ಕೆಪಿಎಸ್‍ಸಿ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ: ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು(The Karnataka Public Commission) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಒಟ್ಟು 319 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷಾ(Competition Exam) ಆಕಾಂಕ್ಷಿಗಳಿಗೆ ಬಿಗ್ ರಿಲೀಫ್(Big Relief) ನೀಡಿದೆ.
ಸರ್ಕಾರಿ ಆದೇಶದನ್ವಯ ಗರಿಷ್ಠ ವಯೋಮಿತಿಯಲ್ಲಿ ಹೆಚ್ಚುವರಿಯಾಗಿ 5 ವರ್ಷಗಳ ಸಡಿಲಿಕೆಯನ್ನು ಅಳವಡಿಸಿಕೊಂಡು ಪರಿಷ್ಕೃತ ವಯೋಮಿತಿಯ ವಿವರಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಆಯೋಗವು ದಿನಾಂಕ: 31-07-2026 ರಂದು ಹೊರಡಿಸಿದ ಅಧಿಸೂಚನೆಯಂತೆ ಒಟ್ಟು 319 ಹುದ್ದೆಗಳ (ಉಳಿಕೆ ಮೂಲ ವೃಂದದ 297 + ಹೈದ್ರಾಬಾದ್-ಕರ್ನಾಟಕ ವೃಂದದ 22 ಹುದ್ದೆಗಳು) ಭರ್ತಿಗೆ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997ರ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗಿತ್ತು. ಆದರೆ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 262 ಸೇನೆನಿ 2025, ದಿನಾಂಕ: 29-01-2026 ರನ್ವಯ ಹೆಚ್ಚುವರಿಯಾಗಿ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಿ ಸರ್ಕಾರವು ಪ್ರಸ್ತಾವನೆ ಸಲ್ಲಿಸಿತ್ತು. ಆಯೋಗವು ಈ ಪ್ರಸ್ತಾವನೆಯನ್ನು ಅಳವಡಿಸಿಕೊಂಡು ಪ್ರಸ್ತುತ ಅಧಿಸೂಚನೆಯಲ್ಲಿ ಪರಿಷ್ಕೃತ ವಯೋಮಿತಿಯನ್ನು ನಿಗದಿಪಡಿಸಿದೆ.
ಪರಿಷ್ಕೃತ ವಯೋಮಿತಿಯ ವಿವರಗಳು (ಹೆಚ್ಚುವರಿ 5 ವರ್ಷ ಸಡಿಲಿಕೆಯ ನಂತರ):
ಕನಿಷ್ಠ ವಯೋಮಿತಿ: ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷಗಳು ಪೂರ್ಣಗೊಂಡಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ:‌ ನಿಯಮಾನುಸಾರ ಗರಿಷ್ಠ ವಯೋಮಿತಿ 35 ವರ್ಷಗಳಿದ್ದದ್ದು, ಪ್ರಸ್ತುತ 5 ವರ್ಷಗಳ ಸಡಿಲಿಕೆಯೊಂದಿಗೆ 40 ವರ್ಷಗಳಿಗೆ ಹೆಚ್ಚಳವಾಗಿದೆ.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ಈ ಮೊದಲು ಗರಿಷ್ಠ ವಯೋಮಿತಿ 38 ವರ್ಷಗಳಿದ್ದದ್ದು, ಪ್ರಸ್ತುತ 43 ವರ್ಷಗಳಿಗೆ ಹೆಚ್ಚಳವಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: ಈ ಮೊದಲು ಗರಿಷ್ಠ ವಯೋಮಿತಿ 40 ವರ್ಷಗಳಿದ್ದದ್ದು, ಪ್ರಸ್ತುತ 45 ವರ್ಷಗಳಿಗೆ ಹೆಚ್ಚಳವಾಗಿದೆ.
ಈ ಪರಿಷ್ಕೃತ ವಯೋಮಿತಿ ಸೌಲಭ್ಯವು ರಾಜ್ಯದ ಸಾವಿರಾರು ಉದ್ಯೋಗ ಆಕಾಂಕ್ಷಿಗಳಿಗೆ ಕೆಪಿಎಸ್‍ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗೆ ಹಾಜರಾಗಲು ಹೆಚ್ಚಿನ ಅವಕಾಶ ಕಲ್ಪಿಸಲಿದ್ದು, ಅರ್ಹ ಅಭ್ಯರ್ಥಿಗಳು ನಿಯಮಾನುಸಾರ ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜ್ಯೋತಿ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

ಕಾಕೋಳಿನಲ್ಲಿ ಆ. 16ರಂದು ತಂಬಿಹಳ್ಳಿ ಮಾಧವತೀರ್ಥ ಮಠದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥರ 85ನೇ ವರ್ಧಂತಿ ಮಹೋತ್ಸವ

ಶ್ರೀಮನ್ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ಚತುರ್ವೇದಭಾಷ್ಯಾಚಾರ್ಯ ಕೋಲಾರ ಜಿಲ್ಲೆಯ ತಂಬಿಹಳ್ಳಿಯ ಶ್ರೀಮನ್ಮಾಧವತೀರ್ಥ ಮಠದ...

Related Articles