ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ದಶಕಗಳ ಕನಸು ನನಸು: ತಗಡೂರು

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ.
ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ ಲವಾಗಿ ಈ ಯೋಜನೆ ಜಾರಿಗೆ ಬರುತ್ತಿದೆ.
ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಬಸ್ ಪಾಸ್ ನೀಡಬೇಕೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳ ಮುಂದೆ ಹಕ್ಕೋತ್ತಾಯ ಮಂಡಿಸಿದ್ದರು. ವೇದಿಕೆಯಲ್ಲಿಯೇ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಿಎಂ ಮನವೊಲಿಕೆ ಮಾಡಿದರು. ಕೂಡಲೇ ಅದಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಉಚಿತ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದಲ್ಲದೆ, ಬಜೆಟ್‌ನಲ್ಲಿಯೂ ೋಷಣೆ ಮಾಡಿದ್ದು, ಮರೆಯಲಾಗದ ಕ್ಷಣವಾಗಿತ್ತು.
ಬಸ್ ಪಾಸ್ ಯೋಜನೆ ಜಾರಿಗೆ ನೀಡಲು ಮೊದಲ ಬಾರಿಗೆ ಮನಸ್ಸು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಸ್ತ ಪತ್ರಕರ್ತರ ಪರವಾಗಿ ಧನ್ಯವಾದಗಳು.
ಈ ಯೋಜನೆ ಜಾರಿ ಹಿಂದೆ ತೆರೆ ಮರೆಯ ಶಕ್ತಿಯಾಗಿ ಸಂಘಟನೆ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ವಾರ್ತಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles