ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ ವಸ್ತುಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಸ್ಮಾರ್ಟ್ ಕ್ವಿಕ್ ಇ–ಕಾಮರ್ಸ್ ಸಂಸ್ಥೆಯ(Smart Quick E-Commerce organization) ಗ್ರಾಹಕ ಸ್ನೇಹಿ ಬೃಹತ್ ಮಳಿಗೆ ನಿಯೋ ಫ್ರೆಶ್‌ನ 6ನೇ ಶಾಖೆ ಹೊಸೂರು ರಸ್ತೆಯ ಕೂಡ್ಲು (Koodlu Village) ವಿಲೇಜ್‌ನಲ್ಲಿ ಶುಭಾರಂಭಗೊಂಡಿತು.

ಸ್ಪಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಮಹಾಸ್ವಾಮೀಜಿ(Nanjavadutha Mahaswamiji) ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ, ಸ್ಮಾರ್ಟ್ ಕ್ವಿಕ್ ಸಂಸ್ಥೆಯ ಸಂಸ್ಥಾಪಕರಾದ ದೀಪುಗೌಡ, ಮತ್ತು ಸುಧೀಪ್ ಗೌಡ, ಶಿವು ಗೌಡ, ಉದಯ ಶೆಟ್ಟಿ, ಕಲ್ಯಾಣ್ ಪಾಟೀಲ್, ಸೇತುಕುಮಾರ್, ನವೀನ್, ಚಂದ್ರಶೇಖರ್ ಹಾಗೂ ಸುನೀಲಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ನಂಜಾವಧೂತ ಮಹಾಸ್ವಾಮೀಜಿ, ಅಗತ್ಯ ವಸ್ತುಗಳ ಮಾರಾಟ ಕ್ಷೇತ್ರದಲ್ಲಿ ಕನ್ನಡಿಗ ಉದ್ಯಮಿ ದೀಪುಗೌಡ ಅವರು ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ವ್ಯಾಪಾರ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿರುವ ಅವರು ಮುಂದಿನ ದಿನಗಳಲ್ಲಿ ವೈದ್ಯಕೀಯ ಹಾಗೂ ಸಮಾಜಮುಖಿ ಸೇವಾ ಕ್ಷೇತ್ರಗಳಲ್ಲಿಯೂ ಹೆಜ್ಜೆ ಇಡಬೇಕು. ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕನ್ನಡಿಗ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕಾಗಿದೆ ಎಂದು ಹೇಳಿದರು.

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರು ಉದ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗಿ ಬೆಳೆಯುತ್ತಿರುವುದು ಸಂತಸದ ವಿಷಯ. ಉದ್ಯಮಶೀಲತೆ ಸಮಾಜದ ಆರ್ಥಿಕ ಅಭಿವೃದ್ಧಿಗೆ ನೆರವಾಗುವುದರ ಜೊತೆಗೆ ಯುವಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ದೀಪುಗೌಡ ಅವರು ಅನೇಕ ಯುವಕರಿಗೆ ಉದ್ಯೋಗ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿರುವುದು ಶ್ಲಾಘನೀಯ. ಇಂತಹ ಕನ್ನಡಿಗ ಉದ್ಯಮಿಗಳ ಯಶಸ್ಸು ಮತ್ತಷ್ಟು ಯುವಕರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.

ಸಂಸ್ಥೆಯ ಸಂಸ್ಥಾಪಕ ದೀಪುಗೌಡ ಮಾತನಾಡಿ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ನ್ಯಾಯಸಮ್ಮತ ದರದಲ್ಲಿ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಈ ವರ್ಷಾಂತ್ಯದೊಳಗೆ ರಾಜ್ಯದ ವಿವಿಧ ಭಾಗಗಳಲ್ಲಿ 20 ಮಳಿಗೆಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, ಸದ್ಯದಲ್ಲೇ ಇನ್ನೂ ಮೂರು ಸೂಪರ್ ಮಾರ್ಕೆಟ್‌ಗಳನ್ನು ಲೋಕಾರ್ಪಣೆ ಮಾಡಲಿದ್ದೇವೆ. ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಜೊತೆಗೆ ಅತ್ಯುತ್ತಮ ಗ್ರಾಹಕ ಸೇವೆ ನೀಡುವತ್ತ ನಮ್ಮ ಸಂಸ್ಥೆ ಬದ್ಧವಾಗಿದೆ ಎಂದು ತಿಳಿಸಿದರು.

ನೂತನ ನಿಯೋ ಫ್ರೆಶ್ ಮಳಿಗೆಯಲ್ಲಿ ದಿನಸಿ ಸಾಮಗ್ರಿಗಳು, ತಾಜಾ ಹಣ್ಣು–ತರಕಾರಿಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಗ್ರಾಹಕರ ದೈನಂದಿನ ಅಗತ್ಯಗಳಿಗೆ ಬೇಕಾದ ವಿವಿಧ ಉತ್ಪನ್ನಗಳನ್ನು ಒಂದೇ ಸ್ಥಳದಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಗಣ್ಯರು, ಗ್ರಾಹಕರು ಹಾಗೂ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

Topics

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

ನಿತ್ಯ ಪಂಚಾಂಗ 08-06-2026 MONDAY ಸೋಮವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 08.06.2026 MONDAY.ಸೋಮವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles