ಜನತೆಗೆ ಬರೆ ಎಳೆದ ಸರ್ಕಾರ: ಮಾಜಿ ಉಪಮುಖ್ಯಮಂತ್ರಿ – ಶಾಸಕ ಡಾ. ಸಿ.ಎನ್.ಅಶ್ವತ್ಥನಾರಾಯಣ ಆರೋಪ

 

ಬೆಂಗಳೂರು: ಬೆಂಗಳೂರು ಮಹಾನಗರದ ಜನತೆ ಮೇಲೆ ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ತೆರಿಗೆ ಮೇಲೆ ತೆರಿಗೆ (TAX) ಹಾಕಿ ಬರ ಎಳೆಯುತ್ತಿದೆ, ಸುಲಿಗೆ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ (Ex. DCM)_ ಹಾಗೂ ಶಾಸಕ ಡಾ. ಸಿ.ಎನ್.ಅಶ್ವತ್ಥನಾರಾಯಣ (Dr. CN Ashwathnarayan) ಆರೋಪಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲದರ ಮೇಲೆ ನಗರದಲ್ಲಿ ತೆರಿಗೆ ಹೆಚ್ಚಳ ಮಾಡಲಾಗಿದೆ. ಆಸ್ತಿ ತೆರಿಗೆ ಮೂರು ಪಟ್ಟು, ನೀರಿನ ಬಿಲ್ ಶೇ 50 ಹಾಗೂ ವಿದ್ಯುತ್ ದರ ಶೇ 30 ರಷ್ಟು ಏರಿಕೆ ಮಾಡಲಾಗಿದೆ. ಕಸ ವಿಲೇವಾರಿ ತೆರಿಗೆ ನಾಲ್ಕು ಪಟ್ಟು ಏರಿಕೆ ಮಾಡಿ ಜನರನ್ನು ಈ ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ದೂರಿದರು.
ಬೆಂಗಳೂರು ಜನರಿಂದ ಸರ್ಕಾರಕ್ಕೆ ಎμÉ್ಟೂಂದು ಹಣ ಬರುತ್ತದೆ. ಆದರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ನಗರದಲ್ಲಿ ಉಸಿರಾಡಲೂ ಹಣ ಕೊಡಬೇಕಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದರು.

ಬೇಜವಾಬ್ದಾರಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್…

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಯಾವಾಗಲೂ ವಿವಾದಾತ್ಮಕ ಹೇಳಿಕೆ ನೀಡುತ್ತಾರೆ. ಅವರು ಬೇಜವಾಬ್ದಾರಿ ಅಧ್ಯಕ್ಷರು. ದೇಶವಿರೋಧಿಗಳನ್ನೇ ಅವರು ದೇಶಭಕ್ತರು ಎಂದು ಹೇಳುತ್ತಾರೆ. ಹಿಂದೆಯೂ ಇಂತಹುದೇ ಹೇಳಿಕೆ ನೀಡಿದ್ದರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ಮಂಗಳೂರಿನಲ್ಲಿ ಸಂಪುಟ ಸಭೆ ಒಳ್ಳೆಯದು…

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಆಯೋಜನೆ ಆಗಿದೆ. ಇದು ಒಳ್ಳೆಯ ಬೆಳವಣಿಗೆ. ಉಡುಪಿ, ದಕ್ಷಿಣ ಕನ್ನಡ, ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಈ ಸಂಪುಟ ಸಭೆ ಆದ್ಯತೆ ನೀಡಲಿ. ಅದು ಬಿಟ್ಟು ಸ್ವಾರ್ಥ ಉದ್ದೇಶಕ್ಕೆ ಸಭೆ ಬಳಕೆಯಾಗದಿರಲಿ ಎಂದು ನುಡಿದರು.

ಕಾಂಗ್ರೆಸ್‍ಗೆ ಕೊನೆಗಾಲ ಹತ್ತಿರ ಬಂದಿದೆ…

ಜನವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಕೊನೆಗಾಲ ಹತ್ತಿರಕ್ಕೆ ಬಂದಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಹತ್ತಾರು ಮಂದಿಗೆ ನಾವು ಸಿಎಂ ಆಗ್ತೇವೆ ಎಂದು ಹೇಳುತ್ತಿದ್ದರು. ಡಿಸಿಎಂ ಮತ್ತು ಸಚಿವ ಸ್ಥಾನಕ್ಕೆ ಸಹ ಪೈಪೆÇೀಟಿ ಇತ್ತು. ಈ ಸರ್ಕಾರ ಭ್ರಷ್ಟಚಾರದಲ್ಲೇ ತೊಡಗಿದೆ. ಜನವಿರೋಧಿ ನೀತಿ ಅನುಸರಿಸುತ್ತಾ ಇದೆ. ಯಾವುದೇ ಒಳ್ಳೆಯ ಕೆಲಸ ಆಗುತ್ತಿಲ್ಲ ಎಂದು ಹೇಳಿದರು.

ಮರಣೋತ್ತರ ಪರೀಕ್ಷೆ ದಾಖಲೆ ನಾಪತ್ತೆ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ – VK Digital News

ಮರಣೋತ್ತರ ಪರೀಕ್ಷೆ ದಾಖಲೆ ನಾಪತ್ತೆ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles