ವಿಶೇಷ ಚೇತನರು ನಡೆಸುವ “ಮಿಟ್ಟಿ ಕೆಫೆ” ಉದ್ಘಾಟಿಸಿದ ರಾಜ್ಯಪಾಲರು

ಬೆಂಗಳೂರಿನ ಎಂಜಿ ಮಾಲ್ Mitti Cafe” Run by Persons with Disabilities ನಲ್ಲಿ ವಿಶೇಷ ಚೇತನರು ನಡೆಸಲ್ಪಡುವಂತಹ ಮಿಟ್ಟಿ ಕೆಫೆಯನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ (Governor) ಥಾವರ್ ಚಂದ್ ಗಹ್ಲೋಟ್ (Gehlot) ಅವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗೌರವಾನ್ವಿತ ರಾಜ್ಯಪಾಲರು “ವಿಶೇಷ ಚೇತನರು ಮಾನವ ಸಂಪನ್ಮೂಲದ ಅವಿಭಾಜ್ಯ ಅಂಗವಾಗಿದ್ದು, ಅವರನ್ನು ಸಮಾಜದ ಮುಖ್ಯ ವಾಹಿನಿಯೊಂದಿಗೆ ಸಂಪರ್ಕಿಸುವ ಮೂಲಕ ಅವರನ್ನು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ನಮ್ಮ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯವರ ದಕ್ಷ ನಾಯಕತ್ವದಲ್ಲಿ “ಸಬ್ಕಾ ಸಾಥ್ ಸಬ್ಕಾ ವಿಕಾಸ್” ಮಂತ್ರವನ್ನು ಅರಿತು, ವಿಶೇಷ ಚೇತನರ ಸಮಗ್ರ ಸಮಾಜದ ಸಬಲೀಕರಣಕ್ಕಾಗಿ ಭಾರತ ಸರ್ಕಾರವು ಅಭೂತಪೂರ್ವ ಮತ್ತು ಶ್ಲಾಘನೀಯ ಕೆಲಸವನ್ನು ಮಾಡುತ್ತಿದೆ ಎಂದರು.

“ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ನನಗೆ ದೊರೆತ ಸಲಹೆಗಳಿಂದ ಗೌರವಾನ್ವಿತ ಪ್ರಧಾನಿಗಳ ಮಾರ್ಗದರ್ಶನದಲ್ಲಿ ದಿವ್ಯಾಂಗ ವ್ಯಕ್ತಿಗಳ ಕಲ್ಯಾಣ ಹಾಗೂ ಹಕ್ಕುಗಳ ರಕ್ಷಣೆಗಾಗಿ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಸೇರಿದಂತೆ ಸಶಕ್ತೀಕರಣಕ್ಕಾಗಿ ವಿವಿಧ ಕಾನೂನುಗಳನ್ನು ಸಹ ಜಾರಿಗೆ ತರಲಾಗಿದೆ. ವಿಶೇಷ ಚೇತನರಲ್ಲಿ ಅಪಾರ ಪ್ರತಿಭೆ, ಆತ್ಮವಿಶ್ವಾಸ ಮತ್ತು ಸಾಮರ್ಥ್ಯ ಅಡಗಿದ್ದು, ಅವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವುದು ಸಮಾಜದ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

“ಮಿಟ್ಟಿ ಕೆಫೆಯು ದೈಹಿಕ, ಬೌದ್ಧಿಕ ಮತ್ತು ಮಾನಸಿಕ ಅಂಗವೈಕಲ್ಯ ಹೊಂದಿರುವ ವಯಸ್ಕರಿಗೆ ಅನುಭವ ತರಬೇತಿ ಮತ್ತು ಉದ್ಯೋಗವನ್ನು ಒದಗಿಸುವ ಕೆಫೆಗಳ ಸರಪಳಿಯಾಗಿದೆ. ವಿಶೇಷ ಚೇತನರಿಗೆ ಉದ್ಯೋಗ ಮತ್ತು ಸ್ವಾವಲಂಬನೆಯ ಅವಕಾಶ ಕಲ್ಪಿಸುವ ಮೂಲಕ ಘನತೆಯ ಜೀವನವನ್ನು ನಿರ್ಮಿಸುವ ಮಿಟ್ಟಿ ಕೆಫೆಯ ಸೇವೆ ಅತ್ಯಂತ ಶ್ಲಾಘನೀಯವಾಗಿದೆ. ಸಹಾನುಭೂತಿಗಿಂತ ಅವಕಾಶವೇ ನಿಜವಾದ ಸಬಲೀಕರಣದ ಮಾರ್ಗವಾಗಿದ್ದು, ವಿಶೇಷ ಚೇತನರ ಪ್ರತಿಭೆಗೆ ಸೂಕ್ತ ವೇದಿಕೆ ದೊರೆತರೆ ಅವರು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಬಲ್ಲರು” ಎಂದು ಅಭಿಪ್ರಾಯಪಟ್ಟರು.

