ಪರೀಕ್ಷಾ ಫಲಿತಾಂಶದ ಜೊತೆ ಸಾಮಾಜಿಕ ಜೀವನದ ಫಲಿತಾಂಶವೂ ಮುಖ್ಯವಾಗಲಿ: ಕೆ.ವಿ.ಪ್ರಭಾಕರ್

ಮಲೆಮಹದೇಶ್ವರ ಬೆಟ್ಟ / ಬೆಂಗಳೂರು ಜೂನ್ 21 (ಕರ್ನಾಟಕ ವಾರ್ತೆ):

ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು. ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ. ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಎಲ್ಲಾ ಮಕ್ಕಳಿಗೂ ಎಲ್ಲಾ ಪೋಷಕರ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ತಿಳಿಸಿದರು.

ಇವತ್ತು ಶಿಕ್ಷಣ ವ್ಯವಸ್ಥೆ ಹೇಗಾಗಿದೆ, ಎಷ್ಟು ದುಬಾರಿ ಆಗಿದೆ ಎಂದರೆ, ಪೋಷಕರು ಸದಾ ಮಕ್ಕಳ ಶಿಕ್ಷಣದ ಬಗ್ಗೆಯೇ ಯೋಚಿಸುವಂತಾಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕಾಗಿ ಪೋಷಕರು ತಮ್ಮ ಅಗತ್ಯ ಮತ್ತು ಅನುಕೂಲಗಳ ಜೊತೆ ರಾಜಿ ಮಾಡಿಕೊಳ್ಳುತ್ತಾರೆ.ಪೋಷಕರ ಈ ತಪಸ್ಸಿಗೆ ಸಾರ್ಥಕತೆ ಬರುವುದು ಅವರ ಮಕ್ಕಳು ಸಾಧನೆ ಮಾಡಿದಾಗ, ಮಕ್ಕಳ ಪ್ರತಿಭಾ ಪುರಸ್ಕಾರವನ್ನು ಕಣ್ಣಲ್ಲಿ ಕಾಣುವ ಪೋಷಕರಿಗೆ ಇದಕ್ಕಿಂತ ದೊಡ್ಡ ಸಮಾಧಾನ ಬೇರೆ ಇರುವುದಿಲ್ಲ. ಜೊತೆಗೆ ಮಕ್ಕಳು ಪರಿಶ್ರಮದಿಂದ ಕಲಿತರೆ ಪೋಷಕರ ಮೇಲಿನ ಆರ್ಥಿಕ ಹೊರೆಯೂ ಕಡಿಮೆ ಆಗುತ್ತದೆ. ಆರ್ಥಿಕ ಹೊರೆ ಕಡಿಮೆ ಇದ್ದಾಗ ಸಹಜವಾಗಿ ಪೋಷಕರ ಆರೋಗ್ಯ ಮತ್ತು ಮನೆಯ ಆರೋಗ್ಯವೂ ಚೆನ್ನಾಗಿರುತ್ತದೆ. ಹೀಗಾಗಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ದಾಟಿದ ನಿಮ್ಮಗಳ ಮೇಲೆ ಪೋಷಕರನ್ನು ಖುಷಿಯಾಗಿಡುವ ಜವಾಬ್ದಾರಿ ಇರುತ್ತದೆ. ನಿಮ್ಮ ಪರಿಶ್ರಮ ಮತ್ತು ಜ್ಞಾನದಾಹ ಹಾಗೂ ಕಲಿಕೆಯ ಹಸಿವು ಹೆಚ್ಚಾಗಬೇಕು. ಈ ದಾಹ ಮತ್ತು ಹಸಿವು ನಿಮಗೆ ಜ್ವರದಂತೆ ಕಾಡಬೇಕು.

ಇಲ್ಲಿ ಪ್ರತಿಭಾ ಸ್ವೀಕಾರಕ್ಕೆ ಬಂದಿರುವ ಮಕ್ಕಳ ಜೊತೆ ಎರಡು ವಿಚಾರಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ.

ಒಂದು, ನಮ್ಮ ಎಲ್ಲಾ ಸಾಧನೆಗಳಿಗೂ ನಾವು ಬದುಕುತ್ತಿರುವ ಸಮಾಜದ ಕೊಡುಗೆ ಇರುತ್ತದೆ.  ಸಮಾಜ ಎಂದರೆ ಶರೀರ ಇದ್ದ ಹಾಗೆ. ನಾವು ಈ ಶರೀರದೊಳಗೆ ಬದುಕುತ್ತಿದ್ದೇವೆ. ನಾವು ಇರುವ ಶರೀರವನ್ನು ಕಟ್ಟುಮಸ್ತಾಗಿ, ಆರೋಗ್ಯಕರವಾಗಿ, ಆನಂದಮಯವಾಗಿ ಇಟ್ಟುಕೊಳ್ಳುವುದೇ ನಮ್ಮ ಪ್ರತಿಭೆಗೆ, ನಮ್ಮ ಸಾಧನೆಗೆ ಸಿಗುವ ನಿಜವಾದ ಪುರಸ್ಕಾರ ಎಂದು ಭಾವಿಸುತ್ತೇನೆ.

ಎರಡು, ಇಂದು ಸಮಾಜದಲ್ಲಿ ಭ್ರಷ್ಟಾಚಾರ ಇರುವುದಕ್ಕೆ ಮುಖ್ಯ ಕಾರಣ ಆರೋಗ್ಯ ಮತ್ತು ಶಿಕ್ಷಣ ಅತ್ಯಂತ ದುಬಾರಿ ಆಗಿರುವುದೇ ಕಾರಣ ಆಗಿದೆ. ಮಕ್ಕಳ ಓದಿನ ಖರ್ಚು, ಹಿರಿಯರ ಆಸ್ಪತ್ರೆ ಖರ್ಚು ನಮ್ಮ ನಿದ್ದೆಗೆಡಿಸುತ್ತದೆ. ಸಮಾಜದಲ್ಲಿ ಇದು ಬದಲಾಗಬೇಕು. ಈ ಬದಲಾವಣೆಗೆ ಪೂರಕವಾಗಿ ನೀವುಗಳು ವಿದ್ಯಾರ್ಥಿ ಜೀವನದಿಂದಲೇ ಯೋಚಿಸಬೇಕು. ನಾವು ಬದುಕುತ್ತಿರುವ ಸಮಾಜವೆಂಬ ಈ ಶರೀರ ಇನ್ನಷ್ಟು ಆನಂದವಾಗಿರಲು, ಇನ್ನಷ್ಟು ಆರೋಗ್ಯಕರವಾಗಿರಲು ನಾವೇನು ಮಾಡಬೇಕು ಎನ್ನುವ ದಿಕ್ಕಿನಲ್ಲಿ ಸದಾ ಚಿಂತನಾಶೀಲರಾಗಿರಬೇಕು. ಈ ಚಿಂತನಶೀಲತೆ ನಮ್ಮ ಜ್ಞಾನ ದಾಹ ಮತ್ತು ವಿವೇಕದ ಹಸಿವನ್ನು ಹೆಚ್ಚಿಸುತ್ತದೆ.

ಈ ಎರಡು ಸಂಗತಿಗಳನ್ನು ಮಕ್ಕಳ ಜೊತೆ ಹಂಚಿಕೊಳ್ಳುವುಕ್ಕಾಗಿ ಮತ್ತು ಪೋಷಕರನ್ನು ವೃದ್ದಾಶ್ರಮಗಳಿಗೆ ಕಳುಹಿಸದಂತೆ ನಾವು ಜವಾಬ್ದಾರರಾಗಬೇಕು ಎನ್ನುವ ನನ್ನ ಕೋರಿಕೆಗಳನ್ನು ನಿಮ್ಮ ಮುಂದೆ ಇಡಲು ನಾನು ಇಲ್ಲಿಗೆ ಬಂದಿದ್ದೇನೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸತತ ಐದನೇ ವರ್ಷ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಇದಕ್ಕಾಗಿ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳನ್ನೂ ನಾನು ಅಭಿನಂದಿಸುತ್ತೇನೆ ಎಂದರು.

ಜುಲೈ 1 ಕ್ಕೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles