ಗೆಲುವಿನ ಸವಿಯನ್ನು ಅರಿಯಲು ಸೋಲಿನ ಅನುಭವ ಅಗತ್ಯ; ಸೌಮ್ಯ ರೆಡ್ಡಿ

ಬೆಂಗಳೂರು: “ಗೆಲುವಿನ ಸವಿಯನ್ನು ಅರಿಯಲು ಸೋಲಿನ ಅನುಭವವೂ ಅಗತ್ಯ. ನೀವು ಇನ್ನು 10 ವರ್ಷಗಳ ನಂತರ ಏನಾಗಬೇಕೆಂದು ಬಯಸುತ್ತೀರೋ, ಅದನ್ನು ಇಂದೇ ಕಲ್ಪಿಸಿಕೊಳ್ಳಿ. ಆ ಗುರಿಯತ್ತ ನಿರಂತರವಾಗಿ ಸಾಗುತ್ತಿರಿ,” ಎಂದು ಮಾಜಿ ವಿಧಾನಸಭಾ ಸದಸ್ಯೆ (Ex. MLA) ಹಾಗೂ ಕಾಂಗ್ರೆಸ್ ಮಹಿಳಾ (Congress Mahila Wing) ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ (Sowmya Reddy) ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸುರಾನ ಕಾಲೇಜಿನ (Surana College) ಸೌತ್ ಎಂಡ್ ಕ್ಯಾಂಪಸ್‌ನಲ್ಲಿ ನಡೆದ ‘ಮಲ್ಟಿವರ್ಸ್ ಎಕ್ಸ್‌ಪೋ 2026’ (Multiverse Expo 2026) ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲೇ ಗುರಿ, ಪರಿಶ್ರಮ ಮತ್ತು ಸೋಲನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಅಂತರರಾಷ್ಟ್ರೀಯ ಚಿತ್ರಕಲಾವಿದ ಹಾಗೂ ಸಾಹಿತಿ ಡಾ. ಎಂ.ಎಸ್. ಮೂರ್ತಿ, “ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ಬೆಳವಣಿಗೆಗೆ ಇಂತಹ ಅನುಭವಾಧಾರಿತ ಕಾರ್ಯಕ್ರಮಗಳು ಅತ್ಯಂತ ಅಗತ್ಯ,” ಎಂದು ಹೇಳಿದರು.

‘ಮಲ್ಟಿವರ್ಸ್ ಎಕ್ಸ್‌ಪೋ 2026’ ಅನ್ನು ವಿದ್ಯಾರ್ಥಿಗಳ ಸೃಜನಶೀಲತೆ, ನಾಯಕತ್ವ, ತಂಡದ ಕೆಲಸ ಮತ್ತು ಪ್ರತಿಭೆಯನ್ನು ಅನಾವರಣಗೊಳಿಸುವ ಅಂತರ ಕಾಲೇಜು ವೇದಿಕೆಯಾಗಿಸಿ ರೂಪಿಸಲಾಗಿತ್ತು. ಬಿಎ, ಬಿಎಸ್‌ಸಿ, ಬಿಕಾಂ, ಬಿಬಿಎ, ಬಿಸಿಎ, ಎಂಎ, ಎಂಎಸ್‌ಸಿ ಹಾಗೂ ಎಂಕಾಂ ವಿಭಾಗಗಳು ವಿವಿಧ ಸ್ಪರ್ಧೆಗಳು, ಆಟಗಳು, ಮನರಂಜನಾ ಕಾರ್ಯಕ್ರಮಗಳು, ವಸ್ತು ಪ್ರದರ್ಶನಗಳು ಮತ್ತು ಕರಕುಶಲ ಪ್ರದರ್ಶನಗಳನ್ನು ಆಯೋಜಿಸಿದ್ದವು.

ಯುವಕ ಸಂಘದ ಆಶ್ರಯದಲ್ಲಿ ವಿವಿಧ ಆಟಗಳು ಮತ್ತು ಚಟುವಟಿಕೆಗಳು ನಡೆದಿದ್ದು,  25ಕ್ಕೂ ಹೆಚ್ಚು ಕಾಲೇಜುಗಳಿಂದ 3,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಭಿನ್ನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಸಮಾರೋಪದ ಅಂಗವಾಗಿ ಸುರಾನ ವಿದ್ಯಾಲಯ, ಸುರಾನ ಪೀಣ್ಯ ಮತ್ತು ಸುರಾನ ಸೌತ್ ಎಂಡ್ ಕಾಲೇಜಿನ ವಿದ್ಯಾರ್ಥಿಗಳು ‘Roots of India’ ಹೆಸರಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಕೆ.ಎನ್., ಪಿಯುಸಿ ಪ್ರಾಂಶುಪಾಲ ಪ್ರೊ. ಚಂದ್ರಶೇಖರಪ್ಪ, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles