ಸದರಿ ಜಂಟಿ ತಂಡವು 2026 ನೇ ಸೆಪ್ಟೆಂಬರ್ 02 ರಂದು ಬೆಳಿಗ್ಗೆ 11.30 ಗಂಟೆಗೆ ವಿಕಾಸಸೌಧದ ಉತ್ತರ ದ್ವಾರದಲ್ಲಿರುವ ಗಾಂಧಿ ಪ್ರತಿಮೆ ಬಳಿಯಿಂದ ಪ್ರಯಾಣ ಬೆಳೆಸಲಿದ್ದು, ಬೆಂಗಳೂರು ನಗರದ ಜಿ.ಬಿ.ಎ (GBA) ವ್ಯಾಪ್ತಿಯಲ್ಲಿ ಬರುವ ವಿವಿಧ ಪ್ರಮುಖ ಘನತ್ಯಾಜ್ಯ ಸಂರಕ್ಷಣಾ ಹಾಗೂ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ, ತ್ಯಾಜ್ಯ ಸಂಸ್ಕರಣೆಯ ಪ್ರಸ್ತುತ ಸ್ಥಿತಿಗತಿ ಮತ್ತು ನಿರ್ವಹಣಾ ವಿಧಾನಗಳನ್ನು ವಿಸ್ತೃತವಾಗಿ ಪರಿಶೀಲಿಸಲಿದೆ ಎಂದು ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಾಖೆಯ ಜಂಟಿ ನಿರ್ದೇಶಕರಾದ ಪಿ.ಸೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಾಖೆಯ ಜಂಟಿ ನಿರ್ದೇಶಕರಾದ ಪಿ.ಸೀನ, ಮೊಬೈಲ್ ದೂರವಾಣಿ ಸಂಖ್ಯೆ 099459 41789 ಅಥವಾ ಕಚೇರಿ ದೂರವಾಣಿ ಸಂಖ್ಯೆ 080 22251469 ನ್ನು ಸಂಪರ್ಕಿಸಬಹುದು.
