ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ ರಾಜ್ಯದ ಕಾಸರಗೋಡು(Kasaragodu) ಜಿಲ್ಲೆಯ ಬದಿಯಡ್ಕ ಗ್ರಾಮದ ಪೆರಡಾಲದ ಕಲ್ಲಕಳಿಯಲ್ಲಿ ನಿರ್ಮಿಸಲಾಗಿರುವ “ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಸಾಂಸ್ಕøತಿಕ ಭವನ”ದ ಉದ್ಘಾಟನೆ ಹಾಗೂ 2025-26ನೇ ಸಾಲಿನ “ಗಡಿನಾಡ ಚೇತನ ರಾಜ್ಯ ಪ್ರಶಸ್ತಿ”(“Gadinada Chetana State Award”) ಪ್ರದಾನ ಸಮಾರಂಭವನ್ನು ನವೆಂಬರ್ 30 ರಂದು ಬೆಳಿಗ್ಗೆ 10:00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಭವನದ ವಿಶೇಷತೆ ಮತ್ತು ಉದ್ದೇಶ:
ಸುಮಾರು ರೂ. 200.00 ಲಕ್ಷಗಳ (2 ಕೋಟಿ ರೂ.) ಅಂದಾಜು ವೆಚ್ಚದಲ್ಲಿ ಈ ಭವನವನ್ನು ನಿರ್ಮಿಸಲಾಗಿದೆ. ಗಡಿನಾಡ ಕನ್ನಡಿಗರ ಭಾμÉ, ಸಾಹಿತ್ಯ, ಕಲೆ ಮತ್ತು ಸಂಸ್ಕøತಿಯ ಬೆಳವಣಿಗೆಗೆ ಹಾಗೂ ಕಾಸರಗೋಡಿನ ಕನ್ನಡ ಭಾಷಿಕರ ಶೈಕ್ಷಣಿಕ, ಸಾಂಸ್ಕøತಿಕ ಮತ್ತು ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒಂದೆಡೆ ಸೇರಿ ಸಂಘಟನಾತ್ಮಕ ನಿರ್ಣಯಗಳನ್ನು ಕೈಗೊಳ್ಳಲು ಈ ಭವನವು ಮಹತ್ವದ ವೇದಿಕೆಯಾಗಲಿದೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಭವನವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಸಕ್ಕರೆ ಮತ್ತು ಜವಳಿ ಇಲಾಖೆ ಸಚಿವರಾದ ರುದ್ರಪ್ಪ ಲಮಾಣಿ ಅವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಈ ಐತಿಹಾಸಿಕ ಸಮಾರಂಭದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಸಂಸದರು, ಸ್ಥಳೀಯ ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಗಡಿನಾಡ ಕನ್ನಡಿಗರು ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

