“ನಮ್ಮ ರಾಜ್ಯದಲ್ಲಿರುವ ಪ್ರತಿಭಾವಂತ ಮಾನವ ಸಂಪನ್ಮೂಲ, ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ಅವರು ಕೇವಲ ಉದ್ಯೋಗಿಗಳಾಗುವುದಲ್ಲ, ಉದ್ಯೋಗದಾತರಾಗಬೇಕು ಎಂಬುದು ನಮ್ಮ ಬಯಕೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರ ಇಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ‍್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿರುವ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ವ್ಯಾಸಂಗ ಮುಗಿಸಿರುವ ವಿದ್ಯರ‍್ಥಿಗಳಿಗೆ ಹೊರ ದೇಶದ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣದ ಅವಕಾಶವನ್ನು ಕಲ್ಪಿಸುವ ಸಲುವಾಗಿ “ವಿದೇಶದಲ್ಲಿ ಅಧ್ಯಯನ-2026” ಕರ‍್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
“ದೇಶದ ಅಧ್ಯಯನಕ್ಕೆ ನಮ್ಮ ಸರ‍್ಕಾರ ಹೊಸ ಬಾಗಿಲು ತೆರೆದಿದೆ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಕಲಿಯಬೇಕು ಎಂಬ ಉದ್ದೇಶದಿಂದ ಕೌಶಲ್ಯಭಾವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರ ನೇತೃತ್ವದಲ್ಲಿ ಸಾಗರತ್ತರ ಜ್ಞಾನ ಬೆಸೆಯುವಲ್ಲಿ ಅತ್ಯುತ್ತಮ ಕರ‍್ಯ ನಿರ‍್ವಹಿಸುತ್ತಿದ್ದಾರೆ ಎಂದರು.

ಜ್ಞಾನದ ಮೇಲಿನ ಹೂಡಿಕೆ ಪ್ರತಿಯೊಬ್ಬರಿಗೂ ಅತ್ಯುತ್ತಮ ಆಸ್ತಿಯಾಗುತ್ತದೆ. ಮಾನವನಿಗೆ ಎಲ್ಲೆಗಳಿವೆ, ಆದರೆ ಜ್ಞಾನಕ್ಕೆ ಎಲ್ಲೆಗಲಿಲ್ಲ. ಜಾಗತಿಕ ಮಟ್ಟದ ಶಿಕ್ಷಣದ ಅವಕಾಶ ಪಡೆಯುವುದರಿಂದ ಮಾನಸಿಕವಾಗಿ ಬಲಿಷ್ಠರನ್ನಾಗಿಸುತ್ತದೆ” ಎಂದು ತಿಳಿಸಿದರು.
“ಬೆಂಗಳೂರು ಜಾಗತಿಕ ನಗರ. ಇಲ್ಲಿ 2 ಲಕ್ಷ ವಿದೇಶಿ ಪಾಸ್ ಪರ‍್ಟ್ ದಾರರು ಕೆಲಸ ಮಾಡುತ್ತಿದ್ದು, ಸಿಲಿಕಾನ್ ವ್ಯಾಲಿ ಕ್ಯಾಲಿಫರ‍್ನಿಯದಲ್ಲಿ 16 ಲಕ್ಷ ಐಟಿ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 26 ಲಕ್ಷ ಐಟಿ ವೃತ್ತಿಪರರು ಕರ‍್ಯ ನಿರ‍್ವಹಿಸುತ್ತಿದ್ದಾರೆ. ಪ್ರತಿ ವರ‍್ಷ 1 ಲಕ್ಷಕ್ಕೂ ಹೆಚ್ಚು ಇಂಜಿನಿಯರ್ ಗಳನ್ನು, 13,940 ವೈದ್ಯರನ್ನು ಉತ್ಪಾದನೆ ಮಾಡುತ್ತಿದ್ದು, ಇಷ್ಟು ದೊಡ್ಡ ಪ್ರಮಾಣದಲ್ಲಿ ಈ ಮಾನವ ಸಂಪನ್ಮೂಲವನ್ನು ಬೇರೆ ಎಲ್ಲೂ ತಯಾರಿಸುತ್ತಿಲ್ಲ” ಎಂದು ವಿವರಿಸಿದರು. 
ಮಹಾತ್ಮ ಗಾಂಧಿ, ಅಂಬೇಡ್ಕರ್, ರಾಜಾರಾಮ್ ಮೋಹನ್ ರಾಯ್ ರಂತಹ ನಾಯಕರು ವಿದೇಶದಲ್ಲಿ ಓದಿ, ನಮ್ಮ ದೇಶವನ್ನು ಮುನ್ನಡೆಸಿದ್ದಾರೆ. ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಲು ರ‍್ನಾಟಕ ರ‍್ಕಾರ ಈ ಅವಕಾಶ ಕಲ್ಪಿಸಿದೆ. ಈ ಕರ‍್ಯಕ್ರಮದಲ್ಲಿ 80ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಭಾಗವಹಿಸಿದ್ದು, 300ಕ್ಕೂ ಹೆಚ್ಚು ವಿಷಯಗಳಲ್ಲಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ರ‍್ಕಾರದ ವಿವಿಧ ಇಲಾಖೆಗಳಿಂದ ವಿಶೇಷ ವಿದ್ಯರ‍್ಥಿ ವೇತನ ನೀಡಲಾಗುತ್ತಿದೆ. ವಿವಿಧ ಬ್ಯಾಂಕ್ ಗಳು ನೆರವು ನೀಡುತ್ತಿದ್ದು, 2 ಕೋಟಿ ರೂ. ವರೆಗೂ ಸಾಲ ಸೌಲಭ್ಯ ನೀಡುತ್ತಿವೆ. ರಾಜ್ಯದ ವಿದ್ಯರ‍್ಥಿಗಳು ಈ ಅವಕಾಶ ಸದುಪಯೋಗಪಡಿಸಿಕೊಂಡು ಬಲಿಷ್ಠವಾಗಬೇಕು. ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
“ನಾವು ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾಲಯದ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದ್ದು, ವಿದೇಶದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು 3,145 ವಿದ್ಯರ‍್ಥಿಗಳನ್ನು ಆಯ್ಕೆ ಮಾಡಲಾಗಿದೆ. ನಮ್ಮ ಮಕ್ಕಳು ವಿದ್ಯಾಭ್ಯಾಸ ಮುಗಿಸಿದ್ದರೂ ಅವರು ಹೆಚ್ಚಿನ ಮಾಹಿತಿ ಪಡೆಯಲು ಇಲ್ಲಿಗೆ ಬನ್ನಿ ಎಂದು ಕರೆದಿರುವೆ” ಎಂದರು. 
“ನಿಮ್ಮ ಭವಿಷ್ಯ ರಾಜ್ಯದ ಭವಿಷ್ಯ, ನಿಮ್ಮ ಶಕ್ತಿ ದೇಶದ ಶಕ್ತಿ. ವಿದ್ಯರ‍್ಥಿಗಳು ನಮ್ಮ ಆಸ್ತಿಗಳು. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಭಾರತವನ್ನು ಬೆಂಗಳೂರು, ಕರ‍್ನಾಟಕದ ಮೂಲಕ ನೋಡಲಾಗುತ್ತಿದೆ. ನಮ್ಮ ವಿದ್ಯರ‍್ಥಿಗಳ ಚುರುಕುತನವನ್ನು ವಿಶ್ವದ ಉದ್ಯಮಗಳ ನಾಯಕರು ಗಮನಿಸುತ್ತಿದ್ದಾರೆ. ನಮ್ಮಲ್ಲಿನ ಸಂಸ್ಕೃತಿ, ಇತಿಹಾಸ, ಬಾಂಧವ್ಯದ ಮೂಲಕ ನಮ್ಮ ಮಕ್ಕಳು ಉತ್ತಮ ಪ್ರಜೆಗಳಾಗುತ್ತಿದ್ದಾರೆ. ನೀವು ನಿಮ್ಮ ಮೂಲ ಮರೆಯಬಾರದು, ಮರೆತರೆ ಯಶಸ್ಸು ಸಿಗುವುದಿಲ್ಲ. ಹೀಗಾಗಿ ನೀವು ನಿಮ್ಮ ಪೋಷಕರು, ಶಿಕ್ಷಕರನ್ನು ಮರೆಯಬಾರದು” ಎಂದು ಹೇಳಿದರು.
“ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, ಭಾರದಲ್ಲಿ 140 ಅಂತಾರಾಷ್ಟ್ರೀಯ ಶಾಲೆಗಳಿದ್ದು, ಬೆಂಗಳೂರಿನಲ್ಲಿ 38 ಅಂತಾರಾಷ್ಟ್ರೀಯ ಶಾಲೆಗಳಿವೆ. ಇದು ರ‍್ನಾಕದ ಶಕ್ತಿ. ರ‍್ನಾಟಕ ದೇಶದ ಜ್ಞಾನದ ಕೇಂದ್ರವಾಗಿದೆ. ನಿಮ್ಮೆಲ್ಲರಿಗೂ ಯಶಸ್ಸು ಸಿಗಲಿ” ಎಂದು ಶುಭ ಕೋರಿದರು.
ಇದೇ ಸಂರ‍್ಭದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಭಾವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್, ಕರ‍್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ‍್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ (ಕಾಂತಾ) ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.
ಸೂರಿಲ್ಲದವರಿಗೆ ಸೂರು ಒದಗಿಸಬೇಕು ಎಂಬುದು ನನ್ನ ಆಶಯ: ಡಾ. ಜಿ.ಪರಮೇಶ್ವರ

