ಇಸ್ರೋ ಕೇಂದ್ರ ಕಛೇರಿಗೆ ಬಂದಿರುವ ಹುಸಿ ಬಾಂಬ್ ಬೆದರಿಕೆ ಸಂದೇಶದ ಪರಿಶೀಲನೆ

ಇಸ್ರೋ ಕೇಂದ್ರ ಕಛೇರಿಗೆ ಬಂದಿರುವ ಹುಸಿ ಬಾಂಬ್ ಬೆದರಿಕೆ(|Threat) ಸಂದೇಶದ ಪರಿಶೀಲನೆ

ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆಯಲ್ಲಿ ಅಂತರಿಕ್ಷಾ ಭವನದ ಇಸ್ರೋ ಕೇಂದ್ರ ಕಛೇರಿಗೆ ದಿನಾಂಕ:02/07/2026 ರಂದು ಒಂದು ಇ-ಮೇಲ್ ಐಡಿಯಿಂದ ಇಸ್ರೋ ಕೇಂದ್ರ ಕಛೇರಿಯ ಇ-ಮೇಲ್ ಐಡಿಗಳಿಗೆ(e-mail ID) ಇಸ್ರೋ ಕಛೇರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಸಂದೇಶ ಬಂದಿದ್ದು, ಸದರಿ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕೂಡಲೆ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ಮಾಡಲಾಗಿ, ಇ-ಮೇಲ್ ಸಂದೇಶದಲ್ಲಿ ತಿಳಿಸಿರುವಂತೆ ಯಾವುದೇ ರೀತಿಯ ವಿಶೇಷತೆ ಇರುವುದಿಲ್ಲ. ಇದೊಂದು ಹುಸಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶವಾಗಿದ್ದು, ಈ ಸಂಬಂಧ ಇಸ್ರೋ ಕೇಂದ್ರ ಕಛೇರಿಯ ಆಡಳಿತಾಧಿಕಾರಿಯವರು ನೀಡಿದ ದೂರಿನ ಮೇರೆಗೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ. ಪ್ರಕರಣದ ಆರೋಪಿಯ ಪತ್ತೆಗಾಗಿ ಠಾಣೆಯ ಅಧಿಕಾರಿ ಮತ್ತು  ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಈ ತಂಡವು ತಾಂತ್ರಿಕ ಸಹಾಯದಿಂದ ಮಾಹಿತಿ ಸಂಗ್ರಹಿಹಿಸಿ, ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ತೆರಳಿ, ಇಸ್ರೋ ಕಛೇರಿಗೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇ-ಮೇಲ್ ಸಂದೇಶ ಕಳುಹಿಸಿದ್ದ ವ್ಯಕ್ತಿಯನ್ನು ಪತ್ತೆ ಮಾಡಿ, ವಶಕ್ಕೆ ಪಡೆದು ಆತನ ಬಳಿಯಿದ್ದ ಎಲೆಕ್ಟ್ರಾನಿಕ್ ಸಾಧನವನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ಮಾಡಿ ನೋಡಲಾಗಿ, ಈತನೇ ಬೆಂಗಳೂರಿನ ಇಸ್ರೋ ಕೇಂದ್ರ ಕಛೇರಿಗೆ ಇ-ಮೇಲ್ ಮೂಲಕ ಬಾಂಬ್ ಬ್ಲಾಸ್ಟ್ ಸಂದೇಶವನ್ನು ರವಾನಿಸಿರುವುದು ಕಂಡುಬರುತ್ತದೆ. ಆ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿಚಾರಣೆ ಮಾಡಲಾಗಿ ಆತನು ಮಾನಸಿಕ ಅಸ್ವಸ್ಥನೆಂದು ತಿಳಿದು ಬಂದಿರುತ್ತದೆ. ಈ ಕೃತ್ಯವೆಸಗಲು ಉಪಯೋಗಿಸಿದ್ದ ಎಲೆಕ್ಟ್ರಾನಿಕ್ ಸಾಧನವನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Hot this week

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA)...

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್

ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು...

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

Topics

ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03 :ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ (Higher Education)...

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಬೆಂಗಳೂರು, ಜುಲೈ 03...

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಂಗಳೂರು, ಜುಲೈ 03 : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ, ಕರ್ನಾಟಕ...

Related Articles