ಭಾರತೀಯ ಪತ್ರಿಕೆಗಳ ಪ್ರೆಸ್ ರಿಜಿಸ್ಟ್ರಾರ್ ಜನರಲ್ ಕಚೇರಿ ಪ್ರಕಟಣೆ

ಬೆಂಗಳೂರು: ವಾರ್ಷಿಕ ವರದಿಗಳನ್ನು (Annual Statements) ಸಲ್ಲಿಸದ ಕಾರಣಕ್ಕಾಗಿ ರದ್ದಾಗಿರುವ ಪತ್ರಿಕೆಗಳ ಶೀರ್ಷಿಕೆಗಳನ್ನು (Titles) ಮರುಸ್ಥಾಪಿಸಲು ಭಾರತ ಸರ್ಕಾರದ ಪತ್ರಿಕೆಗಳ ಪ್ರೆಸ್ ರಿಜಿಸ್ಟ್ರಾರ್ ಜನರಲ್ ಕಚೇರಿಯು (PRGI) ಪ್ರಕಾಶಕರಿಗೆ ಕೊನೆಯ ಅವಕಾಶವನ್ನು ನೀಡಿದೆ.
ಪ್ರೆಸ್ ಮತ್ತು ರಿಜಿಸ್ಟ್ರೇಷನ್ ಆಫ್ ಪಿರಿಯಾಡಿಕಲ್ಸ್ (PRP) ಕಾಯ್ದೆ, 2023 ರ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಹಲವು ಪತ್ರಿಕೆಗಳ ಶೀರ್ಷಿಕೆಗಳನ್ನು ರದ್ದುಗೊಳಿಸಲಾಗಿತ್ತು. ಈ ಕುರಿತು ಪ್ರಕಾಶಕರು ಮತ್ತು ಪಾಲುದಾರರಿಂದ ಬಂದ ಮನವಿಗಳನ್ನು ಪುರಸ್ಕರಿಸಿ, ಇಲಾಖೆಯು ಈ ಅಂತಿಮ ಅವಕಾಶವನ್ನು ಕಲ್ಪಿಸಿದೆ.
ಬಾಕಿ ಇರುವ ದಂಡವನ್ನು ಪಾವತಿಸಲು ಮತ್ತು ವಾರ್ಷಿಕ ವರದಿಯನ್ನು ಸಲ್ಲಿಸಲು 30 ಜೂನ್ 2026 ಕೊನೆಯ ದಿನವಾಗಿದೆ.
ರದ್ದಾದ ಪಟ್ಟಿಯಿಂದ ಶೀರ್ಷಿಕೆಯನ್ನು ತೆಗೆದುಹಾಕಲು, ಪ್ರಕಾಶಕರು ಬಾಕಿ ಇರುವ ದಂಡವನ್ನು ಪಾವತಿಸಬೇಕು ಮತ್ತು 2024-25ರ ಆರ್ಥಿಕ ವರ್ಷದ ವಾರ್ಷಿಕ ವರದಿಯನ್ನು  Press Sewa Portal ಮೂಲಕ ಕಡ್ಡಾಯವಾಗಿ ಸಲ್ಲಿಸಬೇಕು.
ಜೂನ್ 30 ರ ನಂತರ ಯಾವುದೇ ಕಾರಣಕ್ಕೂ ಕಾಲಾವಕಾಶವನ್ನು ವಿಸ್ತರಿಸಲಾಗುವುದಿಲ್ಲ. ಈ ಗಡುವಿನೊಳಗೆ ದಂಡ ಪಾವತಿಸದಿದ್ದರೆ ಶೀರ್ಷಿಕೆಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದು ಮತ್ತು ಈ ಬಗ್ಗೆ ಯಾವುದೇ ಮೇಲ್ಮನವಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಪ ಪ್ರೆಸ್ ರಿಜಿಸ್ಟ್ರಾರ್ ಜನರಲ್ ರತ್ನಾಕರ್ ಪಾಮುಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles