ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಶ್ರೀಕೃಷ್ಣ ಕಾಲೇಜಿಗೆ ಪದಕಗಳ ಸಾಧನೆ

ಬೆಂಗಳೂರು: ಡಾ.ಮನಮೋಹನ್ ಸಿಂಗ್(Dr.Manamohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳ ವತಿಯಿಂದ ನ. 13 ಮತ್ತು 14ರಂದು ಆಯೋಜಿಸಲಾಗಿದ್ದ ಅಂತರ್ ಕಾಲೇಜು ಮಟ್ಟದ ಕರಾಟೆ ಹಾಗೂ ಪೆನ್ಕಾಕ್ ಸಿಲಾಥ್ ಪಂದ್ಯಾವಳಿಗಳಲ್ಲಿ ಬನಶಂಕರಿ 3ನೇ ಹಂತದ ಐಟಿಐ(ITI) ಬಡಾವಣೆಯ ಶ್ರೀಕೃಷ್ಣ ಪದವಿ ಕಾಲೇಜಿನ(Shrikrishna Degree College) ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ರಾಜಾಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಯಲಹಂಕದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಈ ಪಂದ್ಯಾವಳಿಗಳಲ್ಲಿ ಶ್ರೀಕೃಷ್ಣ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕರಾಟೆ ಸ್ಪರ್ಧೆಯಲ್ಲಿ ಎರಡು ಕಂಚಿನ ಪದಕ ಹಾಗೂ ಒಂದು ಬೆಳ್ಳಿ ಪದಕವನ್ನು ಗೆದ್ದ ವಿದ್ಯಾರ್ಥಿಗಳು, ಪೆನ್ಕಾಕ್ ಸಿಲಾಥ್ ಸ್ಪರ್ಧೆಯಲ್ಲಿ ಎರಡು ಕಂಚಿನ ಪದಕ, ಒಂದು ಬೆಳ್ಳಿ ಪದಕ ಮತ್ತು ಒಂದು ಚಿನ್ನದ ಪದಕವನ್ನು ಜಯಿಸಿದ್ದಾರೆ.

ಪೆನ್ಕಾಕ್ ಸಿಲಾಥ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿ ಹರಿಕಿರಣ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿದೆ.

ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು, ಪ್ರಾಂಶುಪಾಲರಾದ ಡಾ. ಎನ್. ಉಷಾಕುಮಾರಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶ್ರೀಮಂತರಾಯ, ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ, ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ನೂತನ ಸಿಇಒ ಆಗಿ ದೀಪಕ್ ರಾಜಾವತ್ ನೇಮಕ

Hot this week

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

Topics

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ ಆಧಾರಿತ ಪರಿಸರ ಪುನರುಜ್ಜೀವನ ಮತ್ತು ಪರಿಸರ ಸಾಕ್ಷರತೆಯನ್ನು...

Related Articles