ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗಬಾರದು; ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು – ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ದೇವನಹಳ್ಳಿ / ಬೆಂಗಳೂರು: ವಿದ್ಯಾರ್ಥಿಗಳು ಕೇವಲ ಉದ್ಯೋಗ(Job) ಹುಡುಕುವವರಾಗದೆ ಉದ್ಯೋಗ ಸೃಷ್ಟಿಸುವ(Create) ಉದ್ಯಮಿಗಳಾಗಬೇಕು(Enterprenuer) ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(CM D.K.Shivakumar) ತಿಳಿಸಿದರು.
ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ರಾಮಯ್ಯ ವಿಜ್ಞಾನ ಮತ್ತು ಮ್ಯಾನೇಜ್ ಮೆಂಟ್ ಸಂಸ್ಥೆ ಉದ್ಘಾಟನೆ ಹಾಗೂ ನಾರಾಯಣ ಪ್ರಜ್ಞಾಲಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ವಿಶ್ವದ 80ಕ್ಕೂ ಹೆಚ್ಚು ಪ್ರಸಿದ್ಧ ವಿಶ್ವವಿದ್ಯಾಲಯಗಳು ಕರ್ನಾಟಕದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತಿ ತೋರುತ್ತಿವೆ. ಇತ್ತೀಚೆಗೆ ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ ಅದು ಬೆಂಗಳೂರು ಮತ್ತು ಕರ್ನಾಟಕದ ಮೂಲಕವೇ ಸಾಧ್ಯ ಎಂದು ಹೇಳಿದ್ದೆ  ಎಂದು ತಿಳಿಸಿದರು.
ಜಯರಾಂ ಅವರು ಗುರು ಸಮಾನರು : 
ಶಿಕ್ಷಣ ಕ್ಷೇತ್ರಕ್ಕೆ ಎಂ ಎಸ್ ರಾಮಯ್ಯ ಕುಟುಂಬದ ಕೊಡುಗೆ ತುಂಬಾ ದೊಡ್ಡದು. ರಾಮಯ್ಯ ಅವರು ಬೆಂಗಳೂರು ಮತ್ತು ಕರ್ನಾಟಕ ಬೆಳೆಯಲು ಕೊಡುಗೆ ನೀಡಿದ್ದಾರೆ. ಜಯರಾಂ ಅವರ ಹಾಗೂ ನನ್ನ ಪರಿಚಯ  40 ವರ್ಷಗಳಷ್ಟು ಹಳೆಯದು. ಜಯರಾಂ ಅವರನ್ನು ನಾನು ಗುರು ಎಂದು ಗೌರವಿಸುತ್ತೇನೆ. ಅವರಿಂದ ಸಾಕಷ್ಟು ವಿಚಾರಗಳನ್ನು ಕಲಿತಿದ್ದೇನೆ ಎಂದರು.
ಎಂ.ಎಸ್. ರಾಮಯ್ಯ ಸಂಸ್ಥೆಯು ಜೆಎಸ್‌ಡಬ್ಲ್ಯೂ ಸಮೂಹದ ಸಜ್ಜನ್ ಜಿಂದಾಲ್ ಅವರಂತಹ ಹಲವು ಬೃಹತ್ ಉದ್ಯಮಿಗಳನ್ನು ಮತ್ತು ನಾಯಕರನ್ನು ಸೃಷ್ಟಿಸಿದೆ. ಇಲ್ಲಿನ ಹಳೆಯ ವಿದ್ಯಾರ್ಥಿಗಳ ಸಮೂಹ ತುಂಬಾ ದೊಡ್ಡದು. ರಾಮಯ್ಯ ಸಂಸ್ಥೆಯ ಪಕ್ಕದಲ್ಲೇ ಇರುವ ಭಾರತೀಯ ವಿಜ್ಞಾನ ಸಂಸ್ಥೆ ಆರಂಭವಾಗಲು ಸ್ವಾಮಿ ವಿವೇಕಾನಂದ, ಜಮ್‌ಶೆಟ್‌ಜಿ ಟಾಟಾ ಹಾಗೂ ಮೈಸೂರು ಮಹಾರಾಜರ ದೂರದೃಷ್ಟಿ ಕಾರಣ. ವಿವೇಕಾನಂದ ಹಾಗೂ ಜಮ್‌ಶೆಟ್‌ಜಿ ಟಾಟಾ ಅವರ ನಡುವಿನ ಸಂವಾದದ ಕಾರಣಕ್ಕೆ ಮಹತ್ವದ ಸಂಸ್ಥೆಗೆ ಮೈಸೂರು ಮಹಾರಾಜರು ಜಾಗ ನೀಡಿದರು ಎಂದರು.
