ಜಿ.ಎಸ್.ಟಿ (GST) ಕಾಯ್ಧೆ ಉಲ್ಲಂಘಿಸಿದ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಪಡಿಸಿಕೊಂಡ ವಾಣಿಜ್ಯ ತೆರಿಗೆಗಳ ಇಲಾಖೆ

Bengaluru : ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ (Commercial Tax Office) (ದಕ್ಷಿಣ ವಲಯ) ದ ಜಾರಿ ವಿಭಾಗದ ಅಧಿಕಾರಿಗಳು ಬೆಂಗಳೂರು ನಗರದ ಯಶವಂತಪುರ ರೈಲು ನಿಲ್ದಾಣದಲ್ಲಿ ವಿಸ್ತøತ ಶೋಧ ಕಾರ್ಯಾಚರಣೆ ನಡೆಸಿ, ಸೂಕ್ತ ತೆರಿಗೆ (TAX INVOICE) ಇನ್ವಾಯ್ಸ್‍ಗಳಿಲ್ಲದೆ ಸಾಗಿಸಲಾಗುತ್ತಿದ್ದ ದೊಡ್ಡ ಪ್ರಮಾಣದ ತಂಬಾಕು (Tobacco) ಪದಾರ್ಥಗಳನ್ನು ವಶಪಡಿಸಿಕೊಂಡಿದೆ.
ವಿಶ್ವಾಸಾರ್ಹ ಮೂಲಗಳಿಂದ ಲಭಿಸಿದ ಖಚಿತ ಮಾಹಿತಿಯ ಆಧಾರದಲ್ಲಿ, ದಕ್ಷಿಣ ವಲಯದ ಜಾರಿ ವಿಭಾಗದ ಅಧಿಕಾರಿಗಳ ತಂಡವು ತ್ವರಿತವಾಗಿ ನಿಲ್ದಾಣ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ಕಮಲಾ ಪಸಂದ್ ಪಾನ್ ಮಸಾಲಾ, ಹನ್ಸ್ ಚಾಪ್, ಚೈನಿ ಫಿಲ್ಟರ್ ತಂಬಾಕು ಹಾಗೂ ಶಿಖರ್ ಪಾನ್ ಮಸಾಲಾ ಎಂಬ ಪ್ರಸಿದ್ಧ ಬ್ರ್ಯಾಂಡ್‍ಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ದೆಹಲಿಯಿಂದ ಬೆಂಗಳೂರಿಗೆ ರೈಲಿನ ಮೂಲಕ ಸಾಗಿಸಲಾಗಿದ್ದು, ಅವುಗಳನ್ನು ಕೆಲವು ಸರಕು ವಾಹನಗಳಲ್ಲಿ ಹಾಗೂ ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿರುವ ಚೀಲಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.
ಪರಿಶೀಲನೆಯ ಸಂದರ್ಭದಲ್ಲಿ ಜಾರಿ ವಿಭಾಗದ ಅಧಿಕಾರಿಗಳು ಒಟ್ಟು 850 ಕ್ಕೂ ಅಧಿಕ ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಪಡಿಸಿಕೊಂಡಿದ್ದು, ಅದರ ಅಂದಾಜು ಮಾರುಕಟ್ಟೆ ಮೌಲ್ಯ ಸುಮಾರು ರೂ.1 ಕೋಟಿ ಆಗಿದೆ. ವಶಪಡಿಸಿಕೊಂಡ ವಸ್ತುಗಳ ಜಿ.ಎಸ್.ಟಿ ನಿಯಮಾವಳಿ ಉಲ್ಲಂಘನೆಯ ಸ್ವರೂಪವನ್ನು ಖಚಿತಪಡಿಸಲು ಪರಿಶೀಲನಾ ಪ್ರಕ್ರಿಯೆ ಮುಂದುವರಿದಿದೆ. ಪ್ರಾಥಮಿಕ ತನಿಖೆಯಲ್ಲಿ, ಈ ವಸ್ತುಗಳನ್ನು ಜಿ.ಎಸ್.ಟಿ ನಿಯಮಗಳ ಅನುಸಾರ ಖರೀದಿ ಮಾಡದೇ ಸಾಗಾಟ ಮಾಡಿರುವುದು ಪತ್ತೆಯಾಗಿದ್ದು,  ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಗಣನೀಯ ಪ್ರಮಾಣದ ರಾಜಸ್ವ ನಷ್ಟ ಸಂಭವಿಸಿರುವ ಸಾಧ್ಯತೆಗಳಿವೆ.
ಸೂಕ್ತ ದಾಖಲೆಗಳಿಲ್ಲದೆ ಹಾಗೂ ತೆರಿಗೆ ಇನ್ವಾಯ್ಸ್‍ಗಳಿಲ್ಲದೆ ಸರಕುಗಳನ್ನು ಸಾಗಿಸುವ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸದಾ ಕಟಿಬದ್ಧವಾಗಿದೆ. ಇಂತಹ ಕಾರ್ಯಾಚರಣೆಗಳು ಸರ್ಕಾರದ ಆದಾಯವನ್ನು ರಕ್ಷಿಸುವುದರ ಜೊತೆಗೆ ಜಿಎಸ್‍ಟಿ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಟನಕ್ಕೆ ಇಲಾಖೆ ಕೈಗೊಂಡಿರುವ ನಿರಂತರ ಪ್ರಯತ್ನಗಳ ಭಾಗವಾಗಿದೆ ಎಂದು ಬೆಂಗಳೂರು ದಕ್ಷಿಣ ವಲಯದ  ವಾಣಿಜ್ಯ ತೆರಿಗೆಗಳ ಅಪರ ಆಯುಕ್ತರಾದ (ಜಾರಿ) ಕನಿಷ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles