ಖಾರಿಫ್ ಬರ ಪರಿಸ್ಥಿತಿ ಅಧ್ಯಯನ: ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಖಾರಿಫ್(Kaarif) ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ(Central Government) ವಿವಿಧ ಸಚಿವಾಲಯಗಳ ಉನ್ನತ ಮಟ್ಟದ ಅಧಿಕಾರಿಗಳ ತಂಡವು (ಐಎಂಸಿಟಿ) ಅಕ್ಟೋಬರ್ 3 ರಿಂದ ಅಕ್ಟೋಬರ್ 6 ರವರೆಗೆ ನಾಲ್ಕು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಲಿದೆ.
ಅಧಿಕಾರಿಗಳ ಈ ತಂಡವನ್ನು ಒಟ್ಟು ಮೂರು ವಿಭಾಗಗಳಾಗಿ, ತಂಡ 1, ತಂಡ 2 ಮತ್ತು ತಂಡ 3 ಎಂದು ವಿಂಗಡಿಸಲಾಗಿದ್ದು,  ಈ ತಂಡಗಳು ಬರ ಪೀಡಿತ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಅವಲೋಕಿಸಲಿವೆ.
ತಂಡ 1 (ಟೀಮ್ 1) :
ಜಂಟಿ ಕಾರ್ಯದರ್ಶಿ ಶ್ರೀ ಅಜೀತ್ ಕುಮಾರ್ ಸಾಹು ಅವರ ನೇತೃತ್ವದ ಈ ತಂಡದಲ್ಲಿ ಉಪ ನಿರ್ದೇಶಕ ಶ್ರೀ ಚೇತ್ ರಾಮ್ ಮೀನಾ (ತಂಡದ ಸಂಯೋಜಕರು), ವಿಶೇಷ ಅಧಿಕಾರಿ (ಐ ಎಸ್ ಡಿ )  ಕರ್ನಲ್ ಅಮರೀಂದರ್ ಸಿಂಗ್ ಮತ್ತು ನಿರ್ದೇಶಕ ಡಾ. ಜೆ. ಹರ್ಷ ಸದಸ್ಯರಾಗಿದ್ದಾರೆ. ಈ ತಂಡವು ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪರಿಶೀಲನೆ ನಡೆಸಲಿದೆ.
ತಂಡ 2 (ಟೀಮ್ 2) :
ಸಹಾಯಕ ಆಯುಕ್ತರಾದ ಡಾ. ಸುದಮ್ ಬಾಗ್ ಅವರ ನೇತೃತ್ವದ ತಂಡದಲ್ಲಿ ಸಹಾಯಕ ಸಲಹೆಗಾರರಾದ ಶ್ರೀ ಆಶಿಶ್ ಪಾಂಡೆ, ಅಧೀನ ಕಾರ್ಯದರ್ಶಿ ಶ್ರೀ ಪ್ರದೀಪ್ ಕುಮಾರ್ ಮತ್ತು ಉಪ ನಿರ್ದೇಶಕ ಶ್ರೀ ಕರಣ್ ಚೌಧರಿ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡವು ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.
ತಂಡ 3 (ಟೀಮ್ 3) :
ನಿರ್ದೇಶಕ ಡಾ. ಮನ್ ಸಿಂಗ್ ಅವರ ನೇತೃತ್ವದ ಮೂರನೇ ತಂಡದಲ್ಲಿ ಅಧೀನ ಕಾರ್ಯದರ್ಶಿ ಶ್ರೀ ಪಾರ್ಥ ಪಾಲ್ ಹಾಗೂ ಅಧೀನ ಕಾರ್ಯದರ್ಶಿ ಶ್ರೀ ರಾಕೇಶ್ ಕುಮಾರ್ ಸದಸ್ಯರಾಗಿದ್ದಾರೆ. ಈ ತಂಡವು ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಖಾರಿಫ್ ಬರದ ತೀವ್ರತೆ ಮತ್ತು ಹಾನಿಯ ಕುರಿತು ಪರಿಶೀಲಿಸಲಿದೆ.
ಈ ಭೇಟಿಯ ನಂತರ ಕೇಂದ್ರ ತಂಡವು ರಾಜ್ಯದ ಬೆಳೆ ಹಾನಿ ಮತ್ತು ರೈತರ ಸಂಕಷ್ಟದ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಿದೆ.

Hot this week

ಅರಾಧನಾ ಮಿಶ್ರಾ ‘ಮೋನಾ’ಗೆ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನ; ಅಜಯ್ ರೈ ಬದಲಾವಣೆ

ಲಖನೌ: ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶ ಘಟಕದಲ್ಲಿ ಮಹತ್ವದ ಸಂಘಟನಾ ಬದಲಾವಣೆ...

ಉಕ್ರೇನ್‌ಗೆ ನಾಲ್ಕು ಕದನ ವಿರಾಮ ಪ್ರಸ್ತಾವನೆಗಳು: ಭಾರತದ ಪ್ರಸ್ತಾವನೆ ಅತ್ಯಂತ ವ್ಯಾಪಕ

ಕೀವ್: ರಷ್ಯಾ–ಉಕ್ರೇನ್(Rassia Ukrane) ಯುದ್ಧಕ್ಕೆ ಕದನ ವಿರಾಮದ ಸಾಧ್ಯತೆ ಕುರಿತು ಉಕ್ರೇನ್‌ಗೆ...

ಡೈವ್‌ಆಗರ್ ಕಡಲತೀರದಲ್ಲಿ 8 ವಿದ್ಯಾರ್ಥಿಗಳು ಮುಳುಗಿ ಸಾವು; ಪುಣೆಯ ಕೋಚಿಂಗ್ ಅಕಾಡೆಮಿ ಸೀಲ್

ಪುಣೆ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಡೈವ್‌ಆಗರ್ ಕಡಲತೀರದಲ್ಲಿ(Daivagar Beach) ಪ್ರವಾಸಕ್ಕೆ ತೆರಳಿದ್ದ...

ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ: ₹95 ಕೋಟಿ ಗಡಿ ದಾಟಿದ ಅಜಯ್ ದೇವಗನ್ ಚಿತ್ರ

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್(Actor Ajay Devagan) ಅಭಿನಯದ ಬಹುನಿರೀಕ್ಷಿತ...

ದೆಹಲಿ ಹೋಟೆಲ್‌ನಲ್ಲಿ ನೆಸ್ಲೆ ಇಂಡಿಯಾದ ಡೈರಿ ವೈಟನರ್ ಮಾರಾಟಕ್ಕೆ FSSAI ನಿಷೇಧ

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ,...

Topics

ಶಾಸಕರ ಭವನದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ತಪೋವನ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು: ವಿಧಾನಸೌಧದ(Vidhanasoudha) ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ(Valmeeki Statue) ಇರುವ...

ನಯಾರಾ ಎನರ್ಜಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಸ್ಥಳೀಯ ಆರ್ಥಿಕತೆಗೆ ಆತಂಕ

ನಯಾರಾ ಎನರ್ಜಿ(Nayara Energy) ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ₹5 ಹಾಗೂ...

Related Articles