RGUHS ರಾಗಾಆವಿವಿಯಲ್ಲಿ ಯೋಗ ದಿನಾಚರಣೆ – 45 ಸಾವಿರ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

• ಎಸ್‌ಡಿಎಂ ಯೋಗ (SDM Yoga) ಮತ್ತು ನ್ಯಾಚುರೋಪಥಿ (Natoropathy) ಸಂಸ್ಥೆಯ ಯೋಗಪಟುಗಳಿಂದ 10 ದಿನಗಳ ತರಬೇತಿ
• 600 ಸಂಸ್ಥೆಗಳ, 45 ಸಾವಿರಕ್ಕೂ ಅಧಿಕ ವಿದ್ಯಾರ್ಥಿ-ಸಿಬ್ಬಂದಿ ಯೋಗ ದಿನದಲ್ಲಿ ಭಾಗಿ
• ಎಲ್ಲಾ ಅನುದಾನಿತ ಕಾಲೇಜುಗಳಲ್ಲಿ ಖಡ್ಡಾಯ ಯೋಗ ತರಬೇತಿಗೆ ಸೂಚನೆ

ಯೋಗವು ಕೇವಲ ಒಂದು ದಿನದ ಆಚರಣೆಯಾಗದೆ, ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಮಾನಸಿಕ ಹಾಗೂ ಶಾರೀರಿಕ ಯೋಗಕ್ಷೇಮಕ್ಕೆ ಯೋಗ ಸಹಾಯಕಾರಿ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (Rajiv Gandhi University of Health Sciences) ಕುಲಪತಿಗಳಾದ ಡಾ. ಭಗವಾನ್ ಬಿ.ಸಿ (Dr. Bhagavan BC) ಅಭಿಪ್ರಾಯಪಟ್ಟರು.

12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಭಾನುವಾರ ಬೆಳಿಗ್ಗೆ 7 ರಿಂದ 7.40ರವರೆಗೆ ನಡೆದ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಧುನಿಕ ಜೀವನಶೈಲಿಯಿಂದ ಉಂಟಾಗುವ ಮಾನಸಿಕ ಒತ್ತಡ ಹಾಗೂ ಆತಂಕದಿಂದ ಮುಕ್ತರಾಗಲು ಯೋಗ ಅತ್ಯುತ್ತಮ ಸಾಧನವಾಗಿದೆ. ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನ, ಮಾನಸಿಕ ಸಮತೋಲನ ಹಾಗೂ ಏಕಾಗ್ರತೆಯನ್ನು ಸಾಧಿಸಬಹುದು. ಅಲ್ಲದೆ, ಮಾನಸಿಕ ಮತ್ತು ಭಾವನಾತ್ಮಕ ಸ್ಥಿರತೆಯನ್ನು ಇದು ವೃದ್ಧಿಸುತ್ತದೆ. ದೇಹಕ್ಕೆ ಮುಪ್ಪು ಬಂದರೂ ಮನಸ್ಸು ಚೈತನ್ಯದಿಂದ ಇರಲು ಯೋಗ ನೆರವಾಗುತ್ತದೆ. ಆದ್ದರಿಂದ ಯೋಗವನ್ನು ಪ್ರತಿದಿನದ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಯೋಗವು ಮನಸ್ಸು, ದೇಹ, ಆತ್ಮ ಹಾಗೂ ನಿಸರ್ಗದ ನಡುವಿನ ಸಮನ್ವಯವನ್ನು ಸಾಧಿಸುವ ಭಾರತೀಯ ಜ್ಞಾನ ಪರಂಪರೆಯ ಅಮೂಲ್ಯ ಕೊಡುಗೆಯಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗ ಪ್ರಮುಖ ಸಾಧನವಾಗಿದ್ದು, ಯುವಜನತೆ ಯೋಗದತ್ತ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಅವರು ಕರೆ ನೀಡಿದರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕಳೆದ ಹತ್ತು ದಿನಗಳಿಂದ ವಿಶೇಷ ಯೋಗ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಸ್‌ಡಿಎಂ ಯೋಗ ಮತ್ತು ನ್ಯಾಚುರೋಪಥಿ ಸಂಸ್ಥೆ ಹಾಗೂ ರಾಜ್ಯದ ಇತರ ನ್ಯಾಚುರೋಪಥಿ ಕಾಲೇಜುಗಳ ಯೋಗಪಟುಗಳು ಮತ್ತು ತಜ್ಞರು ತರಬೇತಿ ನೀಡಿದರು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ವಿವಿಧ ಆರೋಗ್ಯ ವಿಜ್ಞಾನ ಸಂಸ್ಥೆಗಳ ಪ್ರತಿನಿಧಿಗಳು ಇದರ ಪ್ರಯೋಜನ ಪಡೆದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಜನೆಯಲ್ಲಿ ರಾಜ್ಯದ ಸುಮಾರು 600 ಆರೋಗ್ಯ ವಿಜ್ಞಾನ ಸಂಸ್ಥೆಗಳ 45 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಏಕಕಾಲದಲ್ಲಿ ಯೋಗಾಭ್ಯಾಸ ನಡೆಸಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಯೋಗ ತರಬೇತುದಾರರು ಉಪಸ್ಥಿತರಿದ್ದರು.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles