ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಜಿಬಿಎ(GBA) ವ್ಯಾಪ್ತಿಯಲ್ಲಿನ 27 ವಾರ್ಡ್‍ಗಳಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಮಾನಾಂತರ ಎಸ್‍ಐಆರ್ ಅನ್ನು ತಕ್ಷಣ ನಿಲ್ಲಿಸಬೇಕು ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ(Shobha Karadgaje) ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ರಾಜ್ಯ ಬಿಜೆಪಿ(BPP) ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯದಾದ್ಯಂತ ಎಸ್‍ಐಆರ್ ನಡೆಸುತ್ತಿದೆ. ಇದರ ನಡುವೆ ಜಿಬಿಎ ವಾರ್ಡ್‍ಗಳಲ್ಲಿ ರಾಜ್ಯ ಚುನಾವಣಾ ಆಯೋಗ(State Election Commission) ಮತ್ತೊಂದು ಎಸ್‍ಐಆರ್ ನಡೆಸುತ್ತಿದೆ. ಇದು ಮತದಾರರನ್ನು ಗೊಂದಲಕ್ಕೀಡು(Confusion) ಮಾಡಿದೆ ಎಂದು ಹೇಳಿದರು.
ರಾಹುಲ್ ಗಾಂಧಿ(Rahul Gandhi) ಅವರನ್ನು ತೃಪ್ತಿಪಡಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಇಂತಹ ಕೆಲಸ ಮಾಡುತ್ತಿದೆ. 20 ವರ್ಷಗಳ ನಂತರ ಈ ಎಸ್‍ಐಆರ್ ನಡೆಯುತ್ತಿದ್ದು, ದೇಶದಲ್ಲಿ ಅಕ್ರಮ ಮತದಾರನ್ನು ಗುರುತಿಸಲು, ಮೃತಪಟ್ಟವರ ಹೆಸರು ತೆಗೆಯಲು ಮತ್ತು ಇತರ ಹಲವಾರು ಕಾರಣಗಳಿಂದ ಎಸ್‍ಐಆರ್ ನಡೆಯುತ್ತಿದೆ ಎಂದರು.
ನಗರ ಪ್ರದೇಶಗಳಲ್ಲಿ ಮತದಾರರ ಹೆಸರು ಎರಡು ಕಡೆ ಇರುತ್ತದೆ. ಕೆಲವರು ಬೇರೆ ಕಡೆ ನೆಲೆಸಿರುತ್ತಾರೆ. ಹಳ್ಳಿಗೆ ಹೋಗಿರುತ್ತಾರೆ. ಆದರೆ, ಅವರ ಹೆಸರು ಮತಪಟ್ಟಿಯಲ್ಲಿ ಇರುತ್ತದೆ. ಲೆಕ್ಕಕ್ಕೆ ಇವರು ಇರುತ್ತಾರೆ. ಆದರೆ ಮತ ಚಲಾಯಿಸುವುದಿÀಲ್ಲ. ಇದರಿಂದ ಶೇಕಡಾ ಮತದಾನ ಕಡಿಮೆಯಾಗುತ್ತದೆ, ಇದನ್ನೆಲ್ಲ ತಪ್ಪಿಸಲು ಎಸ್‍ಐಆರ್ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಅಕ್ರಮ ಮತಪಟ್ಟಿ ಸಿದ್ಧತೆ…
ಕರ್ನಾಟಕದಲ್ಲಿ ಅಕ್ರಮ ಮತದಾರರ ಪಟ್ಟಿಯನ್ನು ತಯಾರು ಮಾಡಲು ಸರ್ಕಾರ ಹೊರಟಿದೆ. ಸಿಎಂ ಮೂಗಿನ ನೇರದಲ್ಲಿ ಅಧಿಕಾರಿಗಳು ಅಕ್ರಮವಾಗಿ ಮತದಾರರನ್ನು ಸೇರಿಸುತ್ತಿದ್ದಾರೆ. ಹಲವಾರು ವರ್ಷಗಳಿಂದ ಅಲ್ಪಸಂಖ್ಯಾತ ನಾಯಕರು ಅಕ್ರಮವಾಗಿ ಬಾಂಗ್ಲಾದೇಶಿಗಳನ್ನು ರಾಜ್ಯಕ್ಕೆ ಕರೆತಂದಿದ್ದಾರೆ. ಬಾಂಗ್ಲಾದೇಶಿಯರನ್ನು ಕರ್ನಾಟಕದ ವಾಸಿಗಳಾಗಿ ಮಾಡಲು ಮತ್ತು ಮತದಾರರನ್ನಾಗಿ ಮಾಡಲು ಷಡ್ಯಂತ್ರ ಮಾಡಿದ್ದಾರೆ. ರಾಜ್ಯದ ವಿವಿಧ ಭಾಗದಲ್ಲಿ ನಲೆಸಿರುವ ಅಕ್ರಮ ಬಾಂಗ್ಲಾದೇಶಿಗಳನ್ನು ಮತಪಟ್ಟಿಗೆ ಸೇರಿಸಿ ಸಕ್ರಮ ಮಾಡುತ್ತಿದ್ದೀರಿ ಎಂದು ಆರೋಪಿಸಿದರು.
ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಆದ ನಂತರ ಅಲ್ಲಿದ್ದ ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯಕ್ಕೆ ಬಂದಿದ್ದಾರೆ. ಇವರಲ್ಲಿ ಕೆಲವು ಸಿಕ್ಕಿ ಬಿದ್ದಿದ್ದಾರೆ. ಮುಖ್ಯಮಂತ್ರಿಗಳ ಮೌಖಿಕ ಆದೇಶದ ಮೇಲೆ ಬಿಎಲ್‍ಒಗಳು ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ಅಕ್ರಮ ವಾಸಿಗಳನ್ನು ಮತಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ಆರೋಪಿಸಿದರು.

ನಿಯಮ ಉಲ್ಲಂಘಿಸುವ ಬಿಎಲ್‍ಒಗಳು…
ಮಸೀದಿಗಳಲ್ಲಿ, ಶಾದಿ ಮಹಲ್‍ಗಳಲ್ಲಿ, ಕಲ್ಯಾಣ ಮಂಟಪದಲ್ಲಿ ಎನ್ಯುಮರೇಷನ್ ಫಾರಂಗಳನ್ನು ಭರ್ತಿ ಮಾಡಿಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಅಕ್ರಮ ವಲಸಿಗರಿಗೆ ವಿಳಾಸ ಇಲ್ಲ. ಮನೆ ಸಂಖ್ಯೆ ಇಲ್ಲ. ಆದರೂ ಕಾನೂನು ಉಲ್ಲಂಘಿಸಿ ಅವರ ಹೆಸರನ್ನು ಸೇರಿಸಲಾಗುತ್ತಿದೆ. ಈ ಫಾರಂ ಅನ್ನು ಬಿಎಲ್‍ಒಗಳು ಖುದ್ದಾಗಿ ಮನೆಗಳಿಗೆ ಹೋಗಿ ಕೊಡಬೇಕು ಎಂಬ ನಿಯಮ ಇದೆ. ಆದರೆ ಎಲ್ಲ ನಿಯಮ ಗಾಳಿಗೆ ತೂರಿ ಬಿಎಲ್‍ಒಗಳು ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಸೈಬರ್ ಕೇಂದ್ರಗಳಲ್ಲಿ ಜನನ ಪ್ರಮಾಣಪತ್ರ…
ರಾಜ್ಯದಲ್ಲಿ ಸೈಬರ್ ಕೇಂದ್ರದಲ್ಲಿ ಅಕ್ರಮವಾಗಿ ಜನನ ಪ್ರಮಾಣ ಪತ್ರ ಕೊಡುತ್ತಿದ್ದಾರೆ. ಎಸ್‍ಐಆರ್ ಆರಂಭವಾದ ನಂತರ ಈ ಜನನ ಪ್ರಮಾಣಪತ್ರ ಕೊಡುವುದು ಹೆಚ್ಚಳವಾಗಿದೆ. ಶಾಶ್ವತ ನಿವಾಸಿ ಪ್ರಮಾಣಪತ್ರ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇಲ್ಲಿ ಹುಟ್ಟಿದವರಿಗೆ, ಬದುಕಿದವರಿಗೆ ಈ ರೀತಿ ಪ್ರಮಾಣಪತ್ರ ಕೊಡಬೇಕಾಗಿಲ್ಲ. ನಮ್ಮ ಮನೆ ಇದೆ. ಮತಪಟ್ಟಿಯಲ್ಲಿ ಹೆಸರಿದೆ. ಅಕ್ರಮ ಬಾಂಗ್ಲಾದೇಶಿಯರಿಗೆ, ಎಲ್ಲಿ ಎಸ್ ಐಆರ್ ನಡೆದಿಲ್ಲ ಅಲ್ಲಿದ್ದ ಅಕ್ರಮ ಜನರನ್ನು ಕರೆದುಕೊಂಡು ಬಂದು ನಿವಾಸಿ ಪ್ರಮಾಣ ಪತ್ರ ಕೊಡಲು ಮುಂದಾಗಿದ್ದೀರಿ ಎಂದರು.
ಮುಂದಿನ ಚುನಾವಣೆಯಲ್ಲಿ ಅಕ್ರಮವಾಗಿ ಗೆಲ್ಲುವುದೇ ಇದೆಲ್ಲದರ ಉದ್ದೇಶ. ಸಿಎಂ ಮತ್ತು ಸರ್ಕಾರದ ಉದ್ದೇಶ ಇದಾಗಿದೆ. ಆದ್ದರಿಂದ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಬಿಎ ಚುನಾವಣೆ ಮಾಡಲು ಮತಪಟ್ಟಿ ಕೊಟ್ಟಿರಿ. ಅದು ಸಕ್ರಮ ಆಯಿತು. ಜಿಬಿಎ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಅಕ್ರಮ ಮತದಾರರನ್ನು ಸೇರಿಸಿದ್ದೀರಿ. ಒಂದು ಸಮುದಾಯದ ಮತದಾರರನ್ನು ಸೇರಿಸಲು ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಸರ್ಕಾರದ ಆದ್ಯತೆ ಅಲ್ಪಸಂಖ್ಯಾತರನ್ನು ಮತಪಟ್ಟಿಗೆ ಸೇರಿಸುವುದು. ಹಾಗಾದರೆ ಈ ಸರ್ಕಾರಕ್ಕೆ ಬಹುಸಂಖ್ಯಾತರ ಮತ ಬೇಡವೇ ಎಂದು ಪ್ರಶ್ನಿಸಿದರು.
ಬಿಎಲ್‍ಒಗಳು ಗುಂಪಾಗಿ ಜನರನ್ನು ಸೇರಿಸಿ ಎಸ್‍ಐಆರ್ ಮಾಡುವುದು ಸರಿಯಲ್ಲ. ಬಿಎಲ್‍ಒಗಳಿಗೆ ಸರಿಯಾದ ತರಬೇತಿ ನೀಡಿಲ್ಲ. ಮ್ಯಾಪಿಂಗ್ ಮಾಡುತ್ತಿಲ್ಲ. ಅರ್ಜಿಯನ್ನು ಮನೆಗೆ ಬಿಸಾಕಿ ಬರುತ್ತಿದ್ದಾರೆ. ಬಿಎಲ್‍ಒಗಳಿಗೆ ಒತ್ತಡ ಹೇರಲಾಗುತ್ತಿದೆ. ಕಾನೂನು ವಿರೋಧಿ ಕ್ರಮಗಳನ್ನು ತಕ್ಷಣ ರಾಜ್ಯ ಸರ್ಕಾರ ನಿಲ್ಲಿಸಬೇಕು. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾನೂನು ಪ್ರಕಾರ ಕೆಲಸ ಮಾಡಲಿ ಎಂದು ಆಗ್ರಹಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಹಾಜರಿದ್ದರು.

Hot this week

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್

ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು...

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03 :ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ (Higher Education)...

Topics

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್

ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು...

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03 :ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ (Higher Education)...

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಬೆಂಗಳೂರು, ಜುಲೈ 03...

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಂಗಳೂರು, ಜುಲೈ 03 : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ, ಕರ್ನಾಟಕ...

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ(Salutation to the...

Related Articles