ತು ಉಡುಪು ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ, ಐಎಎಸ್(Rohini Sindhoori, IAS) ಅವರು ಕೈಮಗ್ಗ ಮತ್ತು ಜವಳಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಸಿಯಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘Implementation Training for Textile & Apparel Policy’ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೀತಿಯಲ್ಲಿರುವ ಪ್ರೋತ್ಸಾಹಗಳು, ಯೋಜನೆಗಳು ಮತ್ತು ಅವಕಾಶಗಳು ಉದ್ಯಮಿಗಳು, ನೇಕಾರರು ಹಾಗೂ ಅರ್ಹ ಫಲಾನುಭವಿಗಳವರೆಗೆ ಪರಿಣಾಮಕಾರಿಯಾಗಿ ತಲುಪಬೇಕು ಎಂದರು.
“ಕರ್ನಾಟಕದಲ್ಲಿ ಜವಳಿ ಕ್ಷೇತ್ರದ ಬೆಳವಣಿಗೆಗೆ ಅಪಾರ ಅವಕಾಶಗಳಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಲಮಾಣಿ ಅವರ ಮುತುವರ್ಜಿಯಿಂದ ರೂಪಿಸಲಾದ ಈ ನೀತಿಯ ಯಶಸ್ಸು ಅದರ ಪರಿಣಾಮಕಾರಿ ಅನುಷ್ಠಾನದಲ್ಲಿ ಅಡಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ನೀತಿಯನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡು, ಸ್ಥಳೀಯ ಅವಕಾಶಗಳನ್ನು ಗುರುತಿಸಿ, ಹೊಸ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು,” ಎಂದು ರೋಹಿಣಿ ಸಿಂಧೂರಿ ಹೇಳಿದರು.
ನೂತನ ನೀತಿಯಲ್ಲಿ ಗುರುತಿಸಲಾಗಿರುವ ಫೋಕಸ್‌ ತಾಲೂಕುಗಳ ಕೈಮಗ್ಗ, ಜವಳಿ, ಕೌಶಲ್ಯ ಮತ್ತು ಉತ್ಪಾದನಾ ಸಾಮರ್ಥ್ಯವನ್ನು ಆಧರಿಸಿ ತಾಲೂಕುವಾರು ಕಾರ್ಯಯೋಜನೆ ರೂಪಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಪ್ರದೇಶದ ಪರಂಪರೆಯ ಉತ್ಪನ್ನಗಳು, ಲಭ್ಯವಿರುವ ಕೌಶಲ್ಯ, ಉದ್ಯಮ ಸಾಧ್ಯತೆಗಳು ಹಾಗೂ ಮಾರುಕಟ್ಟೆ ಅವಕಾಶಗಳನ್ನು ಗುರುತಿಸಿ, ಅವುಗಳನ್ನು ಹೊಸ ಉದ್ಯಮ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜವಳಿ ಅಭಿವೃದ್ಧಿ ಆಯುಕ್ತರಾದ ಎ.ಬಿ. ಬಸವರಾಜು, ಮಾತನಾಡಿ, ನೂತನ ನೀತಿಯಲ್ಲಿ ಕೈಮಗ್ಗ, ನೇಕಾರರು ಹಾಗೂ ಜವಳಿ ಉದ್ಯಮದ ಅಭಿವೃದ್ಧಿಗೆ ಹಲವು ಹೊಸ ಯೋಜನೆಗಳು ಮತ್ತು ಪ್ರೋತ್ಸಾಹಗಳನ್ನು ಕಲ್ಪಿಸಲಾಗಿದೆ ಎಂದರು.
“ನೀತಿಯಡಿ ಲಭ್ಯವಿರುವ ಸೌಲಭ್ಯಗಳು ಮತ್ತು ಪ್ರೋತ್ಸಾಹಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಿ, ಅರ್ಹ ಫಲಾನುಭವಿಗಳು ಮತ್ತು ಉದ್ಯಮಿಗಳು ಅವುಗಳ ಪ್ರಯೋಜನ ಪಡೆಯುವಂತೆ ಮಾಡುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿ. ಜಿಲ್ಲಾ ಮಟ್ಟದಲ್ಲಿ ನಿರಂತರ ಸಂಪರ್ಕ, ಮಾರ್ಗದರ್ಶನ ಮತ್ತು ಅನುಸರಣೆ ಅಗತ್ಯ,” ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಜವಳಿ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಸಿ.ಎಸ್. ಯೋಗೇಶ್ ಮತ್ತು ಶ್ರೀಧರ್ ನಾಯಕ್, ವ್ಯವಸ್ಥಾಪಕ ನಿರ್ದೇಶಕಿ ಸೌಮ್ಯ ಎಂ. ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಕರ್ನಾಟಕದ ಸರ್ಕಾರಿ ಸೇವೆಗಳಿಗೆ ಬಹುಭಾಷಾ ಮತ್ತು ಧ್ವನಿ ಆಧಾರಿತ ಪ್ರವೇಶದ ಯೋಜನೆ

ಕರ್ನಾಟಕ ಸರ್ಕಾರವು ಸಾರ್ವಜನಿಕ ಸೇವೆಗಳನ್ನು ಜನರಿಗೆ ಅವರ ಆಯ್ಕೆಯ ಭಾಷೆಯಲ್ಲಿ ಸುಲಭವಾಗಿ...

ಕೆನಡಾದ ಲೇಖಕಿ ಆನ್ ಕಾರ್ಸನ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಕೆನಡಾದ ಕವಯಿತ್ರಿ, ಪ್ರಬಂಧಕಾರ್ತಿ ಮತ್ತು ಅನುವಾದಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ...

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ ಕರ್ನಾಟಕದಲ್ಲಿ ಬರ...

ಆಂಧ್ರಪ್ರದೇಶದಲ್ಲಿ ತೀವ್ರ ಬರ: 21 ಜಿಲ್ಲೆಗಳ 388 ಮಂಡಲಗಳು ಬಾಧಿತ

ಆಂಧ್ರಪ್ರದೇಶ ಸರ್ಕಾರವು 21 ಜಿಲ್ಲೆಗಳ 388 ಮಂಡಲಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ...

ಹಿರಿಯ ನಟ ನಾನಾ ಪಾಟೇಕರ್ ನಿಧನ: ಚಿತ್ರರಂಗದಲ್ಲಿ ಶೋಕ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ಸಾಂಸ್ಕೃತಿಕ ಐಕಾನ್...

Topics

ಜಿಎಸ್‌ಟಿ ಅಧಿಕಾರಿಗಳ ಬಂಧನಾಧಿಕಾರ ರದ್ದು; ಪ್ರಾಸಿಕ್ಯೂಷನ್ ಮಿತಿ ₹1 ಕೋಟಿಯಿಂದ ₹5 ಕೋಟಿಗೆ ಏರಿಕೆ!

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ...

ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA.. ಆಯಣ: ದಕ್ಷಿಣಾಯನ AYANA:...

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ "ಆಹಾರ ಮತ್ತು...

Related Articles