ಮಂಗಳೂರಿನ ತಣ್ಣೀರುಬಾವಿ ಬೀಚ್‌ನಲ್ಲಿ ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ಚಾಲನೆ

ಮಂಗಳೂರು: ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್‌ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’(Service for Cleanliness) ಅಭಿಯಾನಕ್ಕೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ(Dr.Yatheendra Siddaramayya) ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪರಿಸರ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸ್ವಚ್ಛ ಹಾಗೂ ನೈರ್ಮಲ್ಯಯುತ ವಾತಾವರಣ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವುದರ ಜೊತೆಗೆ, ಪ್ರವಾಸೋದ್ಯಮದ ಬೆಳವಣಿಗೆಯ ಮೂಲಕ ಸ್ಥಳೀಯ ಆರ್ಥಿಕತೆಗೂ ಉತ್ತೇಜನ ನೀಡುತ್ತದೆ ಎಂದು ಹೇಳಿದರು.

ರಾಜ್ಯದ ನಗರ ಪ್ರದೇಶಗಳ ಪ್ರಮುಖ ಸ್ಥಳಗಳ ಸೌಂದರ್ಯೀಕರಣ, ಸಾರ್ವಜನಿಕ ಪ್ರದೇಶಗಳ ನೈರ್ಮಲ್ಯ ಕಾಪಾಡುವುದು ಹಾಗೂ ತ್ಯಾಜ್ಯ ವಿಂಗಡಣೆಗೆ (Waste Segregation) ಹೆಚ್ಚಿನ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ. ಸ್ವಚ್ಛತೆಯನ್ನು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ನಿರಂತರ ಜನಾಂದೋಲನವಾಗಿ ರೂಪಿಸಬೇಕು ಎಂದು ಅವರು ಕರೆ ನೀಡಿದರು.

ಅಭಿಯಾನದ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಸಾಮೂಹಿಕವಾಗಿ ‘ಸ್ವಚ್ಛತಾ ಪ್ರತಿಜ್ಞೆ’ ಸ್ವೀಕರಿಸಿದರು. ಬಳಿಕ ಬೀಚ್ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶ್ರೀ ಭಾಸ್ಕರ್ ಮೊಯ್ಲಿ, ಆಯುಕ್ತರಾದ ಶ್ರೀ ರಾಹುಲ್ ರತ್ನಂ ಪಾಂಡೆ, ಪೌರಕಾರ್ಮಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಯುವಜನರು ಸಕ್ರಿಯವಾಗಿ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಿದರು.

ಕರಾಮುವಿಯಿಂದ ಕೆಪಿಎಸ್‌ಸಿ, ಕೆಇಎ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles