ಪಶು ವೈದ್ಯಕೀಯ ಕಾಲೇಜಿನ ಆವರಣದಲ್ಲಿ  “ಮಾವು ಮೇಳ-2025”

ಬೆಂಗಳೂರು, ಜೂನ್‌ 14, (ಕರ್ನಾಟಕ ವಾರ್ತೆ):

 ಅಲುಮ್ನಿ ಅಸೋಸಿಯೇಷನ್, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ    “ಮಾವು ಮೇಳ-2025″ರ ಉದ್ಘಾಟನೆಯನ್ನು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ. ಎಸ್. ರಮೇಶ್ ಇವರು ನೆರವೇರಿಸಿ ಇಂದು ಮತ್ತು ನಾಳೆ ಈ ಮೇಳವು ಮಾವು ಬೆಳೆಗಾರರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ತಾಜ ಮಾವಿನಹಣ್ಣು ದೊರಕುತ್ತದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು.

ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಡಾ. ಕೆ. ಸಿ. ವೀರಣ್ಣ, ಕುಲಪತಿಗಳು, ಕ.ಪ.ಪ.ಮಿ.ವಿ.ವಿ., ಬೀದರ ಇವರು ಮಾತನಾಡಿ ಮಾವಿನ ಎಲ್ಲಾ ಜಾತಿಯ ತಳಿಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಇಂತಹ ಮೇಳಗಳನ್ನು ನಿರಂತರವಾಗಿ ಏರ್ಪಡಿಸುವುದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಅನುಕೂಲಕರವಾಗಲಿದೆ ಎಂದು ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಡಾ. ಹೆಚ್. ಎಲ್. ಹರೀಶ್, ಆಡಳಿತ ಮಂಡಳಿ ಸದಸ್ಯರು, ಕೃ.ವಿ.ವಿ., ಬೆಂಗಳೂರು ಇವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ. ಸಿ. ಜಿ. ನಾಗರಾಜು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಮತ್ತು ಅಲುಮ್ನಿ ಅಸೋಸಿಯೇಷನ್‌ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles