ಮಹಾತ್ಮ ಗಾಂಧೀಜಿ 156 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ. ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ. ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಿದೆ.

ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ 31 ಸಾವಿರ ರೂ. ದ್ವಿತೀಯ ಬಹುಮಾನ 21 ಸಾವಿರ ರೂ. ಮತ್ತು ತೃತೀಯ ಬಹುಮಾನ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ          3 ಸಾವಿರ ರೂ. ದ್ವಿತೀಯ ಬಹುಮಾನ 2 ಸಾವಿರ ರೂ ಮತ್ತು ತೃತೀಯ ಬಹುಮಾನ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗದಲ್ಲಿ :

1) ಸ್ವಚ್ಚತೆಯ ಪಾಠ – ಗಾಂಧೀಜಿಯವರ ಸಂದೇಶ, 2) ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ. 3) ಗಾಂಧೀಜಿಯವರ ಸ್ವಾತಂತ್ರ್ಯದ ಕನಸು – ನನ್ನ ಕಲ್ಪನೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ :

1) ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ, 2) ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ, 3) ಬದಲಾವಣೆ ನನ್ನಿಂದಲೇ ಆರಂಭ – ಗಾಂಧೀಜಿಯವರ ಪಾಠ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 1000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ :

1) ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ, 2) ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ – ತತ್ವಗಳ ಹೋಲಿಕೆ, 3) ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ – ಯುವಕರಿಗೆ ಗಾಂಧೀಜಿಯವರ ಪಾಠ. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳು ರೊಳಗಾಗಿ ಜಿಲ್ಲಾಡಳಿತದ ಸಹಯೋಗದೊಂದಿಗೆ ದಿನಾಂಕ : 06-09-2025 ರೊಳಗಾಗಿ ಸ್ಪರ್ಧೆ ಏರ್ಪಡಿಸಿ ನಂತರ ಮೌಲ್ಯಮಾಪನ ಮಾಡಿ ದಿನಾಂಕ : 12-09-2025 ಒಳಗಾಗಿ ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಬೇಕು. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ. ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ನಿಬಂಧನೆಗಳು :

ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಅಕರವಾಗಿ ಬಳಸಿದ ಪರಾಮರ್ಶನ / ಅಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾಯ್ದಿರಿಸಿಕೊಂಡಿರುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles