ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ : ಆಯುಕ್ತ ಮುಲೈ ಮುಗಿಲನ್

ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ ,31 ರಿಂದ ಜಾರಿಗೊಳಿಸುತ್ತಿರುವ  ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ  ನೋಂದಣಿ ಮತ್ತು ಮುದ್ರಾಂಕ ಶುಲ್ಕವು  ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ  ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ  ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ ,ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ.
ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು ದಿನಾಂಕ: 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ  ಶೇ.2 ರಷ್ಟು ಪರಿಷ್ಕರಿಸಿದೆ.
ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್‌ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.
ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2  ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.
ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles