ಹುಳಿಯಾರು ಜ್ಞಾನ ಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ
ಹುಳಿಯಾರು: ಹುಳಿಯಾರಿನ ಜ್ಞಾನ ಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು(National Doctors’ Day Celebration) ಆಚರಿಸಲಾಯಿತು.ಶಾಲೆಯ ಪ್ರಾಂಶುಪಾಲ ಗಿರೀಶ್ ಕೆ.ಎಲ್. ಅವರು ವೈದ್ಯರ ದಿನಾಚರಣೆಯ ಮಹತ್ವವನ್ನು ವಿವರಿಸಿ, ವೈದ್ಯರು ಸಮಾಜದ ಆರೋಗ್ಯ ರಕ್ಷಕರಾಗಿದ್ದು, ಅವರ ನಿಸ್ವಾರ್ಥ ಸೇವೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ(Moral) ಎಂದು ತಿಳಿಸಿದರು.
ವಿಶೇಷ ಆಕರ್ಷಣೆಯಾಗಿ ಶಾಲೆಯ ವಿದ್ಯಾರ್ಥಿಗಳು ವೈದ್ಯರ ವೇಷಭೂಷಣ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳು ವೈದ್ಯರ ಸೇವೆಯ ಮಹತ್ವದ ಕುರಿತು ಭಾಷಣಗಳನ್ನು ಮಾಡಿದರು ಹಾಗೂ ಆರೋಗ್ಯ ಜಾಗೃತಿ ಮೂಡಿಸುವ ಕಿರು ನಾಟಕವನ್ನು ಪ್ರದರ್ಶಿಸಿ ಎಲ್ಲರಿಂದ ಪ್ರಶಂಸೆ ಪಡೆದರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಸುಧಾ ಎಸ್., ಅಧ್ಯಕ್ಷ ಕೆ.ಸಿ.ಶಿವಣ್ಣ, ಜಂಟಿ ಕಾರ್ಯದರ್ಶಿ ಲಿಖಿತಾ ಎಸ್, ಶಾಲೆಯ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

