ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ  ರಾಜ್ಯ ಸಚಿವ ಸಂಪುಟ  ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.

ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Hot this week

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

Topics

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

ದೀಪಾವಳಿಯನ್ನು ‘ಸಂತೋಷದ ಈದ್’ ಎಂದ ಖರ್ಗೆ ಹೇಳಿಕೆ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕೈ ನಾಯಕರು!

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Karge)...

ಬೆಂಗಳೂರು–ಗೋವಾ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಸಾಧ್ಯತೆ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಗೋವಾದ ಮಡಗಾಂವ್ (Bengaluru -...

Related Articles