ಅಮೂಲ್ಯವಾದ ಕನ್ನಡ ಮಹಿಳಾ ಹರಿದಾಸರ ಸಾಧನೆ ಸರ್ವರಿಗೂ ತಲುಪಬೇಕು – ವಿದ್ಯಾವಾಚಸ್ಪತಿ ಅರಳುಮಲ್ಲಿಗೆ ಪಾರ್ಥಸಾರಥಿ

  • “ಅಮೂಲ್ಯವಾದ ಕನ್ನಡ ಮಹಿಳಾ ಹರಿದಾಸರ ಸಾಧನೆ ಸರ್ವರಿಗೂ ತಲುಪಬೇಕು – ವಿದ್ಯಾವಾಚಸ್ಪತಿ ಅರಳುಮಲ್ಲಿಗೆ ಪಾರ್ಥಸಾರಥಿ”

ಬೆಂಗಳೂರು : ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್ (ರಿ) ನ ವತಿಯಿಂದ ಬೆಂಗಳೂರಿನ ಶ್ರೀ ಶ್ರೀಪಾದರಾಜ ಮಠದಲ್ಲಿ ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್ (ರಿ.) ಇವರು, ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ, ಬೆಂಗಳೂರು ಹಾಗೂ ದಾಸವಾಣಿ ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ, ಇತ್ತೀಚೆಗೆ ಆಯೋಜಿಸಿದ್ದ, ಮಹಿಳಾ ಹರಿದಾಸರ ಪರಿಚಯದ ಉಪನ್ಯಾಸ ಮಾಲಿಕೆಯಲ್ಲಿ “ಶ್ರೀಮತಿ ನಂಜನಗೂಡು ತಿರುಮಲಾಂಬಾ” ಇವರ ಪರಿಚಯದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ವಿದ್ಯಾವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿಯವರು, ಅಮೂಲ್ಯವಾದ ಕನ್ನಡ ಮಹಿಳಾ ಹರಿದಾಸರ ಸಾಧನೆ ಸರ್ವರಿಗೂ ತಲುಪಬೇಕು, ಅದಕ್ಕೆ ಪೂರಕವಾಗಿ, ಮಹಿಳಾ ಹರಿದಾಸರ ಕೃತಿಗಳನ್ನು ಹೆಚ್ಚು ಹೆಚ್ಚು ಹಾಡುವುದರ ಮೂಲಕ, ಅವುಗಳ ಅರ್ಥ ಚಿಂತನೆ ಮಾಡುವುದರ ಮೂಲಕ ಹಿರಿಯ ಮಹಿಳಾ ಹರಿದಾಸರು ಜನಮಾನಸದಲ್ಲಿ ನೆಲೆ ನಿಲ್ಲುವಂತೆ ಮಾಡಲು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್ (ರಿ) ನವರ ಕಾರ್ಯವನ್ನು ಶ್ಲಾಘಿಸಿದರು. ಕೇವಲ ಪ್ರಾಥಮಿಕ ಶಿಕ್ಷಣ ಪಡೆದ ವಿಧವಾ ಸ್ತ್ರೀಯೊಬ್ಬಳು ಅಂದಿನ ಪ್ರಧಾನ ಮಂತ್ರಿಯಾಗಿದ್ದ ಶ್ರೀಮತಿ ಇಂದಿರಾಗಾಂಧಿಯವರನ್ನು ಭೇಟಿಯಾಗಿ, ಸಮಾಜದಲ್ಲಿ ಪ್ರಕೃತಿ ಸ್ವರೂಪಿಣಿಯಾದ ಸ್ತ್ರೀಗೆ ದೊರೆಯಬೇಕಾದ ಗೌರವದ ಸ್ಥಾನಮಾನದ ಬಗ್ಗೆ “ಅಂದಿನ ದಿನಮಾನದಲ್ಲಿ, ಸಹೋದರಿಗೆ ಒಡನಾಟ, sisterhood ಬಗ್ಗೆ” ವಿವರಿಸಿದ ಧೈರ್ಯದ ಬಗ್ಗೆ ಶ್ಲಾಘಿಸಿ, sisterhood ಪರಿಕಲ್ಪನೆ ಇಂದಿನ ದಿನಗಳಲ್ಲೂ ತುಂಬ ಪ್ರಸ್ತುತವಾಗಿದೆ ಎಂದರು. ಹರಿದಾಸ ಸಾಹಿತ್ಯದ ಕೃತಿಗಳ ಪ್ರಕಟಣೆಯ ಬಗ್ಗೆ ಮೈಸೂರಿನ ಮಹಾರಾಜರಿಗೆ ವಿವರಿಸಿ, ಅವರಿಂದ ಧನಸಹಾಯ ಪಡೆದು, ಕನ್ನಡದ ಕೃತಿಗಳ ಪ್ರಕಾಶನ ಕಾರ್ಯ ನಿರ್ವಹಿಸಿದ ಗಟ್ಟಿಗಿತ್ತಿ ಎಂಬುದಾಗಿ ತಿಳಿಸಿದರು.
ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್ (ರಿ) ವತಿಯಿಂದ ಕನ್ನಡ ಮಹಿಳಾ ಹರಿದಾಸರ ಪರಿಚಯದ ಉಪನ್ಯಾಸ ಮಾಲಿಕೆಯಲ್ಲಿ ಡಾ. ವೃಂದಾ ಸಂಗಮ್ ಇವರು, “ಶ್ರೀಮತಿ ನಂಜನಗೂಡು ತಿರುಮಲಾಂಬಾ” ಇವರು ಕನ್ನಡ ಪುಸ್ತಕಗಳ ಲೇಖಕಿಯಾಗಿ, ಪ್ರಕಾಶಕಿಯಾಗಿ, ನಾಟಕಕಾರ್ತಿಯಾಗಿ ಕನ್ನಡ ಪತ್ರಿಕೆಯ ಸಂಪಾದಕಿಯಾಗಿ ಹೆಸರುವಾಸಿಯಾಗಿದ್ದಾರೆ. ಈ ಶತಮಾನದ ಪ್ರಥಮ ಕನ್ನಡ ಲೇಖಕಿ ಎಂದು ದಾಖಲಾಗಿದ್ದಾರೆ. ಬಾಲ ವಿಧವೆಯಾಗಿ, ಕೇವಲ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಪಡೆದು, ಗ್ರಂಥಾವಲೋಕನದಲ್ಲಿ ಆಸಕ್ತಿ ಹೊಂದಿದವರಾಗಿ, ಕನ್ನಡದಲ್ಲಿ ಸುಮಾರು ಹತ್ತು ಪುಸ್ತಕಗಳನ್ನು ಬರೆದಿದ್ದು, ಶೇಷಾದ್ರಿಶಯನ, ಶೇಷಗಿರಿವಾಸ ಮುಂತಾದ ಅಂಕಿತಗಳಿಂದ ಭದ್ರಗೀತಾವಲಿ, ಭಕ್ತಿಗೀತಾವಳಿ ಎಂಬ ಕೃತಿ ರಚನೆ ಮಾಡಿದ್ದಾರೆ. ಅವರ ಕೃತಿಗಳಲ್ಲಿನ ಸೂಕ್ತಿ ವಿಶೇಷ ಅಂಶಗಳು, ಕವಿತಾ ಚಾತುರ್ಯ ಮುಂತಾದವುಗಳೊಂದಿಗೆ ಅವರ ಜೀವನ ಹಾಗೂ ಕೃತಿಗಳ ಪರಿಚಯವನ್ನು ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಶ್ರೀಮತಿ ಮಾನಸ ಜಯರಾಜ್ ಕುಲ್ಕರ್ಣಿ ‘ಶ್ರೀಮತಿ ನಂಜನಗೂಡು ತಿರುಮಲಾಂಬಾ’ ಇವರ ಕೃತಿಗಳಿಗೆ ರಾಗ ಸಂಯೋಜನೆ ಮಾಡಿ ಹಾಡಿದರು. ಡಾ. ಸುಧಾ ದೇಶಪಾಂಡೆ ‘ಶ್ರೀಮತಿ ನಂಜನಗೂಡು ತಿರುಮಲಾಂಬಾ” ಇವರ ಕೃತಿಗಳಿಗೆ ಅರ್ಥಾನುಸಂಧಾನ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯ ಶ್ರೀಯುತ ಲಕ್ಷ್ಮೀನಾರಾಯಣಾಚಾರ್ ವಹಿಸಿದ್ದರು. ಡಾ. ವಿದ್ಯಾಶ್ರೀ ಕುಲ್ಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿದರು. ಮೈತ್ರೇಯಿ ಉಪಾಧ್ಯಕ್ಷರಾದ ಡಾ. ಶಾಂತಾ ರಘೋತ್ತಮ, ದಾಸವಾಣಿ ಕರ್ನಾಟಕದ ಶ್ರೀ ಜಯರಾಜ್ ಕುಲ್ಕರ್ಣಿ ಹಾಗೂ ಇನ್ನಿತರ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles