ಬೆಂಗಳೂರು: ಕಾಡುಗೋಡಿಯ ಜನನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪದ್ಮಾವತಿ ಕೆ.ವಿ.(Smt Padmavathi.K.V.) ಅವರಿಗೆ ಕೆ.ಆರ್. ಪುರಂನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಸಮಾವೇಶದಲ್ಲಿ ಪ್ರತಿಷ್ಠಿತ ‘ಟೀಚರ್ಸ್ ಟ್ರೋವ್–2026’ ಪ್ರಶಸ್ತಿ(Teachers Trove – 2026 Award) ನೀಡಿ ಗೌರವಿಸಲಾಯಿತು.
ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಅವರ ಹಳೆಯ ವಿದ್ಯಾರ್ಥಿಯೊಬ್ಬರು ತಮ್ಮ ಗುರುಗಳ ಮಾರ್ಗದರ್ಶನವನ್ನು ಸ್ಮರಿಸಿ ನಾಮನಿರ್ದೇಶನ ಮಾಡಿದ್ದರು ಎಂಬುದು ಈ ಗೌರವದ ವಿಶೇಷ. ಕುಲಾಧಿಪತಿ ಡಾ. ಜೋಸೆಫ್ ವಿ.ಜಿ. ಅವರ ಪರಿಕಲ್ಪನೆಯಲ್ಲಿ 17 ವರ್ಷಗಳ ಹಿಂದೆ ಆರಂಭವಾದ ಈ ವಾರ್ಷಿಕ ಸಮಾವೇಶದಲ್ಲಿ, ಕರ್ನಾಟಕ ಹಾಗೂ ಹೊರರಾಜ್ಯಗಳ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಪಾಲ್ಗೊಂಡು ಆಧುನಿಕ ಬೋಧನಾ ವಿಧಾನಗಳ ಕುರಿತು ವಿಚಾರ ವಿನಿಮಯ ನಡೆಸಿದರು.
ಫೋಟೋ ಶೀರ್ಷಿಕೆ:
“ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಸಮಾವೇಶದಲ್ಲಿ ಕಾಡುಗೋಡಿಯ ಜನನಿ ಪಿಯು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಪದ್ಮಾವತಿ ಕೆ.ವಿ. ಅವರಿಗೆ ‘ಟೀಚರ್ಸ್ ಟ್ರೋವ್–2026’ ಪ್ರಶಸ್ತಿ ಪ್ರದಾನ ಮಾಡಲಾಯಿತು.”
ಅಂಕಣಕಾರ್ತಿ, ಲೇಖಕಿ ಮಾಧುರಿ ದೇಶಪಾಂಡೆ ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