ಪರೋಪಕಾರಾಯ ಫಲಂತಿ ವೃಕ್ಷಾಃ ಶ್ಲೋಕದಂತೆ ಮರ, ನದಿ ಮತ್ತು ಹಸುಗಳು ಹೇಗೆ ತಮಗಾಗಿ ಅಲ್ಲದೆ ಸಮಾಜಕ್ಕಾಗಿ ಬಾಳುತ್ತವೆಯೋ, ಹಾಗೆಯೇ ರಾಮಯ್ಯ ಅವರ ಕುಟುಂಬದ ಆಸ್ತಿ ಮತ್ತು ಜ್ಞಾನವಂತ ಸಮಾಜ ನಿರ್ಮಾಣಕ್ಕೆ ಮುಡಿಪಾಗಿದೆ ಎಂದರು.
ಬೆಂಗಳೂರು ವಿದೇಶಿ ಉದ್ಯಮಿಗಳ ನೆಚ್ಚಿನ ಆಯ್ಕೆ :
ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾಗ ಅಮೆರಿಕ ರಾಯಭಾರಿಯವರು ಹೇಳಿದಂತೆ, ಅಮೆರಿಕಾದ 9/11 ರ ದುರಂತದ ನಂತರ, ಸುರಕ್ಷಿತ ಸ್ಥಳಕ್ಕಾಗಿ ಅಮೆರಿಕವು ದೆಹಲಿ, ಮುಂಬೈ, ಪುಣೆ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ನಗರಗಳ ಸಮೀಕ್ಷೆ ನಡೆಸಿತ್ತು. ಚೆನ್ನೈನ ಹವಾಮಾನ, ಮುಂಬೈ-ಪುಣೆಗಳ ಜನದಟ್ಟಣೆ ಹಾಗೂ ಹೈದರಾಬಾದ್‌ನ ಪರಿಸ್ಥಿತಿಗಳನ್ನು ಪರಿಶೀಲಿಸಿದ ನಂತರ, ಕೇವಲ ಜ್ಞಾನ, ಸಂಸ್ಕೃತಿ ಮತ್ತು ಪ್ರತಿಭೆ ಹೆಚ್ಚಿರುವ ಬೆಂಗಳೂರನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು ಎಂದರು.
ದಾವೋಸ್ ಗೆ ತೆರಳಿದಾಗ ಹೆಚ್ಚಿನ ಉದ್ಯಮಿಗಳು ಬೆಂಗಳೂರಿನ ಬಗ್ಗೆ ಹೆಚ್ಚಿನ ಆಸಕ್ತಿವಹಿಸುತ್ತಿದ್ದರು. ಏಕೆಂದರೆ ಬೆಂಗಳೂರಲ್ಲಿ 1 ಡಾಲರ್ ವೆಚ್ಚಕ್ಕೆ ಮುಂಬೈನಲ್ಲಿ ಮೂರುವರೆ ಡಾಲರ್ ಗೆ ಸಮ. ಅಷ್ಟು ವೆಚ್ಚ ಹೆಚ್ಚಳವಾಗಿದೆ ಅಲ್ಲಿ. ಎಲ್ಲರೂ ಬೆಂಗಳೂರನ್ನು ಮೊದಲ ಆಯ್ಕೆಯನ್ನಾಗಿ ನೋಡುತ್ತಿದ್ದಾರೆ. ಅಂತರರಾಷ್ಟ್ರೀಯ ನಾಯಕರೂ ಬೆಂಗಳೂರನ್ನು ಮೆಚ್ಚುತ್ತಿದ್ದಾರೆ. ಇಲ್ಲಿನ ಶಿಕ್ಷಣ ಗುಣಮಟ್ಟವೂ ಚೆನ್ನಾಗಿದೆ ಎಂದರು.
ಅಮೆರಿಕನ್ನರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಕರ್ನಾಟಕದಲ್ಲಿ ಕನಿಷ್ಠ 10 ಅಂತಾರಾಷ್ಟ್ರೀಯ ಶಾಲೆಗಳನ್ನು ಕೋರಿದ್ದರು. ಇಂದು ಭಾರತದಲ್ಲಿರುವ 138 ಅಂತಾರಾಷ್ಟ್ರೀಯ ಶಾಲೆಗಳ ಪೈಕಿ 37 ಶಾಲೆಗಳು ಕರ್ನಾಟಕದಲ್ಲೇ ಇವೆ. ಕರ್ನಾಟಕದಲ್ಲಿ ಪ್ರತಿ ವರ್ಷ 20,000 ಇಂಜಿನಿಯರ್‌ಗಳು ಹಾಗೂ 59 ಮೆಡಿಕಲ್ ಕಾಲೇಜುಗಳಿಂದ 13,940 ವೈದ್ಯರು ಹೊರಬರುತ್ತಿದ್ದಾರೆ. ಜೊತೆಗೆ 1.2 ಲಕ್ಷಕ್ಕೂ ಹೆಚ್ಚು ಪ್ಯಾರಾಮೆಡಿಕಲ್ ಸಿಬ್ಬಂದಿ ತಯಾರಾಗುತ್ತಿದ್ದಾರೆ. ಸಿಲಿಕಾನ್ ವ್ಯಾಲಿಯಲ್ಲಿ 16 ಲಕ್ಷ (1.6 ಮಿಲಿಯನ್) ಐಟಿ ವೃತ್ತಿಪರರಿದ್ದರೆ, ಬೆಂಗಳೂರು ಒಂದರಲ್ಲೇ 2.6 ಮಿಲಿಯನ್ ಐಟಿ ವೃತ್ತಿಪರರು ಕೆಲಸ ಮಾಡುತ್ತಿದ್ದಾರೆ. ಇದು ಬೆಂಗಳೂರಿನ ಹೆಗ್ಗಳಿಕೆ  ಎಂದು ಹೇಳಿದರು .
ಫಾಕ್ಸ್‌ಕಾನ್ ಸಂಸ್ಥೆಯಲ್ಲಿ 50,000 ಯುವ ಸಮೂಹ ಉದ್ಯೋಗ ಮಾಡುತ್ತಿದ್ದಾರೆ. ವಸತಿ, ವಿಮೆ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಅಮೆರಿಕದ ಸುಂಕ ಸಮಸ್ಯೆಯ ನಡುವೆಯೂ ಉದ್ಯಮಿಗಳು ಭಾರತ ಹಾಗೂ ಬೆಂಗಳೂರನ್ನು ಸುರಕ್ಷಿತ ಎಂದು ಭಾವಿಸಿದ್ದಾರೆ‌ ಎಂದು ಹೇಳಿದರು.
ನ್ಯೂಜಿಲೆಂಡ್‌ ಗೆ ತೆರಳಿದ್ದಾಗ ನಾನು ಗಮನಿಸಿದ ಸಂಗತಿ ಎಂದರೆ. ಅಲ್ಲಿ ನಮ್ಮ ಪದವಿ ಕೇಳುವುದಿಲ್ಲ. ಬದಲಾಗಿ ಕೌಶಲ್ಯ ಕೇಳುತ್ತಾರೆ. ಕೌಶಲ್ಯ ಶಿಕ್ಷಣ ಪಡೆದು ಈ ದೇಶದ ಏಳಿಗೆಗೆ ಕೊಡುಗೆ ಕೊಡಬೇಕು ಎಂದು ಹೇಳಿದರು.
ನಾನು ಹುಟ್ಟಿನಿಂದ ರೈತ, ವೃತ್ತಿಯಿಂದ ಉದ್ಯಮಿ, ಆಯ್ಕೆಯಿಂದ ಶಿಕ್ಷಣತಜ್ಞ ಹಾಗೂ ಆಸಕ್ತಿಯಿಂದ ರಾಜಕಾರಣಿ. ಆದರೆ ನನ್ನ ಹೃದಯ ಇರುವುದು ಶಿಕ್ಷಣ ಕ್ಷೇತ್ರದಲ್ಲಿ. ಅದೇ ರೀತಿ ಜಯರಾಂ ಅವರೂ ಸಹ ಶಿಕ್ಷಣ ಕ್ಷೇತ್ರಕ್ಕೇ ತಮ್ಮ ಜೀವನ ಮುಡುಪಾಗಿಟ್ಟವರು. ಜಯರಾಂ ಅವರು ಇತಿಹಾಸ ಓದುವವರಲ್ಲ, ಇತಿಹಾಸ ಸೃಷ್ಟಿಸುವವರು ಎಂದು ಬಣ್ಣಿಸಿದರು.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles