ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ಇ-ಪಾಸ್ ಪಡೆಯಲು ಅವಕಾಶ

ಬೆಂಗಳೂರು, ಆಗಸ್ಟ್ 13 (ಕರ್ನಾಟಕ ವಾರ್ತೆ): ಬೆಂಗಳೂರು ನಗರದಲ್ಲಿ ಆಗಸ್ಟ್ 15 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ  ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ವೀಕ್ಷಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ www.sevasindhu.karnataka.gov.in  ನಿಂದ ಇ-ಪಾಸ್ ಅನ್ನು ಪಡೆಯಲು ಸೇವಾ ಸಿಂಧು ವೆಬ್‍ಸೈಟ್‍ನಲ್ಲಿ ಆಧಾರ್ ಕಾರ್ಡ್ ವಿವರಗಳನ್ನು ನಮೂದಿಸಿ ನೋಂದಾಯಿಸಿಕೊಳ್ಳತಕ್ಕದ್ದು ಮತ್ತು ವೆಬ್‍ಸೈಟ್ ನಲ್ಲಿ ಲಾಗಿನ್ ಮಾಡಿ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ನಂತರ ಬರುವ ಒಟಿಪಿ ಅನ್ನು ಅಳವಡಿಸಿ ಇ-ಪಾಸ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
ವಿಶೇಷ ಸೂಚನೆ:
ಇ-ಪಾಸ್ ಕೇವಲ ಆಗಸ್ಟ್ 15 ರಂದು ಮಾತ್ರ ಮಾನ್ಯವಾಗಿರುತ್ತದೆ. ಇ-ಪಾಸ್ ಹೊಂದಿರುವವರು ಬೆಳಿಗ್ಗೆ 08:15 ಗಂಟೆಗಿಂತ ಮೊದಲು ಗೇಟ್ ನಂ.4ರ ಬಳಿ ಆವರಣದ ಒಳಗೆ ಪ್ರವೇಶಿಸಬೇಕು. ಈ ಸಮಯದ ನಂತರ ಪ್ರವೇಶ ಅನುಮತಿಸಲಾಗುವುದಿಲ್ಲ ಹಾಗೂ ಇ-ಪಾಸ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರತಿ ಇ-ಪಾಸ್ ಕೇವಲ ಒಬ್ಬರಿಗೆ ಮಾತ್ರ ಪ್ರವೇಶಿಸಲು ಅನುಮತಿಸಿದೆ. ಕಾರ್ಯಕ್ರಮದ ಸಮಯದಲ್ಲಿ ಇ-ಪಾಸ್‍ನ ಮುದ್ರಿತ ಪ್ರತಿ ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಅವಶ್ಯವಿರುವುದಿಲ್ಲ. ಇ-ಪಾಸ್ ಅನ್ನು ವರ್ಗಾಯಿಸುವಂತಿಲ್ಲ. ಇ-ಪಾಸ್‍ಗಳು ಒಟ್ಟು 3000 ಸಂಖ್ಯೆಗೆ ಸೀಮಿತವಾಗಿರುವುದರಿಂದ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಮೂಲ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು.
ಇ-ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ. ಪಾಕಿರ್ಂಗ್ ವ್ಯವಸ್ಥೆಗೆ ಪಾಸ್‍ಧಾರರೇ ಜವಾಬ್ದಾರರಾಗಿರುತ್ತಾರೆ ಎಂದು ಸಕಾರದ ಮುಖ್ಯ ಕಾರ್ಯದಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
VKNEWS HEADLINES TODAY ;

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles