*ಶಾಸಕ ಬಿ.ಝಡ್ . ಜಮೀರ್ ಅಹಮದ್ ಖಾನ್ ಅವರಿಗೆ ಅಹಿಂದ ಕೋಟಾದಲ್ಲಿ ಸಚಿವ ಸ್ಥಾನ – ವಿನೂತನ ಪ್ರತಿಭಟನೆ*

*ಶಾಸಕ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ಅಹಿಂದ ಕೋಟಾದಲ್ಲಿ ಸಚಿವ ಸ್ಥಾನ(Ministerial post) ನೀಡುವಂತೆ ಜಮೀರ್ ಮುಖವಾಡ ಧರಿಸಿ ವಿನೂತನ ಪ್ರತಿಭಟನೆ*

ಬೆಂಗಳೂರು, ಜುಲೈ 4: ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಬಿ.ಜೆಡ್.ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ(in the cabinet) ಅಹಿಂದ ಕೋಟಾದಡಿ ಸಚಿವ ಸ್ಥಾನ(Ministerial post) ನೀಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಆಗ್ರಹಿಸಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಜಮೀರ್ ಅವರ ಮುಖವಾಡ ಧರಿಸಿ ದಲಿತ ನಾಯಕರು ಗಮನ ಸೆಳೆದರು. ಪ್ರೆಸ್ ಕ್ಲಬ್(Press club) ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ(In the press conference) ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ N.ಶಂಕರ್, G.ಮದಿಯರಸನ್ ಹಾಗೂ ದಲಿತ ಸಮುದಾಯದ ಮುಖಂಡರು ಜಮೀರ್ ಖಾನ್ ಅವರಿಗೆ ಅಖಂಡ(Unwavering)ಬೆಂಬಲ ವ್ಯಕ್ತಪಡಿಸಿದರು.
ರಾಜ್ಯ ಸಂಚಾಲಕ N.ಶಂಕರ್ ಮಾತನಾಡಿ, ಶಾಸಕ B.J.ಜಮೀರ್ ಅಹಮದ್ ಖಾನ್ ಬಡವರ ಪರವಾಗಿ ನಿರಂತರವಾಗಿ ಕೆಲಸ ಮಾಡಿರುವ ಜನನಾಯಕರು. ಜಾತಿ, ಧರ್ಮ ಭೇದವಿಲ್ಲದೇ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ಸಮುದಾಯಗಳ ಜನರ ವಿಶ್ವಾಸ ಹಾಗೂ ಪ್ರೀತಿಯನ್ನು ಅವರು ಗಳಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ಸಹಸ್ರಾರು ಬಡ ಕುಟುಂಬಗಳಿಗೆ ಸೂರು(roof) ಕಲ್ಪಿಸುವ ಮೂಲಕ ಜನಪರ ಆಡಳಿತ ನೀಡಿದ್ದರು. ಅವರ ಅನುಭವ ಹಾಗೂ ಜನಸೇವೆಯನ್ನು ಪರಿಗಣಿಸಿ ಮತ್ತೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ಈ ಹಿನ್ನೆಲೆಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ KPCC ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಹಿಂದ ವರ್ಗದ ಜನಸಂಖ್ಯೆ ಗಣನೀಯ(Significant) ಪ್ರಮಾಣದಲ್ಲಿದ್ದು, ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಅಹಿಂದ ಸಮುದಾಯಕ್ಕೆ ಮತ್ತಷ್ಟು ಬಲ ದೊರೆಯಲಿದೆ. ಜೊತೆಗೆ ಪ್ರಾತಿನಿಧ್ಯ ದೊರೆಯುವುದರ ಜೊತೆಗೆ ಕಾಂಗ್ರೆಸ್ ಪಕ್ಷಕ್ಕೂ ರಾಜಕೀಯವಾಗಿ ಅನುಕೂಲವಾಗಲಿದೆ ಎಂದು ಸಮಿತಿಯ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಶಾಸಕ ಬಿ.ಜೆ.ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಮುಖವಾಡ ಧರಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಎನ್.ಶಂಕರ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Hot this week

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ(Central Election) ಆಯೋಗಕ್ಕೆ ಮನವಿ ಎಸ್‍ಐಆರ್(SIR) ದುರ್ಬಳಕೆಗೆ...

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ ಮಕ್ಕಳ ಮೇಲಿನ ದೈಹಿಕ ಹಿಂಸೆ ಪ್ರಕರಣ – ಆರೋಪಿಗಳ ಬಂಧನ

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ(Day care Centre) ಮಕ್ಕಳ ಮೇಲಿನ ದೈಹಿಕ ಹಿಂಸೆ...

ಅಕ್ರಮ ಗಣಿಗಾರಿಕೆಗೆ ಕಡಿವಾಣ- ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಫ್ರೀಡಂ ಪಾರ್ಕ್‌ನಲ್ಲಿ...

ಶ್ರೀ ಬಿ. ಗಜೇಂದ್ರ ಅವರ ನೇತೃತ್ವದ ಪ್ರತಿನಿಧಿ ಮಂಡಳಿಯು ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರನ್ನು ಲೋಕಭವನದಲ್ಲಿ ಭೇಟಿ.

ಕರ್ನಾಟಕ ರಾಜ್ಯ ಜ್ಯೋತಿಷ್ಯರು ಹಾಗೂ ಜ್ಯೋತಿಷ್ಯ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ...

ವೆಲ್ಲೂರು ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿ, ವಿಷೇಶ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ...

Topics

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ(Central Election) ಆಯೋಗಕ್ಕೆ ಮನವಿ ಎಸ್‍ಐಆರ್(SIR) ದುರ್ಬಳಕೆಗೆ...

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ ಮಕ್ಕಳ ಮೇಲಿನ ದೈಹಿಕ ಹಿಂಸೆ ಪ್ರಕರಣ – ಆರೋಪಿಗಳ ಬಂಧನ

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ(Day care Centre) ಮಕ್ಕಳ ಮೇಲಿನ ದೈಹಿಕ ಹಿಂಸೆ...

ಅಕ್ರಮ ಗಣಿಗಾರಿಕೆಗೆ ಕಡಿವಾಣ- ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಫ್ರೀಡಂ ಪಾರ್ಕ್‌ನಲ್ಲಿ...

ವೆಲ್ಲೂರು ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿ, ವಿಷೇಶ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ...

ನಾಡಪ್ರಭು ಕೆಂಪೇಗೌಡರ ದಿನಾಚರಣೆ : ರಾಜಾಜಿನಗರ ವಿಧಾನಸಭಾ ಕ್ಷೇತ್ರ

ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ 517ನೇ ನಾಡಪ್ರಭು...

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA)...

Related Articles