ಬೆಂಗಳೂರು : ಇತ್ತೀಚೆಗೆ ನಿಧನರಾದ ನಾಡಿನ ಹೆಮ್ಮೆಯ ಹಿರಿಯ ಚಿತ್ರಕಲಾವಿದ ಕೆ.ಟಿ.ಶಿವಪ್ರಸಾದ್ (K.T.ShivaPrasad) ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿಯ (Lalithakala Academy) ವತಿಯಿಂದ ಜುಲೈ 19 ರಂದು ಬೆಳಿಗ್ಗೆ 11:00 ಗಂಟೆಗೆ ಬೆಂಗಳೂರಿನ ಕಸ್ತೂರಿ ಬಾ ರಸ್ತೆಯಲ್ಲಿರುವ ವೆಂಕಟಪ್ಪ ಆರ್ಟ್ ಗ್ಯಾಲರಿಯಲ್ಲಿ “ನುಡಿ ನಮನ” (Nudinamana) ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಗೌರವ ಸಮರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಿರಿಯ ಕಲಾವಿದರಾದ ಕೆ.ಟಿ.ಶಿವಪ್ರಸಾದ್ ಅವರು ಜೂನ್ 30, 2026ರಂದು ನಿಧನರಾಗಿದ್ದರು. ನಿರಂತರ ಕಲಾ ಆರಾಧಕರಾಗಿದ್ದ ಶ್ರೀಯುತರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹಲವಾರು ಕಲಾ ಪ್ರದರ್ಶನಗಳನ್ನು ಏರ್ಪಡಿಸುವ ಮೂಲಕ ಕಲಾ ಕ್ಷೇತ್ರಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ್ದಾರೆ.
ತಮ್ಮದೇ ಆದ ವಿಶಿಷ್ಟ ಕಲಾಶೈಲಿಯನ್ನು ರೂಢಿಸಿಕೊಂಡಿದ್ದ ಅವರು, ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪ್ರತಿಷ್ಠಿತ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಸೇರಿದಂತೆ ಹಲವು ಪ್ರಮುಖ ಗೌರವಗಳಿಗೆ ಪಾತ್ರರಾಗಿದ್ದರು. ಕರ್ನಾಟಕ ಲಲಿತಕಲಾ ಅಕಾಡೆಮಿ ಆಯೋಜಿಸಿರುವ ಈ ವಿಶೇಷ “ನುಡಿ ನಮನ” ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಹಾಗೂ ಯುವ ಚಿತ್ರಕಲಾವಿದರು ಮತ್ತು ಸಾಹಿತ್ಯ ಕ್ಷೇತ್ರದ ಪ್ರಮುಖ ಲೇಖಕರು ಭಾಗವಹಿಸಿ, ದಿವಂಗತ ಶಿವಪ್ರಸಾದ್ ಅವರೊಂದಿಗಿನ ಒಡನಾಟ ಹಾಗೂ ಕಲಾ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಲಿದ್ದಾರೆ.
ಕಲಾ ಆಸಕ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.