ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು(Application Submission) ಅಕ್ಟೋಬರ್ 13, 2026 ಕೊನೆಯ ದಿನವಾಗಿದೆ ಎಂದು ಕರಾಮುವಿ ಬೆಂಗಳೂರು ಪ್ರಾದೇಶಿಕ ಕೇಂದ್ರ-07ರ ಪ್ರಾದೇಶಿಕ ನಿರ್ದೇಶಕರಾದ ಡಾ.ಗಿರೀಶ್ ಹೆಚ್.ಎನ್. (Dr.Girish. H.N) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಜಿಸಿ ಅನುಮೋದನೆ ಹಾಗೂ ನ್ಯಾಕ್ ಎ+ ಮಾನ್ಯತೆ ಪಡೆದಿರುವ ಈ ವಿಶ್ವವಿದ್ಯಾನಿಲಯದಲ್ಲಿ ಪದವಿಪೂರ್ವ, ಸ್ನಾತಕೋತ್ತರ ಪದವಿಗಳು ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ., ಬಿ.ಇಡಿ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಎಸ್.ಡಬ್ಲ್ಯೂ., ಎಂ.ಎಲ್.ಐ.ಎಸ್., ಪಿ.ಜಿ. ಡಿಪ್ಲ್ಲೊಮೋ, ಡಿಪ್ಲೊಮೋ ಹಾಗೂ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್‍ಸೈಟ್ www.ksoumysuru.ac.in ಮೂಲಕ ಆನ್‍ಲೈನ್ ಅಡ್ಮಿಷನ್ ಪೋರ್ಟಲ್‍ನಲ್ಲಿ (Online Admission Portal) ಅರ್ಜಿ ಭರ್ತಿ ಮಾಡಬಹುದು.

ಭರ್ತಿ ಮಾಡಿದ ಅರ್ತಿಯನ್ನು ಅಗತ್ಯ ದಾಖಲೆಗಳೊಂದಿಗೆ ಕರಾಮುವಿ ಬೆಂಗಳೂರು ಪ್ರಾದೇಶಿಕ ಕೇಂದ್ರ-07, ಹಜ್ ಭವನ, ತಿರುಮೆನಹಳ್ಳಿ ಕ್ರಾಸ್, ಹೆಗಡೆನಗರ ಮುಖ್ಯ ರಸ್ತೆ, ಬೆಂಗಳೂರು-560064 ಇಲ್ಲಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿರುತ್ತದೆ.

ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಎಕ್ಸ್ ಸರ್ವಿಸ್‍ಮನ್ ವಿದ್ಯಾರ್ಥಿಗಳಿಗೆ, ಆಟೋ ಮತ್ತು ಕ್ಯಾಬ್ ಚಾಲಕರು ಹಾಗೂ ಅವರ ಪತಿ/ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಹಾಗೂ ಕೆ.ಎಸ್.ಆರ್.ಟಿ.ಸಿ./ಬಿಎಂಟಿಸಿ/ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ/ಕೆ.ಕೆ.ಆರ್.ಟಿ.ಸಿ. ನೌಕರರಿಗೆ ಯುಜಿ ಮತ್ತು ಪಿಜಿ ಡಿಗ್ರಿ ಪ್ರೋಗ್ರಾಂಗಳಿಗೆ ಮಾತ್ರ ಬೋಧನಾ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ ಸಿಗಲಿದೆ.

ಕೋವಿಡ್-2019 ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಹಾಗೂ ತೃತೀಯ ಲಿಂಗ (Transgender) ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.

ಶೇ.50 ಕ್ಕಿಂತ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಬಿ.ಎಡ್ ಮತ್ತು ಎಂ.ಬಿ.ಎ ಕಾರ್ಯಕ್ರಮಗಳನ್ನು ಹೊರತುಪಡಿಸಿ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.

ಎಸ್‍ಸಿ/ಎಸ್‍ಟಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಸರ್ಕಾರದ ಎಸ್‍ಎಸ್‍ಪಿ (SSP) ಮೂಲಕ ವಿದ್ಯಾರ್ಥಿವೇತನ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಬೆಂಗಳೂರು ಪ್ರಾದೇಶಿಕ ಕೇಂದ್ರ-07, ಹಜ್ ಭವನ, ತಿರುಮೇನಹಳ್ಳಿ ಕ್ರಾಸ್, ಹೆಗಡೆನಗರ ಮುಖ್ಯ ರಸ್ತೆ, ಬೆಂಗಳೂರು-560064 ಅಥವಾ ದೂರವಾಣಿ ಸಂಖ್ಯೆಗಳಾದ 080-28440400, 9448668880, 9739803295, 9844148182, 9686069444, 8217690865 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕುಡಿಯುವ ನೀರು ಮತ್ತು ಮೇವಿಗೆ ಆದ್ಯತೆ; ಅಗತ್ಯ ಅನುದಾನ ಬಿಡುಗಡೆ : ರೈತರಿಗೆ ಹಗಲು ಹೊತ್ತು ನಿರಂತರ ಆರು ಗಂಟೆ ವಿದ್ಯುತ್; ರೈತರ  ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

Hot this week

ಕರ್ನಾಟಕದ ಸರ್ಕಾರಿ ಸೇವೆಗಳಿಗೆ ಬಹುಭಾಷಾ ಮತ್ತು ಧ್ವನಿ ಆಧಾರಿತ ಪ್ರವೇಶದ ಯೋಜನೆ

ಕರ್ನಾಟಕ ಸರ್ಕಾರವು ಸಾರ್ವಜನಿಕ ಸೇವೆಗಳನ್ನು ಜನರಿಗೆ ಅವರ ಆಯ್ಕೆಯ ಭಾಷೆಯಲ್ಲಿ ಸುಲಭವಾಗಿ...

ಕೆನಡಾದ ಲೇಖಕಿ ಆನ್ ಕಾರ್ಸನ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಕೆನಡಾದ ಕವಯಿತ್ರಿ, ಪ್ರಬಂಧಕಾರ್ತಿ ಮತ್ತು ಅನುವಾದಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ...

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ ಕರ್ನಾಟಕದಲ್ಲಿ ಬರ...

ಆಂಧ್ರಪ್ರದೇಶದಲ್ಲಿ ತೀವ್ರ ಬರ: 21 ಜಿಲ್ಲೆಗಳ 388 ಮಂಡಲಗಳು ಬಾಧಿತ

ಆಂಧ್ರಪ್ರದೇಶ ಸರ್ಕಾರವು 21 ಜಿಲ್ಲೆಗಳ 388 ಮಂಡಲಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ...

ಹಿರಿಯ ನಟ ನಾನಾ ಪಾಟೇಕರ್ ನಿಧನ: ಚಿತ್ರರಂಗದಲ್ಲಿ ಶೋಕ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ಸಾಂಸ್ಕೃತಿಕ ಐಕಾನ್...

Topics

ಜಿಎಸ್‌ಟಿ ಅಧಿಕಾರಿಗಳ ಬಂಧನಾಧಿಕಾರ ರದ್ದು; ಪ್ರಾಸಿಕ್ಯೂಷನ್ ಮಿತಿ ₹1 ಕೋಟಿಯಿಂದ ₹5 ಕೋಟಿಗೆ ಏರಿಕೆ!

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ...

ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA.. ಆಯಣ: ದಕ್ಷಿಣಾಯನ AYANA:...

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ "ಆಹಾರ ಮತ್ತು...

Related Articles