“ಮಿಟ್ಟಿ ಕೆಫೆ ಸಂಸ್ಥಾಪಕಿ ಅಲಿನಾ ಆಲಂ ಹಾಗೂ ಸಂಸ್ಥೆಯ ತಂಡವು ಸಮಗ್ರ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ನೀಡುತ್ತಿರುವ ಕೊಡುಗೆಯನ್ನು ಶ್ಲಾಘನೀಯ. ಇಂತಹ ಸಾಮಾಜಿಕ ಉದ್ಯಮಗಳು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್’ ಎಂಬ ರಾಷ್ಟ್ರೀಯ ಧ್ಯೇಯವನ್ನು ಸಾಕಾರಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಸಮಾಜ, ಶಿಕ್ಷಣ ಸಂಸ್ಥೆಗಳು ಹಾಗೂ ಕೈಗಾರಿಕಾ ವಲಯಗಳು ಹೆಚ್ಚಿನ ಪ್ರಮಾಣದಲ್ಲಿ ಇಂತಹ ಸಮಗ್ರ ಉದ್ಯೋಗ ಮಾದರಿಗಳನ್ನು ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

“ಡಿಬಿಎಸ್ ಬ್ಯಾಂಕ್ ಮತ್ತು ಮಿಟ್ಟಿ ಕೆಫೆ ಪಾಲುದಾರಿಕೆಯಲ್ಲಿ ಬೆಂಗಳೂರಿನ ಪ್ರತಿಷ್ಠಿತ 1ಎಂಜಿ ಮಾಲ್ ನಲ್ಲಿ ನೂತನ ಕೆಫೆ ಶಾಖೆಯನ್ನು ಆರಂಭಿಸಿದೆ. ಈ ಸಹಭಾಗಿತ್ವದ ಒಪ್ಪಂದದ ಅಡಿಯಲ್ಲಿ, ದೇಶಾದ್ಯಂತ ಮಿಟ್ಟಿ ಕೆಫೆಯ ಜಾಲವನ್ನು ವ್ಯಾಪಕವಾಗಿ ವಿಸ್ತರಿಸಲು ಹಾಗೂ ವಿಶೇಷಚೇತನರಿಗೆ ಉದ್ಯೋಗಾವಕಾಶ ಮತ್ತು ವೃತ್ತಿ ಕೌಶಲ್ಯಾಭಿವೃದ್ಧಿಯ ಲಭ್ಯತೆಯನ್ನು ಮತ್ತಷ್ಟು ಹೆಚ್ಚಿಸಲು ಡಿಬಿಎಸ್ ಬ್ಯಾಂಕ್ ಇಂಡಿಯಾ ಬರೋಬ್ಬರಿ ₹10 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿರುವುದು” ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ” ಎಂದು ಪ್ರಶಂಸಿದ ರಾಜ್ಯಪಾಲರು, “ಮಿಟ್ಟಿ ಕೆಫೆಯಂತಹ  ಕರ್ನಾಟಕ ಸೇರಿದಂತೆ ದೇಶದಾದ್ಯಂತ ಮತ್ತಷ್ಟು ವಿಸ್ತರಿಸಿ, ಅನೇಕ ಕುಟುಂಬಗಳ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲಿ” ಎಂದು ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ್ ಬೆಲ್ಲದ್, ಮಿಟ್ಟಿ ಕೆಫೆ ಸಂಸ್ಥಾಪಕಿ ಅಲಿಮಾ ಆಲಂ, ಡಿಬಿಎಸ್ ಬ್ಯಾಂಕ್ ಇಂಡಿಯಾದ ಗ್ರೂಪ್ ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಷನ್ಸ್ ವಿಭಾಗದ ಮುಖ್ಯಸ್ಥರಾದ ಗೌರವ್ ರಜಪೂತ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ

ಡಿಜಿಟಲ್ ಇಸ್ಪೀಟ್ ಸ್ಕಾನರ್ ಕಾರ್ಡ್ಗಳನ್ನು ಹಾಗೂ ಎಲೆಕ್ಟಾನಿಕ್ ಡಿವೈಜ್‌ಗಳ ಅಕ್ರಮ ಮಾರಾಟ: ಐವರ ಬಂಧನ

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles