ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ 12 ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

ಲೋಕಭವನದ (Rajbhavan) ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ, ಮಾನ್ಯ ಮುಖ್ಯಮಂತ್ರಿಗಳ (New Chief Minister) ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ (Oath Ceremony) ವಿಶೇಷವಾಗಿ ಪೂರ್ವಾಭಿಮುಖವಾಗಿ ಸಿದ್ದಪಡಿಸಲಾದ ವೇದಿಕೆಯಲ್ಲಿ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್ (Governor Gehlot) ಅವರು ಮುಖ್ಯಮಂತ್ರಿಗಳಿಗೆ ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದರು.

ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ಅವರು ಇಂದು  ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾಗಿ ಡಾ.ಜಿ.ಪರಮೇಶ್ವರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ  ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಂಪುಟ ದರ್ಜೆಯ ಸಚಿವರುಗಳಾಗಿ 12 ಜನ ಸಚಿವರು ಸಹ ಗೌರವಾನ್ವಿತ ರಾಜ್ಯಪಾಲರಿಂದ ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಸ್ವೀಕರಿಸಿದರು.

New CM DK Shivakumar Oath Ceremony

ಕೆ.ಹೆಚ್. ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾ ರೆಡ್ಡಿ,  ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣ ಪ್ರಕಾಶ್ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವಿಭು ಬಖ್ರು, ಎ.ಐ.ಸಿ.ಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಲೋಕಸಭಾ ವಿರೋಧ ಪಕ್ಷ ನಾಯಕರಾದ ರಾಹುಲ್ ಗಾಂಧಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಡಾ.ಸುಖವೀಂದರ್ ಸಿಂಗ್ ಸುಖು,   ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳಂ ರಾಜ್ಯದ ಮುಖ್ಯಮಂತ್ರಿ ವಿ.ಟಿ.ಸತೀಶನ್, ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ‌ ವೇಣುಗೋಪಾಲ್, ಲೋಕಸಭಾ ಸದಸ್ಯರಾದ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ತಿನ ಸಭಾಪತಿಯಾದ ಬಸವರಾಜ ಎಸ್ ಹೊರಟ್ಟಿ,  ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು, ವಿವಿಧ ರಾಜ್ಯಗಳ ಉಪಮುಖ್ಯಮಂತ್ರಿಗಳು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳು, ಸಂಸದರು, ಶಾಸಕರು, ಸರ್ವಧರ್ಮ ಗುರುಗಳು, ಕನಕಪುರ ದೊಡ್ಡಾಲಹಳ್ಳಿ ಸರಕಾರಿ ಶಾಲೆ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು

ಪೌರ ಕಾರ್ಮಿಕರು, ರೈತ ಮುಖಂಡರು, ದಲಿತ ಸಂಘಟನೆ ಮುಖಂಡರು,  ಹಿಂದುಳಿದ ವರ್ಗಗಳ ಮುಖಂಡರು, ಸ್ತ್ರೀ ಶಕ್ತಿ ಸಂಘಗಳ ಪ್ರತಿನಿಧಿಗಳು, ಮಹಿಳಾ ಮುಖಂಡರು, ವಿವಿಧ ಮಾಧ್ಯಮ ಕ್ಷೇತ್ರದ ಗಣ್ಯರು, ಸಿನಿಮಾ ರಂಗದವರು, ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಕ್ರೀಡಾ ಕ್ಷೇತ್ರದ ಪಟುಗಳು, ನಾಟಕ ರಂಗದ ಕಲಾವಿದರು, ಸಾಹಿತಿಗಳು,  ಕಲಾವಿದರು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು,  ಹೋಟೆಲ್ ಉದ್ಯಮಿಗಳು, ಯುವ ಮುಖಂಡರು, ಕನ್ನಡ ಪರ ಸಂಘಟನೆಯ ಮುಖಂಡರು ಸೇರಿದಂತೆ‌ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಕಾರ್ಯಕ್ರಮ  ನಿರೂಪಿಸಿದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles