ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ”(Kala Sangama) ಕಾರ್ಯಕ್ರಮದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು 2026ನೇ ಸೆಪ್ಟೆಂಬರ್ 25 ರಿಂದ 27ರವರೆಗೆ “ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026”ನ್ನು(Kala Sangama Kannada Book Fair – 2026) ರವೀಂದ್ರ ಕಲಾಕ್ಷೇತ್ರ ಆವರಣ, ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿ ಹಮ್ಮಿಕೊಂಡಿದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000-00ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಸಲ್ಲಿಸುವುದು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಕಚೇರಿ ಅಥವಾ ಪ್ರಾಧಿಕಾರದ ವೆಬ್ ಸೈಟ್  https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:22.09.2026ರಂದು ಸಂಜೆ 5.00ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಇವರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಸಲ್ಲಿಸುವುದು. ಸೀಮಿತ ಮಳಿಗೆಗಳು ಲಭ್ಯವಿರುವುದರಿಂದ ಮೊದಲು ಪ್ರಾಧಿಕಾರದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ  ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂರವಾಣಿ ಸಂಖ್ಯೆ 080-22484516 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

Hot this week

ಪುಸ್ತಕದ ಪರಿಚಯ – ಕನ್ನಡ ಕಿಟ್

ಕನ್ನಡ ಕಿಟ್ (Kannada Kit) ಪೋಷಕರು ಮತ್ತು ಕನ್ನಡ ಶಿಕ್ಷಕರಿಗಾಗಿ ಇರುವ...

ಅಂಕಣಕಾರ್ತಿ, ಲೇಖಕಿ ಮಾಧುರಿ ದೇಶಪಾಂಡೆ ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು: ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ(Sree Krishna Raja)...

ಶಿಕ್ಷಣ ತಜ್ಞೆ ಪದ್ಮಾವತಿ ಕೆ.ವಿ. ಅವರಿಗೆ ‘ಟೀಚರ್ಸ್ ಟ್ರೋವ್–2026’ ಪ್ರಶಸ್ತಿ

ಬೆಂಗಳೂರು: ಕಾಡುಗೋಡಿಯ ಜನನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪದ್ಮಾವತಿ...

ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಕ್ರಿಕೆಟ್ ದಾಖಲೆಗಳೇ ಪುಡಿಪುಡಿ: ಕೇವಲ 28 ಎಸೆತಗಳಲ್ಲಿ ಶತಕ, 53 ಎಸೆತಗಳಲ್ಲಿ 204 ರನ್!

ದೋಹಾ: ಭಾರತೀಯ ಕ್ರಿಕೆಟ್‌ನ ಯುವ ಪ್ರತಿಭೆ ವೈಭವ್ ಸೂರ್ಯವಂಶಿ(Vaibhav Suryavamsi) ಮತ್ತೊಮ್ಮೆ...

Topics

ಬೆಂಗಳೂರಿನಲ್ಲಿ ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು: ಪಂಜಾಬಿ ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh's) ಅವರ...

Related Articles