ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆ: ಅಧಿಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ(The Teachers’ Constituency) ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ಘೋಷಣೆಯಾಗಿದ್ದು, ಅಧಿಕೃತ ಚುನಾವಣಾ(Official Election) ತಿಳಿವಳಿಕೆ ಪತ್ರವನ್ನು ಹೊರಡಿಸಲಾಗಿದೆ.
ನಾಮಪತ್ರ ಸಲ್ಲಿಕೆ: ಉಮೇದುವಾರರು ಅಥವಾ ಅವರ ಸೂಚಕರು 2026 ನೇ ಅಕ್ಟೋಬರ್ 06 (ಮಂಗಳವಾರ) ರೊಳಗೆ (ಸರ್ಕಾರಿ ರಜಾ ದಿನ ಹೊರತುಪಡಿಸಿ) ಯಾವುದೇ ದಿನ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 3.00 ಗಂಟೆಯೊಳಗೆ, ಪ್ರಾದೇಶಿಕ ಆಯುಕ್ತರ ಕಛೇರಿ ಬೆಂಗಳೂರು ವಿಭಾಗ, 2ನೇ ಮಹಡಿ, ಬಿ.ಎಂ.ಟಿ.ಸಿ. ಕಟ್ಟಡ, ಕೆ.ಹೆಚ್.ರಸ್ತೆ, ಶಾಂತಿನಗರ, ಬೆಂಗಳೂರು-560027 ಇಲ್ಲಿನ ಚುನಾವಣಾ ಅಧಿಕಾರಿಗಳು ಅಥವಾ ಸಹಾಯಕ ಚುನಾವಣಾಧಿಕಾರಿಗಳಾದ ಶ್ರೀ ಪೊಮ್ಮಲ ಸುನಿಲ್‌ಕುಮಾರ್ ಭಾ.ಆ.ಸೇ., ಆಯುಕ್ತರು, ಬೆಂಗಳೂರು ಉತ್ತರ ನಗರಪಾಲಿಕೆ ಇವರಿಂದ ನಾಮಪತ್ರಗಳನ್ನು ಪಡೆದುಕೊಂಡು,  ಭರ್ತಿ ಮಾಡಿದ  ನಾಮಪತ್ರದ ನಮೂನೆಗಳನ್ನೂ ಸಲ್ಲಿಸಬಹುದು.
ನಾಮಪತ್ರಗಳ ಪರಿಶೀಲನೆ: ಸ್ವೀಕೃತವಾದ ನಾಮಪತ್ರಗಳ ಪರಿಶೀಲನೆಯು 2026 ನೇ ಅಕ್ಟೋಬರ್ 07ರ (ಬುಧವಾರ)  ಬೆಳಿಗ್ಗೆ 11.00 ಗಂಟೆಗೆ ಮೇಲ್ಕಂಡ ಸ್ಥಳದಲ್ಲಿ ನಡೆಯಲಿದೆ.
ಉಮೇದುವಾರಿಕೆ ಹಿಂತೆಗೆತ: ಸ್ಪರ್ಧೆಯಿಂದ ಹಿಂದೆ ಸರಿಯಲು ಬಯಸುವ ಅಭ್ಯರ್ಥಿಗಳು ಅಥವಾ ಅವರ ಸೂಚಕರು/ಅಧಿಕೃತ ಚುನಾವಣಾ ಏಜೆಂಟರು 2026 ನೇ ಅಕ್ಟೋಬರ್ 09 ರ (ಶುಕ್ರವಾರ) ಮಧ್ಯಾಹ್ನ 3.00 ಗಂಟೆಯ ಒಳಗಾಗಿ ತಿಳಿವಳಿಕೆ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ.
ಮತದಾನ ದಿನಾಂಕ: ಚುನಾವಣೆಯಲ್ಲಿ ಸ್ಪರ್ಧೆ ಏರ್ಪಟ್ಟಲ್ಲಿ, 2026  ನೇ ಅಕ್ಟೋಬರ್ 23 ರ (ಶುಕ್ರವಾರ)  ಬೆಳಿಗ್ಗೆ 8.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಮತದಾನ ನಡೆಯಲಿದೆ‌ ಎಂದು ಬೆಂಗಳೂರು ಶಿಕ್ಷಕರ  ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀ ಅಮ್ಲಾನ್ ಆದಿತ್ಯ ಬಿಸ್ವಾಸ್ (ಭಾ.ಆ.ಸೇ.) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles