ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸುವುದು ಮುಖ್ಯ: ಪ್ರಕಾಶನಾಥ ಸ್ವಾಮೀಜಿ


ಬೆಂಗಳೂರು: ಸಮಾಜದಲ್ಲಿ ಆರ್ಥಿಕವಾಗಿ ಸಬಲರಾಗಿರುವವರು ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಮುಂದಾಗಬೇಕು. ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಮನೋಭಾವದಿಂದ ಕೆಲಸ ಮಾಡುವವರನ್ನು ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಎಸ್‌ಜೆಬಿ(SJB) ಮತ್ತು ಬಿಜಿಎಸ್(BGS) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ಶ್ರೀ ಪ್ರಕಾಶನಾಥ ಸ್ವಾಮೀಜಿ(Sree Sree Prakashnatha Swamyji) ಹೇಳಿದರು.
ಖ್ಯಾತ ಉದ್ಯಮಿ ಹಾಗೂ ಪರಿಸರವಾದಿ ರೇವತಿ ಕಾಮತ್ ಅವರ ನೇತೃತ್ವದಲ್ಲಿ ಆರಂಭವಾದ ‘ಅಕ್ಷರದಾನ’ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರೇವತಿ ಕಾಮತ್ ಅವರಿಗೆ ಆರ್ಥಿಕವಾಗಿ ಯಾವುದೇ ಕೊರತೆಯಿಲ್ಲದಿದ್ದರೂ ಸಮಾಜಕ್ಕಾಗಿ ಕೆಲಸ ಮಾಡುವ ಉದ್ದೇಶದಿಂದ ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅಂದು ಬಾಲಗಂಗಾಧರನಾಥ ಶ್ರೀಗಳು ಹಳ್ಳಿ ಹಳ್ಳಿಗಳಿಗೆ ಹೋಗಿ ಶಿಕ್ಷಣದ ಬೇರು ಬಿತ್ತುವ ಕೆಲಸ ಮಾಡಿ ನೂರಾರು ವಿದ್ಯಾಸಂಸ್ಥೆಗಳನ್ನು ಹುಟ್ಟುಹಾಕಿದರು. ಅದೇ ರೀತಿ ಇಂದು ರೇವತಿ ಕಾಮತ್ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸಿ ಮಕ್ಕಳಿಗೆ ಸೂಕ್ತ ಶಿಕ್ಷಣ ಕೊಡಿಸಲು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವರು ತಮ್ಮ ಜೀವನವನ್ನು ಆರಾಮವಾಗಿ ಕಳೆಯಬಹುದಿತ್ತು. ಆದರೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಮುಂದಾಗಿರುವುದು ಶ್ಲಾಘನೀಯ ಎಂದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ: ರೇವತಿ ಕಾಮತ್
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದರೆ ದೇಶದ ಪ್ರಗತಿ ಮತ್ತಷ್ಟು ಹೆಚ್ಚಲಿದೆ. ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಬಡತನದ ಕಾರಣಕ್ಕೆ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂದು ರೇವತಿ ಕಾಮತ್ ಅಭಿಪ್ರಾಯಪಟ್ಟರು.
ರೇವತಿ ಕಾಮತ್ ಅವರ ಮಹತ್ವಾಕಾಂಕ್ಷೆಯ ‘ಅಕ್ಷರದಾನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ತಾವು ಕಂಡ ಅನುಭವಗಳನ್ನು ಹಂಚಿಕೊAಡು, ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣದ ಸ್ಥಿತಿಗತಿ ಹಾಗೂ ಶಾಲೆಗಳ ಅಭಿವೃದ್ಧಿಯ ಅಗತ್ಯವನ್ನು ವಿವರಿಸಿದರು.
ಮೊದಲಿಗೆ ಅಣ್ಣಿಗೇರಿ ಶಾಲೆಗೆ ಶೌಚಾಲಯ ನಿರ್ಮಿಸಿಕೊಡುವ ಉದ್ದೇಶದಿಂದ ಭೇಟಿ ನೀಡಿದ್ದೆ. ಆದರೆ, ಶಾಲೆಯ ಪರಿಸ್ಥಿತಿಯನ್ನು ಕಂಡು ಆಘಾತವಾಯಿತು. ಅಲ್ಲಿನ ಮೂಲಸೌಕರ್ಯಗಳ ಕೊರತೆ ಹಾಗೂ ಮಕ್ಕಳ ಸ್ಥಿತಿಯನ್ನು ಗಮನಿಸಿದಾಗ, ಇಡೀ ಶಾಲೆಯ ಅಭಿವೃದ್ಧಿಗೆ ಏನಾದರೂ ಮಾಡಬೇಕು ಎಂಬ ಆಲೋಚನೆ ಮೂಡಿತು. ಬಳಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ನೈಜ ಸಮಸ್ಯೆಗಳು ಅರಿವಿಗೆ ಬಂದವು. ಮಕ್ಕಳು ಸರಿಯಾದ ಕಟ್ಟಡವೂ ಇಲ್ಲದೆ ವಿದ್ಯಾಭ್ಯಾಸ ಮಾಡುತ್ತಿರುವುದು ತೀವ್ರ ನೋವುಂಟು ಮಾಡಿತು ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿವೃತ್ತರಾದರೆ ಅವರ ಸ್ಥಾನಕ್ಕೆ ತಕ್ಷಣವೇ ಹೊಸ ಶಿಕ್ಷಕರನ್ನು ನೇಮಿಸದಿರುವುದು ಶಿಕ್ಷಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದೆ. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಬೇಕಿದೆ. ಮಕ್ಕಳು ಅರ್ಧಕ್ಕೆ ಹರಿದ ಚಪ್ಪಲಿ ಧರಿಸಿಕೊಂಡು ಶಾಲೆಗೆ ಬರುವಂತಹ ದುಸ್ಥಿತಿ ಕಂಡಾಗ ಮನಸ್ಸಿಗೆ ನೋವಾಗುತ್ತದೆ. ಇನ್ನು ಕೆಲವು ಮಕ್ಕಳಿಗೆ ನೋಟ್‌ಬುಕ್‌ಗಳನ್ನು ಖರೀದಿಸಿಕೊಳ್ಳಲು ಕೂಡ ಪೋಷಕರ ಬಳಿ ಹಣವಿರುವುದಿಲ್ಲ. ಪುಸ್ತಕಗಳನ್ನು ಖರೀದಿಸಲೂ ಸಾಧ್ಯವಾಗದ ಕುಟುಂಬಗಳ ಮಕ್ಕಳು ಶಿಕ್ಷಣ ಪಡೆಯಲು ಎದುರಿಸುವ ಕಷ್ಟವನ್ನು ಸಮಾಜ ಅರ್ಥಮಾಡಿಕೊಳ್ಳಬೇಕು. ಇಂತಹ ಮಕ್ಕಳಿಗೆ ತಮ್ಮ ಕೈಲಾದ ಸಹಾಯ ಮಾಡಿ ಎಂದು ಮನವಿ ಮಾಡಿದರು.
ಯಾವ ಸರ್ಕಾರಗಳೂ ಶಿಕ್ಷಣಕ್ಕೆ ಆದ್ಯತೆ ನೀಡದಿರುವುದು ಬೇಸರದ ಸಂಗತಿ: ಎಂ.ಸಿ.ಸುಧಾಕರ್
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ನಮ್ಮ ಭಾರತ ದೇಶದಲ್ಲಿ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನಿರೀಕ್ಷಿತ ಆದ್ಯತೆ ನೀಡುತ್ತಿಲ್ಲ ಎಂಬುದು ಬೇಸರದ ಸಂಗತಿ. ಶಿಕ್ಷಣ ತಜ್ಞರ ನೇತೃತ್ವದಲ್ಲಿ ಹಲವು ವರದಿಗಳು ಸಲ್ಲಿಕೆಯಾಗಿದ್ದರೂ, ಅವುಗಳಿಂದ ನಿರೀಕ್ಷಿತ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ಸರ್ಕಾರದ ಮಾಜಿ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅಭಿಪ್ರಾಯಪಟ್ಟರು.
ರಾಜಕೀಯ ವ್ಯವಸ್ಥೆಯಲ್ಲಿ ಜನರ ಮುಂದೆ ಹೋದಾಗ ವಿವಿಧ ಬೇಡಿಕೆಗಳು ಹೆಚ್ಚಾಗುತ್ತವೆ. ಈ ಎಲ್ಲದರ ನಡುವೆ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಾದ ಆದ್ಯತೆ ಸಿಗದಿರುವುದು ವಿಷಾದನೀಯ. ಶಿಕ್ಷಣದ ಅಭಿವೃದ್ಧಿಗೆ ಸರ್ಕಾರಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ಖ್ಯಾತ ಮನೋವೈದ್ಯ ಡಾ. ಸಿ. ಆರ್. ಚಂದ್ರಶೇಖರ್, ಕರ್ನಾಟಕ ಲೋಕಾಯುಕ್ತದ ಜಾಗೃತ ವಿಭಾಗದ ನಿವೃತ್ತ ಡಿಐಜಿ ಡಾ. ಡಿ. ಎನ್. ಮುನಿಕೃಷ್ಣ, ಐ.ಪಿ.ಎಸ್. (ನಿವೃತ್ತ), ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ರವಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಚಂದ್ರಶೇಖರ, ರೋಟರಿ ಅಧ್ಯಕ್ಷೆ ಪ್ರೊ. ಎಲಿಜಬೆತ್ ಚೆರಿಯನ್, ಅಕ್ಷರದಾನದ ಸಾಗರೋತ್ತರ ಕಾರ್ಯಾಚರಣೆಗಳ ಅಧ್ಯಕ್ಷೆ ಶ್ರೀಮತಿ ಅನಿತಾ ದಾಸಪ್ಪ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಅಕ್ಷರದಾನದ ಸಲಹೆಗಾರರಾದ ಪ್ರೊ. ಕೆ. ಎಸ್. ನಾಗೇಶ್, ಖ್ಯಾತ ಸಾಹಿತಿ ಡಾ.ಅಭಿನಂದನ್ ಬೃಂದಾವನಿ ಹಾಗೂ ಮೈಸೂರಿನ ಉದ್ಯಮಿ ಸಿ. ಪಿ. ಮನು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


 

Hot this week

’ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ‘ಪಾಂಚಜನ್ಯ ಗುರುಶ್ರೇಷ್ಠ ಪುರಸ್ಕಾರ–2026′

ಎರಡು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ; ನಾಮನಿರ್ದೇಶನ ಸಲ್ಲಿಸಲು ನವೆಂಬರ್ 20 ಕೊನೆಯ...

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ (Kannada Sahitya Academy) ಮಾಜಿ ಸದಸ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

Topics

’ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ‘ಪಾಂಚಜನ್ಯ ಗುರುಶ್ರೇಷ್ಠ ಪುರಸ್ಕಾರ–2026′

ಎರಡು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ; ನಾಮನಿರ್ದೇಶನ ಸಲ್ಲಿಸಲು ನವೆಂಬರ್ 20 ಕೊನೆಯ...

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ (Kannada Sahitya Academy) ಮಾಜಿ ಸದಸ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

Related Articles