‘ದೃಢ ಕರ್ನಾಟಕದ ಸಂಕಲ್ಪ-ವಿಧಾಸೌಧದಲ್ಲಿ “ಶತಕದ ಪಥ, ಪ್ರಗತಿಯ ರಥ” ವಿಶೇಷ ಕಾರ್ಯಕ್ರಮ

ಬೆಂಗಳೂರು:ಕರ್ನಾಟಕ ಸರ್ಕಾರದ(Karnataka Government) ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್(CM D.K.Shivakumar) ಅವರ ನೇತೃತ್ವದ ಆಡಳಿತವು 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, “ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ” ಎಂಬ ವಿಶೇಷ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ 2026ನೇ ಸೆಪ್ಟೆಂಬರ್ 10 ರ ಗುರುವಾರ ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಘನ ಉಪಸ್ಥಿತರಿದ್ದು, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ
ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಲ್ಲದೆ  ರಾಜ್ಯ ಸಂಪುಟದ ಗೌರವಾನ್ವಿತ ಎಲ್ಲಾ ಸಚಿವರು, ಶಾಸಕರು ಮತ್ತು ರಾಜ್ಯ ಸಭಾ‌ ಸದಸ್ಯರು, ಲೋಕಸಭಾ‌ ಸದಸ್ಯರು ಹಾಗೂ ವಿಧಾನಪರಿಷತ್ತಿನ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿಗಳ ಸಂವಾದ :
ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಒಳಗೊಂಡಂತೆ, ಸಮಾಜದ ವಿವಿಧ ವರ್ಗಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಸಂವಾದ ನಡೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಪೌರಕಾರ್ಮಿಕರು ಭಾಗವಹಿಸಲಿದ್ದು, ರಾಜ್ಯ ಸರ್ಕಾರದ ಜನಪರ ಯೋಜನೆಗಳು ಜನರ ಜೀವನದಲ್ಲಿ ತಂದಿರುವ ಬದಲಾವಣೆಗಳು ಮತ್ತು ಅಭಿವೃದ್ಧಿ ಪಥದ ಕುರಿತು  ಚರ್ಚೆ ನಡೆಯಲಿದೆ.

ಸೆ. 21ರಿಂದ ವಿಧಾನಸಭೆಯ ವಿಶೇಷ ಅಧಿವೇಶನ

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles