ಸ್ವಾತಂತ್ರ್ಯೋತ್ಸವ: ಮೂರು ದಿನಗಳ ಕಾಲ ರಾಜಭವನ ಸಾರ್ವಜನಿಕ ವೀಕ್ಷಣೆಗೆ ಅವಕಾಶ

ಬೆಂಗಳೂರು 12.08.2025: 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ದಿನಾಂಕ: 16, 17 ಮತ್ತು 18, ಆಗಸ್ಟ್ 2025 ರಂದು ಒಟ್ಟು ಮೂರು ದಿನಗಳು ರಾಜಭವನ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸದರಿ ಮೂರು ದಿನಗಳು ಸಂಜೆ 6 ರಿಂದ 7.30 ಗಂಟೆಯವರೆಗೆ ವೀಕ್ಷಣೆ ಮಾಡಬಹುದಾಗಿದೆ.

ರಾಜಭವನದ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಸರ್ಕಾರದಿಂದ ವಿತರಿಸಿರುವ ಸ್ಪಷ್ಟವಾಗಿ ಭಾವಚಿತ್ರವಿರುವ ಐ.ಡಿ. ಕಾರ್ಡ್‌ ನ್ನು ಕಡ್ಡಾಯವಾಗಿ ತರುವುದು. ರಾಜಭವನದ ಪ್ರವೇಶದ ಸಂದರ್ಭದಲ್ಲಿ ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡುವುದು. ರಾಜಭವನದ ಆವರಣದೊಳಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವ ಸ್ಥಳಗಳನ್ನು ಬಿಟ್ಟು ಬೇರೆಡೆಗೆ ಪ್ರವೇಶಿಸಬಾರದು. ಸಾರ್ವಜನಿಕರು ಪ್ರವೇಶದ ಸಂದರ್ಭದಲ್ಲಿ ಮತ್ತು ಪ್ರವೇಶಿಸಿದ ನಂತರ ಭದ್ರತೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು. ಸಾರ್ವಜನಿಕರು ರಾಜಭವನದ ಆವರಣದೊಳಗೆ ಶಾಂತಿ ಮತ್ತು ನಿಶಬ್ಧ ಕಾಪಾಡುವ ಮೂಲಕ ಸಹಕರಿಸಬೇಕು.

ವಿಶೇಷ ಸೂಚನೆಗಳುಸಾರ್ವಜನಿಕರು ರಾಜಭವನದ ಪ್ರವೇಶದ ಸಂದರ್ಭದಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕ್ಯಾಮೆರಾಗಳು ಮತ್ತು ಎಲ್ಲಾ ರೀತಿಯ ಎಲೆಕ್ಟಿಕಲ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚೂಪಾದ ವಸ್ತುಗಳು ಮತ್ತು ಎಲ್ಲ ರೀತಿಯ ಮೆಟಲ್ ವಸ್ತುಗಳು, ತಿಂಡಿ-ತಿನಿಸುಗಳು, ಪ್ಲಾಸ್ಟಿಕ್ ವಸ್ತುಗಳನ್ನು, ಬೆಂಕಿಪೊಟ್ಟಣ, ಲೈಟರ್‌ಗಳು, ಎಲ್ಲಾ ರೀತಿಯ ಬ್ಯಾಗ್ ಮತ್ತು ಕೈ ಚೀಲಗಳನ್ನು, ತಂಬಾಕು ಮತ್ತು ಮಧ್ಯಪಾನ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ಸಾರ್ವಜನಿಕರ ಎಲ್ಲಾ ರೀತಿಯ ವಾಹನಗಳನ್ನು ರಾಜಭವನದ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಸಾರ್ವಜನಿಕರು ಭದ್ರತಾ ಸಿಬ್ಬಂದಿಗಳು ನೀಡುವ ಸೂಚನೆಗಳನ್ನು ಪಾಲಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles