ಬೆಂಗಳೂರು: 2026 ನೇ ಸೆಪ್ಟೆಂಬರ್ 02 ರ ಶುಕ್ರವಾರ ಗಾಂಧಿ ಜಯಂತಿ(Gandhi Jayanthi) ಹಾಗೂ ಅಕ್ಟೋಬರ್ 3 ಮತ್ತು 4ರ ವಾರಾಂತ್ಯದ ರಜಾದಿನಗಳಿರುವುದರಿಂದ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು(KSRTC) ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 850 ಹೆಚ್ಚುವರಿ ವಿಶೇಷ ವಾಹನಗಳ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದೆ.
ವಿಶೇಷ ಬಸ್ಗಳ ಕಾರ್ಯಾಚರಣೆಯ ವಿವರ:
ದಿನಾಂಕ 01.10.2026 ಮತ್ತು 02.10.2026: ಬೆಂಗಳೂರಿನಿಂದ ವಿವಿಧ ನಗರಗಳಿಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ.
ದಿನಾಂಕ 04.10.2026: ರಾಜ್ಯ ಹಾಗೂ ಅಂತರರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹಿಂತಿರುಗಲು ವಿಶೇಷ ಬಸ್ಗಳ ಕಾರ್ಯಾಚರಣೆ ನಡೆಯಲಿದೆ.
ಬಸ್ ನಿಲ್ದಾಣವಾರು ನಿರ್ಗಮನದ ವಿವರ:
ಕೆಂಪೇಗೌಡ ಬಸ್ ನಿಲ್ದಾಣ: ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ ಹಾಗೂ ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್ಗಳು ಲಭ್ಯವಿರುತ್ತವೆ.
ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಮಾರ್ಗಗಳ ಕಡೆಗೆ ಬಸ್ಗಳು ಸಂಚರಿಸಲಿವೆ.
ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ: ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಪ್ರಮುಖ ನಗರಗಳಾದ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ ಮತ್ತು ಕೋಯಿಕೋಡ್ಗೆ ಪ್ರತಿಷ್ಠಿತ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಪ್ರಯಾಣಿಕರ ಗಮನಕ್ಕೆ ಮತ್ತು ರಿಯಾಯಿತಿ ಸೌಲಭ್ಯಗಳು:
ಮುಂಗಡ ಕಾಯ್ದಿರಿಸುವಿಕೆ: ಪ್ರಯಾಣಿಕರು www.ksrtc.karnataka.gov.in ವೆಬ್ಸೈಟ್ ಮೂಲಕ ಅಥವಾ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯ ಪ್ರಮುಖ ನಗರಗಳಲ್ಲಿರುವ ಮುಂಗಡ ಕೌಂಟರ್ಗಳ ಮೂಲಕ ಟಿಕೆಟ್ ಕಾಯ್ದಿರಿಸಬಹುದು.
ಶೇಕಡಾ 5 ರಷ್ಟು ರಿಯಾಯಿತಿ: ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಬುಕ್ ಮಾಡಿದರೆ ಶೇಕಡಾ 5 ರಷ್ಟು ರಿಯಾಯಿತಿ ಸಿಗಲಿದೆ.
ಶೇಕಡಾ 10 ರಷ್ಟು ರಿಯಾಯಿತಿ: ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ಗಳನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ, ಬರುವ ಪ್ರಯಾಣ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುವುದು.
ಪಿಕ್-ಅಪ್ ಪಾಯಿಂಟ್ ಗಮನಿಸಿ: ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ತೆರಳುವ ಮುನ್ನ ತಮ್ಮ ಟಿಕೆಟ್ನಲ್ಲಿ ನಮೂದಿಸಲಾದ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್ ಹೆಸರನ್ನು ಪರಿಶೀಲಿಸಿಕೊಳ್ಳುವುದು.
ನಿಗಮದ ವ್ಯಾಪ್ತಿಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ. ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

