ಕರಾಮುವಿಯಿಂದ ಕೆಪಿಎಸ್‌ಸಿ, ಕೆಇಎ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಬೆಂಗಳೂರು: ಕರ್ನಾಟಕ ರಾಜ್ಯ(Karnataka State) ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆಪಿಎಸ್‌ಸಿ(K P S C)  ಹಾಗೂ ಕೆಇಎ(KEA)  ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯೋಜಿಸಲಾಗಿದ್ದ 50 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು 2026 ನೇ  ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಕರಾಮುವಿಯ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರೋಪ ಸಮಾರಂಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಶುಭಹಾರೈಸಲಿದ್ದಾರೆ.
ಮೈಸೂರು ಮಹಾನಗರಪಾಲಿಕೆ ಆಯುಕ್ತರು ಹಾಗೂ ಹಿರಿಯ ಕೆಎಎಸ್ ಅಧಿಕಾರಿಯಾದ ಎಮ್. ಕೆ. ಸವಿತಾ ಅವರು ಅಧ್ಯಯನ ಪುಸ್ತಕ ಬಿಡುಗಡೆ ಮಾಡಿ ಮುಖ್ಯ ಭಾಷಣ ಮಾಡಲಿದ್ದಾರೆ. ಕರಾಮುವಿ ವ್ಯವಸ್ಥಾಪನ ಮಂಡಳಿ ಸದಸ್ಯ ಆರ್. ಮಂಜು ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎ.ಪಿ. ಜ್ಞಾನಪ್ರಕಾಶ್ ವಹಿಸಲಿದ್ದಾರೆ. ಸಮಾರಂಭದಲ್ಲಿ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್.ಕೆ, ಪರೀಕ್ಷಾಂಗ ಕುಲಸಚಿವ ಡಾ. ಸಿ.ಎಸ್. ಆನಂದಕುಮಾರ್, ಶೈಕ್ಷಣಿಕ ಡೀನ್ ಪ್ರೊ. ಎಂ. ರಮಾನಾಥಂ ನಾಯ್ಡು, ಅಧ್ಯಯನ ಕೇಂದ್ರದ ಡೀನ್ ಡಾ. ಎನ್. ಆನಂದ ಗೌಡ ಹಾಗೂ ಹಣಕಾಸು ಅಧಿಕಾರಿ ಡಾ. ಎಸ್. ನಿರಂಜನ್ ರಾಜ್ ಅವರು ಉಪಸ್ಥಿತರಿರಲಿದ್ದಾರೆ.
ಈ ತರಬೇತಿಯು 2026 ನೇ ಜುಲೈ  31 ರಿಂದ ಪ್ರಾರಂಭವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸುಮಾರು 300 ಅಭ್ಯರ್ಥಿಗಳು ಸಕ್ರಿಯವಾಗಿ ತರಬೇತಿ ಪಡೆದುಕೊಂಡಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles