“ಅನ್ನ ಸೇವಾ” ಮೊಬೈಲ್ ಆ್ಯಪ್‍ಗೆ ಪ್ರಾಯೋಗಿಕವಾಗಿ ಚಾಲನೆ ನೀಡಿದ ಸಚಿವ ರಿಜ್ವಾನ್ ಅರ್ಷದ್

ಬೆಂಗಳೂರು: ಪಡಿತರ ಚೀಟಿಯ(Ration Card) ಫಲಾನುಭವಿಗಳು ಇ-ಕೆವೈಸಿ ಯನ್ನು(e-KYC) ಅಪ್‍ಡೇಟ್ ಮಾಡಿಸಲು ಅನುಕೂಲವಾಗುವಂತೆ, ಹಾಗೂ ನ್ಯಾಯಬೆಲೆ ಅಂಗಡಿ ಮುಂದೆ ಸರತಿ ಸಾಲ್ಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಸಲುವಾಗಿ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ “ಅನ್ನ ಸೇವಾ”(Anna Seva) ಮೊಬೈಲ್ ಆ್ಯಪ್‍ಗೆ ಮಾನ್ಯ ಆಹಾರ ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್(MLA Shri Rizwan Harshad) ಅವಸ್ತ್ರಿಂದು ಪ್ರಾಯೋಗಿಕವಾಗಿ ಚಾಲನೆ ನೀಡಿದರು.

ಶಿವಾಜಿ ನಗರದ ರಾಜೀವ್ ಗಾಂಧಿ ಕಾಲೋನಿಯಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಅನ್ನ ಸೇವಾ” ಮೊಬೈಲ್ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಅವರು. ಪಡಿತರ ಫಲಾನುಭವಿಗಳು ಸರಳ, ಅನುಕೂಲಕರ ಹಾಗೂ ಸುಲಭವಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ತಾವೇ ಖುದ್ದಾಗಿ ಮೊಬೈಲ್ ಆ್ಯಪ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಅಕ್ಟೋಬರ್ 20ರ ವರೆಗೆ ಇ-ಕೆವೈಸಿ ಅಪ್‍ಡೇಟ್ ಮಾಡಲು ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮೀಣ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದ್ದು, ಇನ್ನುಳಿದ ಜಿಲ್ಲೆಗಳಿಗೆ 15-20 ದಿನಗಳೊಳಗಾಗಿ ಜಾರಿ ಮಾಡಲಾಗುವುದು. ಸರ್ಕಾರವು ನಾಲ್ಕುವರೆ ಕೋಟಿ ಬಡಜನರ ಆಗುತ್ತಿರುವ ತೊಂದರೆ ಹಾಗೂ ಸಮಯದ ಮಹತ್ವವನ್ನು ಗಮನದಲ್ಲಿರಿಸಿಕೊಂಡು ಆ ಬಗ್ಗೆ ಚಿಂತನೆ ಮಾಡಿ ಈ ಆಪ್‍ನ್ನು ಜಾರಿಮಾಡಿದೆ. ಪ್ರತಿಯೊಬ್ಬ ಫಲಾನುಭವಿಗಳು ಈ ಆ್ಯಪ್‍ನ ಉಪಯೋಗ ಪಡೆದುಕೊಳ್ಳಬೇಕೆಂದರು. ರಾಜ್ಯದಲ್ಲಿ ಈವರೆಗೆ ಒಟ್ಟು 3,82,362 ಫಲಾನುಭವಿಗಳು ಒಂದು ಬಾರಿಯೂ ಇ-ಕೆವೈಸಿ ಮಾಡಿರುವುದಿಲ್ಲ ಆದ್ದರಿಂದ ಎಲ್ಲಾರೂ ತಪ್ಪದೇ ಇ-ಕೆವೈಸಿ ಮಾಡಿಕೊಳ್ಳುವಂತೆ ತಿಳಿಸಿದರು. 

ಅಕ್ಟೋಬರ್ 03 ರಂದು ರಾಷ್ಟ್ರೀಯ ದಾಳಿಂಬೆ ತಾಂತ್ರಿಕ ಸಮಾವೇಶ : ಡಾ. ಎ. ಬಿ.ಪಾಟೀಲ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles