ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಸಮುದಾಯಗಳ ಸುರಕ್ಷತೆಗೆ ಅನುಸರಿಸುತ್ತಿರುವ ಕ್ರಮಗಳ ಕುರಿತು ನಗರದ ಖಾಸಗಿ ಹೊಟೇಲ್ ನಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪರಿಶಿಷ್ಟ ಪಂಗಡಗಳ ಹಿತಾಸಕ್ತಿಗಳನ್ನು ರಕ್ಷಿಸಲು ಭಾರತ ಸಂವಿಧಾನದ ವಿಧಿ 338ಎ ಅಡಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವನ್ನು (NCST) ರಚಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳಿಗೆ ಸಂವಿಧಾನಾತ್ಮಕ ಮತ್ತು ಕಾನೂನುಬದ್ಧ ರಕ್ಷಣೆಗಳ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು, ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಶೀಲಿಸಲು ಮತ್ತು ಪರಿಶಿಷ್ಟ ಪಂಗಡಗಳ ರಕ್ಷಣೆ, ಕಲ್ಯಾಣ ಹಾಗೂ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಶಿಫಾರಸುಗಳನ್ನು ಮಾಡಲು ಆಯೋಗಕ್ಕೆ ಅಧಿಕಾರ ನೀಡಲಾಗಿದೆ.
ವಿಧಿ 338ಎ ನ ಕಲಂ (5)(d) ರ ಪ್ರಕಾರ, ಈ ರಕ್ಷಣೆಗಳ ಕಾರ್ಯನಿರ್ವಹಣೆಯ ಕುರಿತಾದ ಆಯೋಗದ ವಾರ್ಷಿಕ ವರದಿಗಳನ್ನು ಹಾಗೂ ಸೂಕ್ತವೆಂದು ಪರಿಗಣಿಸಿದ ಇಲಾಖೆಯ ಇತರ ಸಂದರ್ಭಗಳಲ್ಲಿ ಭಾರತದ ಮಾನ್ಯ ರಾಷ್ಟ್ರಪತಿಗಳಿಗೆ ಸಲ್ಲಿಸಲಾಗುತ್ತದೆ.
ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಶಿಷ್ಟ ಪಂಗಡಗಳಿಗಾಗಿರುವ ಸಂವಿಧಾನಾತ್ಮಕ ರಕ್ಷಣೆಗಳು, ಕಲ್ಯಾಣ ಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಆಯೋಗವು ಸಮಗ್ರ ಪರಿಶೀಲನೆಯನ್ನು ಕೈಗೊಳ್ಳಬೇಕಾಗುತ್ತದೆ. ಈ ಉದ್ದೇಶಕ್ಕಾಗಿ, ಸರ್ಕಾರದ ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ಕಾರ್ಯಕ್ರಮಗಳಿಗೆ ಅನುಗುಣವಾಗಿ ರಾಜ್ಯ ಮಟ್ಟದ ಪರಿಶೀಲನಾ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕಳೆದ ಮೂರು ದಿನಗಳಿಂದ ದಕ್ಷಿಣ ಭಾರತದಲ್ಲಿ ಆಯೋಗವು ಪ್ರವಾಸ ಆರಂಭಿಸಿದ್ದು, ನಿನ್ನೆ ಹಾಗೂ ಮೊನ್ನೆ ತಮಿಳುನಾಡು ರಾಜ್ಯದ ಪ್ರಗತಿ ಪರಿಶಿಲನೆ ಸಭೆ ನಡೆಸಲಾಯಿತು. ಪ್ರಧಾನಮಂತ್ರಿಗಳ ವಿಶೇಷ ಅಭಿಯಾನದ ಅಂಗವಾಗಿ ಈ ಪ್ರವಾಸ ಹಮ್ಮಿಕೊಳ್ಳುವ ಮೂಲಕ ವಾಸ್ತವ ಸ್ಥಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು.
ಈ ಪ್ರವಾಸದಲ್ಲಿ ಪರಿಶಿಷ್ಟ ಪಂಗಡಗಳ ಯುವಕರೊಂದಿಗೆ ಸಂವಾದ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸೇರಿದಂತೆ ಜನ-ಸಾಮಾನ್ಯರೊಂದಿಗೆ ಸ್ಥಳೀಯ ಸಮಸ್ಯೆಗಳು ಸೇರಿದಂತೆ ಸರ್ಕಾರದ ಯೋಜನೆಗಳ ಜಾರಿ ಕುರಿತು ಚರ್ಚಿಸಲಾಗುತ್ತಿದೆ. ಇಂದು ಬೆಳಿಗ್ಗೆಯಿಂದ ಕರ್ನಾಟಕ ಸರ್ಕಾರದ ಯೋಜನೆಗಳ ಜಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿ ಪರಿಶಿಷ್ಟ ಪಂಗಡಗಳ ಯೋಜನೆಗಳ ಕುರಿತು ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಮುಖ್ಯವಾಗಿ ಪರಿಶಿಷ್ಟ ಪಂಗಡಗಳ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ದಾಖಲಾಗಿರುವ ದೂರು ಗಳ ಕುರಿತು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಇಲ್ಲಿನ ದೊಡ್ಡ ಸಮಸ್ಯೆ ಎಂದರೆ ಇಲ್ಲಿ ಪರಿಶಿಷ್ಟ ಪಂಗಡಗಳ ಶೇ. 7 ರಷ್ಟು ಜನರಿದ್ದಾರೆ ಆದರೆ ಮೀಸಲಾತಿ ಕೇವಲ 3% ಇರುವುದು ದುರದೃಷ್ಟ, ಅದನ್ನು ಶೇ. 7% ಕ್ಕೆ ಏರಿಸುವಂತೆ ನಿರ್ದೇಶನ ನೀಡಲಾಗಿದೆ.
ಸೂಕ್ತ ನ್ಯಾಯಕ್ಕಾಗಿ ಕೇಂದ್ರ ಸರ್ಕಾರದ https://ncstgrams.gov.in/
ಇಲ್ಲಿ ಪಂಚಾಯತ್ ಚುನಾವಣೆಯಾಗದಿರುವುದು ಸಹ ಒಂದು ದೊಡ್ಡ ಸಮಸ್ಯೆಯಾಗಿದೆ. ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಅಲ್ಲಿನ ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳನ್ನು ಆಲಿಸಲು ಅಲ್ಲಿಗೆ ಒಂದು ತಿಂಗಳು ಒಳಗಾಗಿ ಭೇಟಿ ನೀಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆಯೋಗದ ಸದಸ್ಯರಾದ ಜಾಟೂತು ಹುಸೇನ್, ಜಂಟಿ ಕಾರ್ಯದರ್ಶಿ ಅಮಿತ್ ನಿರ್ಮಲ್, ನಿರ್ದೇಶಕರಾದ ಪೂರ್ಣೇಂದು ಕಾಂತ್, ಡಾ. ಪಿ ಕಲ್ಯಾಣ ರೆಡ್ಡಿ ಹಾಗೂ ಕರ್ನಾಟಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ಜಗದೇವಿ ಹಿರೇಮಠ ಅವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ಸೆಪ್ಟೆಂಬರ್ 23 ರಂದು ರಾಜ್ಯ ಮಟ್ಟದ ಲೀಡ್ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಶಿಷ್ಟ ಪಂಗಡದವರಿಗೆ ಬ್ಯಾಂಕ್ ಯೋಜನೆಗಳ ಅನುμÁ್ಠನ, ಪ್ರಗತಿ ಪರಿಶೀಲನೆ ನಡೆಸಿ, ವ್ಯವಸ್ಥಿತವಾಗಿ ಅನುμÁ್ಠನ ಗೊಳಿಸುವಂತೆ ಸೂಚಿಸಲಾಯಿತು.
ನಂತರ ಪರಿಶಿಷ್ಟ ಪಂಗಡದ ಶಾಸಕರು, ಸಚಿವರುಗಳೊಂದಿಗೆ ಸಭೆ ನಡೆಸಿದರು. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಂಸದರಾದ ಕುಮಾರ ನಾಯಕ್, ಶಾಸಕರಾದ ಕಡಿಮೆ. ಎನ್. ರಾಜಣ್ಣ, ಬಸನಗೌಡ ದದ್ದಲ್, ಡಾ. ಶ್ರೀನಿವಾಸ, ಶ್ರೀಮತಿ ಕರೆಮ್ಮ, ಹೇಮಲಯಾ ನಾಯಕ್ ರವರು ಮಾತನಾಡಿ, ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ದಿಗಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಕೇಂದ್ರ ಸರ್ಕಾರವೂ ಹೆಚ್ಚಿನ ನೆರವು ನೀಡಬೇಕು. ರಾಜ್ಯದಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಆಯವ್ಯದಲ್ಲಿ ಶೇ.24.04 ರಷ್ಟು ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟು ಯೋಜನೆಗಳನ್ನು ಅನುμÁ್ಠನ ಗೋಳಿಸಲಾಗುತ್ತಿದೆ ಅದೇ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ತನ್ನ ಆಯವ್ಯದಲ್ಲಿ ಪರಿಶಿಷ್ಟ ಪಂಗಡದವರ ಶ್ರೇಯೋಭಿವೃದ್ಧಿಗಾಗಿ ಅನುದಾನವನ್ನು ಮೀಸಲಿಡಬೇಕು ಎಂದು ಆಯೋಗಕ್ಕೆ ಮನವಿ ಮಾಡಿದರು.
ಪರಿಶಿಷ್ಟ ಪಂಗಡವರ ಮೀಸಲಾತಿ ಪ್ರಮಾಣವನ್ನು ಶೇ. 7 ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಈ ವಿಷಯದಲ್ಲಿ ನೆರವು ನೀಡಬೇಕು. ಜನನ ಪ್ರಮಾಣವನ್ನು ಅದೇರೀತಿ ರಾಷ್ಟ್ರ ಮಟ್ಟದಲ್ಲಿಯೂ ಅನುಷ್ಠಾನವಾಗಬೇಕು. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಪ್ರತ್ಯೇಕ ಅನುದಾನ ನೀಡಬೇಕು. ಮಹಿಳಾ ಸಬಲೀಕರಣಕ್ಕಾಗಿ ನೆರವು ನೀಡಬೇಕು. ಏಕಲವ್ಯ ವಸತಿ ಶಾಲೆಗಳ ನಿಯಮಾವಳಿಯಲ್ಲಿ ಸಡಿಲಿಕೆಗೊಳಿಸಿ ರಾಜ್ಯಕ್ಕೆ ಏಕಲವ್ಯ ವಸತಿ ಶಾಲೆಗಳನ್ನು ಮಂಜೂರು ಮಾಡಲು ಶಿಫಾರಸು ಮಾಡಬೇಕು ಎಂದು ಕೋರಿದರು.
ಹಿರಿಯ ಪೊಲೀಸ್ ಅಧಿಕಾರಿಗಳ ವಾಗ್ವಾದ ಸುಳ್ಳು- ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್

