ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ
ಬೆಂಗಳೂರು, ಜುಲೈ 03 :ರಾಜ್ಯದಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ರಂಜನ್ ಪಾಂಡೆ ಅವರು ತಿಳಿಸಿದರು.
ರಾಜ್ಯದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿ ಕುರಿತಂತೆ ಕೈಗೊಂಡಿರುವ ಕ್ರಮಗಳ ಕುರಿತು ವಿಕಾಸಸೌಧಲ್ಲಿಂದು ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಸಮನ್ವಯ ಸಮಿತಿ (State Level Coordination Committee – Tobacco Control) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಪರಿಶೀಲನೆ, ಇಲಾಖಾವಾರು ಪ್ರಗತಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಕೋಟ್ಪಾ (COTPA) ಕಾಯ್ದೆಯ ಪರಿಣಾಮಕಾರಿ ಅನುಷಾ್ಠನ, ಜಾಗೃತಿ ಕಾರ್ಯಕ್ರಮಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಗೃಹ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ, ಅರಣ್ಯ, ಪರಿಸರ ಮತ್ತು ಪರಿಸರಶಾಸ್ತ್ರ ಇಲಾಖೆ, ಪೊಲೀಸ್ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯ ಮಟ್ಟದ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಮುಂದಿನ ಸಭೆಗೆ ಆಗಮಿಸುವ ಎಲ್ಲಾ ಸದಸ್ಯರು ತಮ್ಮ ಇಲಾಖೆಯಲ್ಲಿ ತಂಬಾಕು ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕ್ರಿಯಾ ವರದಿ (Action Taken Report) ಹಾಗೂ ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ಪ್ರಧಾನ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಸೂಚಿಸಿದರು.
