ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ‌ ರಸ್ತೆ ರಾಜಕಾಲುವೆ ದುರಸ್ತಿ, ಸೂಕ್ತ ನಿರ್ವಹಣೆಗಾಗಿ ಒತ್ತಾಯಿಸಿ ಪ್ರತಿಭಟನೆ

ಬ್ಯಾಟರಾಯನಪುರ : ಕ್ಷೇತ್ರದ ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ‌ ರಸ್ತೆ ರಾಜಕಾಲುವೆ ದುರಸ್ತಿ ಮತ್ತು ಸೂಕ್ತ ನಿರ್ವಹಣೆಗಾಗಿ ಒತ್ತಾಯಿಸಿ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ನೇತೃತ್ವದಲ್ಲಿ ಸೋಮವಾರ ವಿದ್ಯಾ ನಗರ ಕ್ರಾಸ್ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಎಚ್.ಸಿ.ತಮ್ಮೇಶ್ ಗೌಡ ಮಾತನಾಡಿ ‘ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ ರಸ್ತೆಯಲ್ಲಿನ ರಾಜಕಾಲುವೆ ತೀರಾ ಹದಗೆಟ್ಟ ಸ್ಥಿತಿಯಲ್ಲಿದ್ದು, ಮಳೆ ನೀರು ಸಮರ್ಪಕ ರೀತಿಯಲ್ಲಿ ರಾಜಕಾಲುವೆಯಲ್ಲಿ ಹರಿಯುತ್ತಿಲ್ಲ, ರಾಜಕಾಲುವೆಯಲ್ಲಿ ಕಸ ಕಟ್ಟಿಕೊಂಡು ನೀರಿನ ಹರಿವಿಗೆ ಅಡ್ಡಿಯಾಗುತ್ತಿರುವುದರಿಂದ ಕಾಲುವೆಯಲ್ಲಿ ಹರಿಯಬೇಕಿರುವ ನೀರು ಜನವಸತಿ ಪ್ರದೇಶಗಳಲ್ಲಿ ಹರಿಯುತ್ತಿದೆ. ಮಳೆ ಬಂತೆಂದರೆ ಸಾಕು ದೊಡ್ಡ ಆವಾಂತರ ಸೃಷ್ಟಿಯಾಗಿ, ಜನಸಾಮಾನ್ಯರ ಬದುಕಿನ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಕುರಿತು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆಯ ತೀವ್ರತೆಯನ್ನು ಅರಿತು ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ವಿದ್ಯಾ ನಗರ ಕ್ರಾಸ್ ವೃತ್ತದಲ್ಲಿಂದು ಪಕ್ಷದ ಕಾರ್ಯಕರ್ತರೊಟ್ಟಿಗೆ ಪ್ರತಿಭಟನೆ ನಡೆಸುವ ಮೂಲಕ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತರಲಾಗುತ್ತಿದೆ. ಸ್ಥಳೀಯ ಶಾಸಕರು ಸಮಸ್ಯೆಗಳ ವಿರುದ್ಧ ಪ್ರತಿಭಟನೆ ಮಾಡುವವರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದು, ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವವರ ವಿರುದ್ಧ ಪೋಲೀಸರನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸದರಿ ರಾಜಕಾಲುವೆ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದರೆ ಮುಂದಿನ ಹೋರಾಟದ ದಿಕ್ಕು ತೀವ್ರವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹುಣಸಮಾರನಹಳ್ಳಿ ಪುರಸಭೆ ಸಿಇಓ ಕಾಂತರಾಜು, ಪ್ರತಿಭಟನಾಕಾರರಿಂದ ಮನವಿಪತ್ರ ಸ್ವೀಕರಿಸಿದ ನಂತರ ಮಾತನಾಡಿ ‘ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ ರಸ್ತೆ ರಾಜಕಾಲುವೆ ದುರಸ್ತಿಗಾಗಿ ಅಗತ್ಯ ಕ್ರಮ ಕೈಗೊಂಡು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕಾಂತರಾಜು ಅವರ ಭರವಸೆಯ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಬ್ಯಾಟರಾಯನಪುರ ಗ್ರಾ. ಮಂಡಲ ಬಿಜೆಪಿ ಅಧ್ಯಕ್ಷ ದೊಡ್ಡಜಾಲ ಹನುಮಂತುಗೌಡ, ಪ್ರಧಾನ ಕಾರ್ಯದರ್ಶಿ ಬೇಗೂರು ಮಹೇಶ್, ಶ್ರೀಕಂಠಮೂರ್ತಿ, ತಾ.ಪಂ. ಮಾಜಿ ಸದಸ್ಯ ಬಿ.ನಾಗರಾಜ್ ಬಾಬು, ಬೆಟ್ಟಹಲಸೂರು ಗ್ರಾ.ಪಂ‌.ಮಾಜಿ‌ ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್, ಗ್ರಾ.ಮಂಡಲ ಯುವ ಮೋರ್ಚಾ ಅಧ್ಯಕ್ಷ ತಿಮ್ಮೇಗೌಡ, ಬ್ಯಾಟರಾಯನಪುರ ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಗೌಡ, ಬಿಜೆಪಿ ಮುಖಂಡರಾದ ರವಿ, ಶಾಂಭವಿ ರವಿಕುಮಾರ್, ನರೇಂದ್ರ ಬಾಬು, ಮದನ್, ಪ್ರತಾಪ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles