ರಾಷ್ಟ್ರಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 01 :ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿರುವ “Focus on News” ಎಂಬ ರಾಷ್ಟ್ರ ಮಟ್ಟದ ಪತ್ರಿಕಾ ಛಾಯಾಚಿತ್ರ ಸ್ಪರ್ಧೆಗೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಜುಲೈ 5ರವರೆಗೆ ವಿಸ್ತರಿಸಿದೆ.

ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ ರೂ.35,000/-,ರೂ.25,000/-ಹಾಗೂ ರೂ.15,000/-  ನಗದು ಬಹುಮಾನ ನೀಡಲಾಗುವುದು. ಆಯ್ದ 50 ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗುವುದು.

ಸ್ಪರ್ಧೆಯ ಷರತ್ತುಗಳು:

ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ: 01-01-2025 ರಿಂದ 31-5-2026ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು.

ಪ್ರತಿ ಸುದ್ದಿ ಛಾಯಾಚಿತ್ರಗ್ರಾಹಕರು ತಾವೇ ಚಿತ್ರಿಸಿರುವ ಹಾಗೂ ಪ್ರಕಟವಾಗಿರುವ ಯಾವುದಾದರೂ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.

National Level Photo Exhibition for Photo Journalists

ಈ ಸ್ಪರ್ಧೆಯನ್ನು ಸುದ್ದಿ ಛಾಯಾಗ್ರಾಹಕರಿಗಾಗಿ ಮಾತ್ರ ಆಯೋಜಿಸಲಾಗಿದೆ. ಪ್ರತಿಯೊಬ್ಬ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಆಯಾ ರಾಜ್ಯ ಸರ್ಕಾರಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಥವಾ ಪಿಐಬಿಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.

ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್ ಗಳು ಇರಬಾರದು. ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳು ಅಂದರೆ ಡಿಜಿಟಲ್ ಇಮೇಜ್ ಗಳನ್ನು JPEG formatನಲ್ಲಿ ಮಾತ್ರ ಸಲ್ಲಿಸಬೇಕು.

ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು 20”x30″ ಅಳತೆಯಲ್ಲಿ ಮುದ್ರಣ ಮಾಡಿಸಬೇಕಾಗಿರುವುದರಿಂದ ತಾವು ಕಳಿಸುವ ಇಮೇಜ್ ಗಳು 20’x30′” ಅಳತೆಯ, 300DPI ನಲ್ಲಿದ್ದು ಕನಿಷ್ಠ 5MB ಗಾತ್ರದಲ್ಲಿರಬೇಕು.

 ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.

ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿ ಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು. ಎಐ ಚಿತ್ರಗಳನ್ನು ಪರಿಗಣಿಸಲಾಗುವುದಿಲ್ಲ.

ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್ ಸೈಟಿನಲ್ಲಿ ಇರುವ ನಿಗದಿತ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ ಗಳನ್ನು focusonnewskma@gmail.com ಇ-ಮೇಲ್ ವಿಳಾಸಕ್ಕೆ ದಿನಾಂಕ: 05-07-2026 ರಂದು ಸಂಜೆ 5:00ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ತೀರ್ಪುಗಾರರಿದ್ದು ಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9845351766 ಹಾಗೂ 9449245980 ನ್ನು ಕರೆ ಮಾಡುವ ಮೂಲಕ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು ಎಂದು ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 02.07.2026 ಗುರುವಾರ THURSDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 02.07.2026 ಗುರುವಾರ THURESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

‘ಅಗ್ರಿ-ಟೆಕ್ ಮತ್ತು ಪ್ಲಾಂಟೇಶನ್ 5.0′ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ

ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಪ್ಲಾಂಟೇಶನ್ ಮ್ಯಾನೇಜ್ಮೆಮೆಂಟ್ (IIPMB), ICAR-ಕೇಂದ್ರೀಯ ತೋಟಗಾರಿಕಾ...

ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರು, ಜುಲೈ 01:ಏನೇ ವೈಯಕ್ತಿಕ...

Topics

ನಿತ್ಯ ಪಂಚಾಂಗ 02.07.2026 ಗುರುವಾರ THURSDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 02.07.2026 ಗುರುವಾರ THURESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

‘ಅಗ್ರಿ-ಟೆಕ್ ಮತ್ತು ಪ್ಲಾಂಟೇಶನ್ 5.0′ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ

ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಪ್ಲಾಂಟೇಶನ್ ಮ್ಯಾನೇಜ್ಮೆಮೆಂಟ್ (IIPMB), ICAR-ಕೇಂದ್ರೀಯ ತೋಟಗಾರಿಕಾ...

ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರು, ಜುಲೈ 01:ಏನೇ ವೈಯಕ್ತಿಕ...

ಕರ್ನಾಟಕದಲ್ಲಿ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸುವ/ಹಿಂಪಡೆಯುವ ಕ್ರಮದ ವಿರುದ್ಧ

ಕರ್ನಾಟಕದಲ್ಲಿ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ಮರು ಪರಿಶೀಲಿಸುವ/ಹಿಂಪಡೆಯುವ ಕ್ರಮದ...

ಗಣಿ ಭೂವಿಜ್ಞಾನ ಇಲಾಖೆಯ ರಾಜಧನ ಪಾವತಿ ಅವ್ಯವಸ್ಥೆಯಿಂದ ಗಣಿ ಗುತ್ತಿಗೆದಾರರಿಗೆ ಸಂಕಷ್ಟ

ಬೆಂಗಳೂರು:  ಅಧ್ಯಕ್ಷರಾದ ರವೀಂದ್ರ ಶೆಟ್ಟಿ(Ravindra Shetty) ಮಾತನಾಡಿ, 2023ರಲ್ಲಿ ಕಾನೂನುಬದ್ಧವಾಗಿ ಗಣಿ...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu)...

Related Articles