ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ : ವಿವಿಧ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ (NAAC) ಎ+ ಮಾನ್ಯತೆ ಪಡೆದಿರುವ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್(Online) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ BA, B.Com, B.Sc., B.B.A, B.C.A, B.S.W ಹಾಗೂ ವಿವಿಧ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ ಪ್ರೊಗ್ರಾಮ್‍ಗಳ ಪ್ರವೇಶಾತಿಯು ಈಗಾಗಲೇ ದಿನಾಂಕ: 22.06.2026 ರಿಂದ ಪ್ರಾರಂಭವಾಗಿದೆ.

ಆಸಕ್ತ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.in ನ Online Admission Portal ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ಕರಾಮುವಿ ಪ್ರಾದೇಶಿಕ ಕೇಂದ್ರ, ಹಜ್ ಭವನ, ತಿರುಮೇನಹಳ್ಳಿ ಕ್ರಾಸ್, ಹೆಗಡೆ ನಗರ ಮುಖ್ಯ ರಸ್ತೆ, ಬೆಂಗಳೂರು ಇಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ.

ವಿಶ್ವವಿದ್ಯಾನಿಲಯವು ನಿಗದಿಪಡಿಸಿರುವ ಕೋರ್ಸ್‍ವಾರು ಶುಲ್ಕದ ವಿವರಗಳನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ಶುಲ್ಕವನ್ನು ಮಾತ್ರ ಆನ್‍ಲೈನ್‍ನಲ್ಲಿ ಪಾವತಿಸಬೇಕಾಗಿದ್ದು, ಯಾವುದೇ ಕಾರಣಕ್ಕೂ ಹೆಚ್ಚುವರಿ ಶುಲ್ಕವನ್ನು ಯಾರಿಗೂ ಪಾವತಿಸಬಾರದು. ಒಂದು ವೇಳೆ ಪಾವತಿಸಿದ್ದಲ್ಲಿ ವಿಶ್ವವಿದ್ಯಾನಿಲಯವು ಜವಾಬ್ದಾರರಾಗಿರುವುದಿಲ್ಲ.

ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ವಿನಾಯಿತಿಗಳನ್ನು ನೀಡಲಾಗಿದ್ದು, ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಅರ್ಹ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಎಕ್ಸ್ ಸರ್ವಿಸ್‍ಮನ್ ವಿದ್ಯಾರ್ಥಿಗಳಿಗೆ, ಆಟೋ ಮತ್ತು ಕ್ಯಾಬ್ ಚಾಲಕರು ಹಾಗೂ ಅವರ ಪತಿ/ಪತ್ನಿ ಮತ್ತು ಇಬ್ಬರು ಮಕ್ಕಳಿಗೆ, ಹಾಗೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಎನ್‍ಡಬ್ಲ್ಯೂಕೆಆರ್‍ಟಿಸಿ, ಕೆಕೆಆರ್‍ಟಿಸಿ ಸಂಸ್ಥೆಗಳ ನೌಕರರುಗಳಿಗೆ UG & PG  ಪದವಿಗಳಿಗೆ ಮಾತ್ರ ಶೇಕಡಾ 10% ರಷ್ಟು ರಿಯಾಯಿತಿ ಇದೆ.

ಕೋವಿಡ್-2019 ಸಾಂಕ್ರಾಮಿಕ ರೋಗದಿಂದ ಪೋಷಕರನ್ನು (ತಂದೆ/ತಾಯಿ) ಕಳೆದುಕೊಂಡ ಅರ್ಹ ವಿದ್ಯಾರ್ಥಿಗಳಿಗೆ, ಶೇ. 50 ಕ್ಕೂ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ (ಬಿ.ಎಡ್ ಮತ್ತು ಎಂ.ಬಿ.ಎ. ಕೋರ್ಸ್‍ಗಳನ್ನು ಹೊರತುಪಡಿಸಿ) ಹಾಗೂ ತೃತೀಯ ಲಿಂಗಿ  ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತÀಕೋತ್ತರ ಪದವಿಗಳಿಗೆ ಮಾತ್ರ ಪೂರ್ಣ ಶುಲ್ಕ ವಿನಾಯಿತಿ ಇದೆ.

SC/ST ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಸರ್ಕಾರದ SSP (State Scholarship Portal) ಮುಖಾಂತರ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ, ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಬೆಂಗಳೂರು ಪ್ರಾದೇಶಿಕ ಕೇಂದ್ರ, ಹಜ್ ಭವನ, ತಿರುಮೇನಹಳ್ಳಿ ಕ್ರಾಸ್, ಹೆಗಡೆನಗರ ಮುಖ್ಯ ರಸ್ತೆ, ಬೆಂಗಳೂರು-560064 ಅಥವಾ ದೂರವಾಣಿ ಸಂಖ್ಯೆ: 9448668880 ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಡಾ. ಗಿರೀಶ ಹೆಚ್.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

Topics

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು...

Related Articles