ತಂದೆ-ತಾಯಿ ಹಾಗೂ ಗುರುಗಳಿಗೆ ಮೊದಲು ಗೌರವ ನೀಡಬೇಕು: ಡಿ.ಆರ್. ವಿಜಯಸಾರಥಿ 

ಸಿಂಧೂರ ಪ್ರತಿಭಾ ಪುರಸ್ಕಾರ–2026: (Sindhoor Prathibha Puraskar) ಎಸ್‌ಎಸ್‌ಎಲ್‌ಸಿಯಲ್ಲಿ 100ಕ್ಕೂ ಅಧಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವ ವಿದ್ಯಾರ್ಥಿಗಳು ಮೊದಲು ತಂದೆ-ತಾಯಿ ಹಾಗೂ ಗುರುಗಳಿಗೆ ಗೌರವ ನೀಡಬೇಕು: ಡಿ.ಆರ್. ವಿಜಯಸಾರಥಿ (D.R.Parthasarathi) ಶ್ರೀ ವಾಸವಿ ಸಮೂಹ (Sri Vasavi Group of Institutions) ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಹಾಗೂ ಶ್ರೀ ವಾಸವಿ ಇಂಟರ್‌ನ್ಯಾಷನಲ್ ಪಿ.ಯು. ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾದ “ಸಿಂಧೂರ ಪ್ರತಿಭಾ ಪುರಸ್ಕಾರ–2026” ಕಾರ್ಯಕ್ರಮ ವಿಜಯನಗರದ ಶ್ರೀ ಮಂಜುನಾಥ ವಿದ್ಯಾಲಯದ ಸಭಾಂಗಣದಲ್ಲಿ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ 100ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರತಿಭಾ ಪುರಸ್ಕಾರ ಹಾಗೂ ಪ್ರಶಂಸಾ ಪತ್ರಗಳನ್ನು ನೀಡಿ ಗೌರವಿಸಲಾಯಿತು.
 ವಾಸವಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞ ಡಿ.ಆರ್. ವಿಜಯಸಾರಥಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಅರಿತು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ಯಶಸ್ಸಿನ ಹಿಂದೆ ತಂದೆ-ತಾಯಿ ಮತ್ತು ಶಿಕ್ಷಕರ ತ್ಯಾಗ, ಮಾರ್ಗದರ್ಶನ ಹಾಗೂ ಆಶೀರ್ವಾದ ಅಡಗಿದೆ. ಇವರ ಆಶೀರ್ವಾದವೇ ನಿಜವಾದ ಸಂಪತ್ತು” ಎಂದು ಹೇಳಿದರು. “ಶಿಕ್ಷಣ ಅಂಕ ಗಳಿಕೆಗೆ ಸೀಮಿತವಾಗಿರಬಾರದು. ಉತ್ತಮ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ, ಪರಿಶ್ರಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸಹ ಅಷ್ಟೇ ಮುಖ್ಯ.
ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಹಾಗೂ ಗುರಿಗೆ ಅನುಗುಣವಾಗಿ ಸರಿಯಾದ ಶಿಕ್ಷಣದ ಮಾರ್ಗವನ್ನು ಆರಿಸಿಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಅಗತ್ಯಕ್ಕೆ ಮಾತ್ರ ಬಳಸಬೇಕು. ಉತ್ತಮ ಪುಸ್ತಕಗಳ ಓದು, ಕೌಶಲ್ಯಾಭಿವೃದ್ಧಿ ಹಾಗೂ ಸಕಾರಾತ್ಮಕ ಚಿಂತನೆಯಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಸಲಹೆ ನೀಡಿದರು ಎಂದರು. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವುದು ವಾಸವಿ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಮುಖ ಧ್ಯೇಯವಾಗಿದೆ. ಆರ್ಥಿಕವಾಗಿ ಹಿಂದುಳಿದರೂ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣ, ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡುವ ಕಾರ್ಯವನ್ನು ಸಂಸ್ಥೆ ನಿರಂತರವಾಗಿ ಕೈಗೊಳ್ಳುತ್ತಿದೆ ಎಂದು ಡಿ.ಆರ್. ವಿಜಯಸಾರಥಿ ತಿಳಿಸಿದರು.
ಕಾರ್ಯಕ್ರಮದಲ್ಲಿ   ಬಿಬಿಎಂಪಿ ಮಾಜಿ ಸದಸ್ಯ ಹೆಚ್. ರವೀಂದ್ರ    ಶ್ರೀ ಮಂಜುನಾಥ ವಿದ್ಯಾಲಯದ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ಡಾ. ಜೆ.ಎಸ್. ನಾಗರಾಜು, ವರಮಹಾಲಕ್ಷ್ಮಿ, ಮುಖ್ಯೋಪಾಧ್ಯಾಯರಾದ ಎನ್. ರಘು, ಲೋಹಿತ್, ಮಲ್ಲಿಕಾರ್ಜುನ ಕನ್ನಡಿ, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles