ಲಲಿತಕಲಾ ಅಕಾಡೆಮಿಯಿಂದ ಚಿತ್ರಕಲಾ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧೆ

ಬೆಂಗಳೂರು, ಜುಲೈ 06 : ಕರ್ನಾಟಕ ಲಲಿತಕಲಾ ಅಕಾಡೆಮಿಯು(Lalithakala Adacemy) ಪ್ರಪ್ರಥಮ ಬಾರಿಗೆ ಚಿತ್ರಕಲಾ ವಿದ್ಯಾರ್ಥಿಗಳಿಗಾಗಿ ವಿಶೇಷವಾದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು(State-level art competition) ಆಯೋಜಿಸಿದೆ.

ಕರ್ನಾಟಕದ ಯಾವುದೇ ಕಲಾ ಶಾಲೆಗಳಲ್ಲಿ ಯಾವುದೇ ಹಂತದಲ್ಲಿ ವ್ಯಾಸಂಗ(Study at any level) ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಈ ಸ್ಪರ್ಧೆಯ ಮೂಲಕ ಮುಕ್ತ(Free) ಅವಕಾಶವನ್ನು ಕಲ್ಪಿಸಿಕೊಡಲಾಗಿದ್ದು, ಅರ್ಜಿ ಸಲ್ಲಿಸಲು 2026 ಆಗಸ್ಟ್ 06 ಕೊನೆಯ ದಿನಾಂಕವಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ತಾವು ರಚಿಸಿರುವ ಕಲಾಕೃತಿಗಳ 2 ಭಾವಚಿತ್ರಗಳು(Photographs) ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ಶಾಲೆಯ ಪ್ರಾಂಶುಪಾಲರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.  ಗೂಗಲ್ ಫಾರ್ಮ್  ಮೂಲಕ ಆನ್‍ಲೈನ್‍ನಲ್ಲಿ(Online) ಅಗತ್ಯ ದಾಖಲೆಗಳನ್ನು(documents) ಲಗತ್ತಿಸಿ ಸಲ್ಲಿಸಬೇಕು. ಅಧಿಕೃತ ವೆಬ್‍ಸೈಟ್ www.lalitkala.karnataka.gov.in ಮೂಲಕ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂರವಾಣಿ ಸಂಖ್ಯೆ 080-22480297 ಅನ್ನು ಸಂಪರ್ಕಿಸಬಹುದಾಗಿದೆ.

ಸ್ಪರ್ಧೆಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಪ್ರಕೃತಿಯ ಮಡಿಲಿನಲ್ಲಿ ವಿಶೇಷವಾದ “ಚಿತ್ರಕಲಾ ಶಿಬಿರ”ವನ್ನು(Art Camp) ಆಯೋಜಿಸಲಾಗುತ್ತದೆ.

ಈ ಶಿಬಿರದಲ್ಲಿ ಅತ್ಯುತ್ತಮ ಚಿತ್ರ ರಚಿಸುವ ಕನಿಷ್ಠ 6 ಹಾಗೂ ಗರಿಷ್ಠ 10 ವಿದ್ಯಾರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿ ರೂ. 15,000/- ನಗದು ಬಹುಮಾನ, ಸ್ಮರಣಿಕೆ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ.

ಇದರೊಂದಿಗೆ “2025ರ ಉತ್ತಮ ಕಲಾ ವಿದ್ಯಾರ್ಥಿ” ಎಂಬ ಪ್ರಮಾಣ ಪತ್ರವನ್ನು ನೀಡಿ ಪುರಸ್ಕರಿಸಲಾಗುವುದು.
ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯನ್ನು ವಿಸ್ತರಿಸಲು ಈ ಸುವರ್ಣ ಅವಕಾಶವನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಅಕಾಡೆಮಿಯ ರಿಜಿಸ್ಟಾರ್ N.ನಮ್ರತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ(Implementation) ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ. ವಿಕಸಿತ...

ಕೆಪಿಎಸ್‍ಸಿ(KPSC): ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ(Notified) ಜಲಸಂಪನ್ಮೂಲ(Water Resources) ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್...

ಡಿಪ್ಲೊಮಾ (ಕೃಷಿ) ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ರೇಷ್ಮೆ...

Topics

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ?(K R cirlce) ವಿಶ್ವೇಶ್ವರಯ್ಯ...

ಎಸ್‍ಐಆರ್: ರಾಜ್ಯ ಸರಕಾರದ ಷಡ್ಯಂತ್ರ- ಪ್ರಲ್ಹಾದ್ ಜೋಶಿ

ಬೆಂಗಳೂರು: ಎಸ್‍ಐಆರ್‍ದಲ್ಲಿ ರಾಜ್ಯ ಸರಕಾರವು ಬಹಳಷ್ಟು ಷಡ್ಯಂತ್ರ ರಚಿಸುತ್ತಿದೆ ಎಂದು ಕೇಂದ್ರ...

Related Articles