ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಅಜಾದ್(Moulana Abdul Kalam Ajad) ಅವರ ಜನ್ಮದಿನದ ಸ್ಮರಣಾರ್ಥವಾಗಿ ನವೆಂಬರ್ 11 ರಂದು ವಿಧಾನಸೌಧದಲ್ಲಿರುವ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಷ್ಟ್ರೀಯ ಶೈಕ್ಷಣಿಕ ದಿನವನ್ನು ಆಚರಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರಾದ ಯು.ಟಿ.ಖಾದರ್ ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಉನ್ನತ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

