ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಮಲ್ಲಕಂಭ ಕ್ರೀಡೋತ್ಸವ: ಜುಲೈ 11 ರಿಂದ ಸ್ಪರ್ಧೆಗಳು ಆರಂಭ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ 2025-26ನೇ ಸಾಲಿನ ರಾಜ್ಯ ಮಟ್ಟದ ಮಲ್ಲಕಂಭ ಸ್ಪರ್ಧೆಯನ್ನು(State Level Mallkhamb sports) ಬೆಂಗಳೂರಿನ  ಜೆ.ಪಿ. ನಗರದ ಶ್ರೀ ದುರ್ಗಾಪರಮೇಶ್ವರಿ ಆಟದ ಮೈದಾನದಲ್ಲಿ(Play Ground) ಆಯೋಜಿಸಲಾಗಿದೆ.

ಜುಲೈ 11 ರಿಂದ ಜುಲೈ 12, 2026 ರವರೆಗೆ ಈ ಕ್ರೀಡಾ ಹಬ್ಬ ನಡೆಯಲಿದ್ದು, ಜುಲೈ 11 ರಂದು  ಬೆಳಿಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(CM.D.K.Shivakumar), ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್(Dr.G.Parameshwar) ಅವರು ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ.

ಈ ಕ್ರೀಡೋತ್ಸವದಲ್ಲಿ 14 ವರ್ಷದೊಳಗಿನ ಮತ್ತು 14 ವರ್ಷ ಮೇಲ್ಪಟ್ಟ ಬಾಲಕ ಹಾಗೂ ಬಾಲಕಿಯರಿಗಾಗಿ ವೈಯಕ್ತಿಕ ಮತ್ತು ಗುಂಪು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ವೈಯಕ್ತಿಕ ವಿಭಾಗ (Individual Apparatus): ಪೋಲ್ ಮತ್ತು ರೋಪ್ ಮಲ್ಲಕಂಭ ಸ್ಪರ್ಧೆಗಳು.

ಗುಂಪು ವಿಭಾಗ (Group Apparatus): 8 ಕ್ರೀಡಾಪಟುಗಳನ್ನೊಳಗೊಂಡ ಪಿರಮಿಡ್ ಸ್ಪರ್ಧೆ.

ಪ್ರತಿ ತಂಡವು ಒಟ್ಟು 18 ಸದಸ್ಯರನ್ನು ಒಳಗೊಂಡಿರಲಿದ್ದು, ಇದರಲ್ಲಿ 8 ಹೆಣ್ಣು ಮಕ್ಕಳು, 8 ಗಂಡು ಮಕ್ಕಳು, ಒಬ್ಬರು ಮಹಿಳಾ ತರಬೇತುದಾರರು ಹಾಗೂ ಒಬ್ಬರು ಪುರುಷ ತರಬೇತುದಾರರು ಇರುತ್ತಾರೆ.

ಸ್ಪರ್ಧೆಗಳನ್ನು ‘ಮಲ್ಲಕಂಭ ಫೆಡರೇಷನ್ ಆಫ್ ಇಂಡಿಯಾ’ ನಿಯಮಾವಳಿಗಳ ಪ್ರಕಾರ ನಡೆಸಲಾಗುತ್ತದೆ ಹಾಗೂ ಎರಡು ಮಾದರಿಯಲ್ಲಿ ಡೆಮೋ ಪ್ರದರ್ಶನ ನಡೆಯಲಿದೆ.

ಕ್ರೀಡಾಪಟುಗಳ ವಯಸ್ಸನ್ನು ಡಿಸೆಂಬರ್ 2025ರ ಅಂತ್ಯಕ್ಕೆ ಗಣನೆಗೆ ತೆಗೆದುಕೊಳ್ಳಲಾಗುವುದು. ಜನ್ಮ ಪ್ರಮಾಣ ಪತ್ರ/ ಎಸ್.ಎಸ್.ಎಲ್.ಸಿ. ಅಂಕಪಟ್ಟಿ/ಆಧಾರ್ ಕಾರ್ಡ್ ಕಡ್ಡಾಯ.

ವಿಜೇತ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ, ಪ್ರಮಾಣ ಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

Topics

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು...

Related Articles